ದೇಶದ ಪ್ರಗತಿಗೆ ಅಭೂತಪೂರ್ವ ಕೊಡುಗೆ ನೀಡುತ್ತಿರುವ ಕರ್ನಾಟಕಕ್ಕೆ ಸಂಕ್ರಾಂತಿಯ ಶುಭಾಶಯ: ಪ್ರಧಾನಿ ಮೋದಿ ಕನ್ನಡದಲ್ಲಿ ಟ್ವೀಟ್

Makar Sankranti 2022 PM Modi: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಜನತೆಗೆ ಮಕರ ಸಂಕ್ರಾಂತಿಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಮೊದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಧಾನಿಗೆ ಸಂಕ್ರಾಂತಿಯ ಶುಭಾಶಯ ತಿಳಿಸಿ ಟ್ವೀಟ್ ಮಾಡಿದ್ದರು.

ದೇಶದ ಪ್ರಗತಿಗೆ ಅಭೂತಪೂರ್ವ ಕೊಡುಗೆ ನೀಡುತ್ತಿರುವ ಕರ್ನಾಟಕಕ್ಕೆ ಸಂಕ್ರಾಂತಿಯ ಶುಭಾಶಯ: ಪ್ರಧಾನಿ ಮೋದಿ ಕನ್ನಡದಲ್ಲಿ ಟ್ವೀಟ್
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)

ಕರ್ನಾಟಕದಲ್ಲಿ ಇಂದು ಸಡಗರ ಸಂಭ್ರಮದಿಂದ ಮಕರ ಸಂಕ್ರಾಂತಿಯನ್ನು (Makar Sankranti 2022) ಆಚರಿಸಲಾಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಕರ್ನಾಟಕದ ಜನರಿಗೆ ಸಂಕ್ರಾಂತಿಯ ಶುಭಾಶಯಗಳನ್ನು ಕೋರಿದ್ದಾರೆ. ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ, ರಾಷ್ಟ್ರದ ಏಳ್ಗೆಗೆ ಉತ್ತಮ ಕೊಡುಗೆ ನೀಡುತ್ತಿರುವ ಕರ್ನಾಟಕಕ್ಕೆ ಸಂಕ್ರಾಂತಿಯ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಿ ತಮ್ಮ ಟ್ವೀಟ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ (CM Bommai) ಟ್ವೀಟ್ ಉಲ್ಲೇಖಿಸಿ, ಕೇಂದ್ರವು ರಾಜ್ಯಕ್ಕೆ ಬೆನ್ನೆಲುಬಾಗಿರುತ್ತದೆ ಎಂದು ಭರವಸೆ ನೀಡಿದ್ದಾರೆ. ‘‘ರಾಷ್ಟ್ರದ ಪ್ರಗತಿಗೆ ಅಭೂತಪೂರ್ವ ಕೊಡುಗೆ ನೀಡುತ್ತಿರುವ ಕರ್ನಾಟಕದ ನನ್ನ ಸಹೋದರರು ಮತ್ತು ಸಹೋದರಿಯರಿಗೆ ಮಕರ ಸಂಕ್ರಾಂತಿಯ ಶುಭಾಶಯಗಳು. ರಾಜ್ಯದ ಜನರ ಸಬಲೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸದಾ ಶ್ರಮಿಸಲಿವೆ’’ ಎಂದು ಪ್ರಧಾನಿ ತಮ್ಮ ಟ್ವೀಟ್​ನಲ್ಲಿ ಬರೆದಿದ್ದಾರೆ.

ಪ್ರಧಾನಿ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಪ್ರಧಾನಿಗೆ ಶುಭಾಶಯ ತಿಳಿಸಿದ್ದ ಮುಖ್ಯಮಂತ್ರಿ ಬೊಮ್ಮಾಯಿ: ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿಗೆ ಸಂಕ್ರಾಂತಿಯ ಶುಭಾಶಯಗಳನ್ನು ತಿಳಿಸಿದ್ದರು. ಜತೆಗೆ ದೀರ್ಘ ಕಾಲದಿಂದ ಅನುಮತಿಗೆ ಕಾದಿದ್ದ ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆಯ 18,78,671 ವಸತಿ ರಹಿತರಿಗೆ ಮತ್ತು 6,61,535 ನಿವೇಶನ ರಹಿತ ಕುಟುಂಬಗಳ ಸಿಂಕ್ರನೈಸೇಶನ್​ಗೆ ಅನುಮತಿ ನೀಡಿದ್ದಕ್ಕೆ ಸಿಎಂ ಪ್ರಧಾನಿಗೆ ಧನ್ಯವಾದ ಸಲ್ಲಿಸಿದ್ದರು. ಇದನ್ನು ಉಲ್ಲೇಖಿಸಿ ಪ್ರಧಾನಿ, ಕೇಂದ್ರವು ಜನರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರದೊಂದಿಗೆ ಎಂದಿಗೂ ಶ್ರಮಿಸಲಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:

ಕರ್ನಾಟಕದಲ್ಲಿಯೂ ಗುಜರಾತ್ ಮಾದರಿಯಲ್ಲಿ ಸಚಿವ ಸಂಪುಟ ರಚನೆಯಾಗಲಿ: ಎಂಪಿ ರೇಣುಕಾಚಾರ್ಯ

ಯೋಗಿ ಆದಿತ್ಯನಾಥ್ ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಆಯ್ಕೆ ಮಾಡಿಕೊಂಡಿರುವ ಕ್ಷೇತ್ರದ ರಾಜಕೀಯ ಇತಿಹಾಸ ಇಲ್ಲಿದೆ ನೋಡಿ

Click on your DTH Provider to Add TV9 Kannada