AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆಗೆ ಟ್ರಂಪ್​ಗೆ ಪ್ರಧಾನಿ ಮೋದಿ ಶುಭಾಶಯ

ಅಮೆರಿಕದ 250ನೇ ಐತಿಹಾಸಿಕ ಸ್ವಾತಂತ್ರ್ಯ ದಿನೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅಲ್ಲಿನ ನಾಗರಿಕರಿಗೆ ಆತ್ಮೀಯವಾಗಿ ಶುಭ ಕೋರಿದ್ದಾರೆ. 140 ಕೋಟಿ ಭಾರತೀಯರ ಪರವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅಮೆರಿಕದ ಜನತೆಗೆ ನಿಮ್ಮ ದೇಶದ ಐತಿಹಾಸಿಕ 250ನೇ ಸ್ವಾತಂತ್ರ್ಯ ದಿನೋತ್ಸವದ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ ಎಂದು ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆಗೆ ಟ್ರಂಪ್​ಗೆ ಪ್ರಧಾನಿ ಮೋದಿ ಶುಭಾಶಯ
Pm Modi With Trump
ಸುಷ್ಮಾ ಚಕ್ರೆ
|

Updated on: Jul 04, 2026 | 9:10 PM

Share

ನವದೆಹಲಿ, ಜುಲೈ 4: ಅಮೆರಿಕದ (USA) ಐತಿಹಾಸಿಕ 250ನೇ ಸ್ವಾತಂತ್ರ್ಯ ದಿನೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅಲ್ಲಿನ ನಾಗರಿಕರಿಗೆ ಭಾರತದ 140 ಕೋಟಿ ಜನರ ಪರವಾಗಿ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಭಾರತ-ಅಮೆರಿಕ ದೇಶಗಳ ಈ ಗಾಢ ಸ್ನೇಹವು ಜಾಗತಿಕ ಒಳಿತಿಗಾಗಿ ಕೆಲಸ ಮಾಡುವ ಒಂದು ದೊಡ್ಡ ಶಕ್ತಿಯಾಗಿದೆ ಎಂದು ಮೋದಿ ಬಣ್ಣಿಸಿದ್ದಾರೆ.

ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಭಾರತ ಮತ್ತು ಅಮೆರಿಕ ಕೇವಲ ಕಾರ್ಯತಂತ್ರದ ಪಾಲುದಾರಿಕೆಯನ್ನಷ್ಟೇ ಹೊಂದಿಲ್ಲ, ಬದಲಿಗೆ ಪ್ರಜಾಪ್ರಭುತ್ವ, ಕಾನೂನಿನ ಆಡಳಿತ ಮತ್ತು ಜನರ ಮಿತಿಯಿಲ್ಲದ ಸಾಮರ್ಥ್ಯದ ಮೇಲಿನ ಸಮಾನ ಬದ್ಧತೆಯನ್ನು ಹಂಚಿಕೊಂಡಿವೆ ಎಂದು ಒತ್ತಿಹೇಳಿದ್ದಾರೆ.

“140 ಕೋಟಿ ಭಾರತೀಯರ ಪರವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅಮೆರಿಕದ ಜನತೆಗೆ ನಿಮ್ಮ ದೇಶದ ಐತಿಹಾಸಿಕ 250ನೇ ಸ್ವಾತಂತ್ರ್ಯ ದಿನೋತ್ಸವದ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ. ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ಕೇವಲ ಕಾರ್ಯತಂತ್ರದ ಪಾಲುದಾರಿಕೆಗಿಂತ ಹೆಚ್ಚಿನದನ್ನು ಹಂಚಿಕೊಂಡಿವೆ. ಪ್ರಜಾಪ್ರಭುತ್ವ, ಕಾನೂನಿನ ಆಡಳಿತದ ಮೇಲಿನ ನಮ್ಮ ನಂಬಿಕೆ ಮತ್ತು ನಮ್ಮ ಜನರ ಅಪಾರ ಸಾಮರ್ಥ್ಯವು ನಮ್ಮ ಸ್ನೇಹವನ್ನು ಜಾಗತಿಕ ಒಳಿತಿಗಾಗಿ ಒಂದು ಶಕ್ತಿಯನ್ನಾಗಿ ಮಾಡಿದೆ” ಎಂದು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ

ಭಾರತ-ಅಮೆರಿಕ ಬಾಂಧವ್ಯ ಗಟ್ಟಿಯಾಗುವ ಆಶಯ:

ಮುಂಬರುವ 250 ವರ್ಷಗಳು ಅಮೆರಿಕಕ್ಕೆ ಹೆಚ್ಚಿನ ಸಮೃದ್ಧಿ, ಶಾಂತಿ ಮತ್ತು ಪ್ರಗತಿಯನ್ನು ತರಲಿ ಹಾಗೂ ಉಭಯ ದೇಶಗಳ ನಡುವಿನ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿ ಎಂದು ಪ್ರಧಾನಿ ಮೋದಿ ಆಶಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ
ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ
ಪ್ರಧಾನ್ ರಾಜೀನಾಮೆ ಕ್ರೆಡಿಟ್ ಬಗ್ಗೆ ಬಿಕೆ ಹರಿಪ್ರಸಾದ್ ಹೇಳಿದ್ದಿಷ್ಟು
ಪ್ರಧಾನ್ ರಾಜೀನಾಮೆ ಕ್ರೆಡಿಟ್ ಬಗ್ಗೆ ಬಿಕೆ ಹರಿಪ್ರಸಾದ್ ಹೇಳಿದ್ದಿಷ್ಟು
ಪ್ರಧಾನ್ ರಾಜೀನಾಮೆ ನೀಡಿದ್ರೂ ಸಿಜೆಪಿಗಿಲ್ಲ ಸಮಾಧಾನ
ಪ್ರಧಾನ್ ರಾಜೀನಾಮೆ ನೀಡಿದ್ರೂ ಸಿಜೆಪಿಗಿಲ್ಲ ಸಮಾಧಾನ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತನಕ ಹೋರಾಡಿದ ಸಿಜೆಪಿಯ ಮುಂದಿನ ನಡೆ ಏನು?
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತನಕ ಹೋರಾಡಿದ ಸಿಜೆಪಿಯ ಮುಂದಿನ ನಡೆ ಏನು?