ಭಾರತೀಯರಿಗೆ ಗಣರಾಜ್ಯೋತ್ಸವದ ಶುಭ ಕೋರಿದ ಪ್ರಧಾನಿ ಮೋದಿ

ಇಡೀ ದೇಶ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಮುಳುಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯರಿಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ.

ಭಾರತೀಯರಿಗೆ ಗಣರಾಜ್ಯೋತ್ಸವದ ಶುಭ ಕೋರಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ

Updated on: Jan 26, 2021 | 9:09 AM

ದೆಹಲಿ: ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ದೇಶದಾದ್ಯಂತ 72ನೇ ಗಣರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಆದರೆ ಸಂಭ್ರಮಕ್ಕೆ ಕೊರತೆ ಇಲ್ಲ. ಇಡೀ ದೇಶ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ಮುಳುಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯರಿಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ.

ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ. ಭಾರತೀಯರಿಗೆ ಗಣರಾಜ್ಯೋತ್ಸವದ ಶುಭಾಶಯಗಳು, ಜೈ ಹಿಂದ್ ಎಂದು ಬರೆದುಕೊಂಡಿದ್ದಾರೆ.