ಮೀರಾ ಮಾಂಝಿಗೆ ಪತ್ರ ಬರೆದ ಪ್ರಧಾನಿ ಮೋದಿ: ಕುಟುಂಬಸ್ಥರಿಗೆ ಉಡುಗೊರೆ

ಜನವರಿ 22 ರಂದು ರಾಮಮಂದಿರದ ಮಹಾ ಉದ್ಘಾಟನೆಗೆ ಮುನ್ನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಲು ಅಯೋಧ್ಯೆಗೆ ಭೇಟಿ ನೀಡಿದ ವೇಳೆ ಪ್ರಧಾನಿ ಮೋದಿ ಅವರು ಡಿಸೆಂಬರ್ 30 ರಂದು ಮೀರಾ ಮಾಂಝಿ ಅವರ ಮನೆಗೆ ಭೇಟಿ ನೀಡಿ ಚಹಾ ಸೇವಿಸಿದ್ದರು. ಇದೀಗ ಮೀರಾ ಮಾಂಝಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆಯುವುದರೊಂದಿಗೆ ಉಡುಗೊರೆಗಳನ್ನು ಸಹ ಕಳುಹಿಸಿಕೊಟ್ಟಿದ್ದಾರೆ.

ಮೀರಾ ಮಾಂಝಿಗೆ ಪತ್ರ ಬರೆದ ಪ್ರಧಾನಿ ಮೋದಿ: ಕುಟುಂಬಸ್ಥರಿಗೆ ಉಡುಗೊರೆ
ಮೀರಾ ಮಾಂಝಿಗೆ ಪ್ರಧಾನಿ ಮೋದಿ ನೀಡಿದ ಉಡುಗೊರೆ
Follow us
ಗಂಗಾಧರ​ ಬ. ಸಾಬೋಜಿ
|

Updated on: Jan 03, 2024 | 9:42 PM

ದೆಹಲಿ, ಜನವರಿ 03: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇತ್ತೀಚೆಗೆ ಅಯೋಧ್ಯೆಗೆ ಭೇಟಿ ನೀಡಿದಾಗ ಉಜ್ವಲ ಯೋಜನೆಯ 10 ಕೋಟಿ ಫಲಾನುಭವಿಯಾಗಿದ್ದ ಸೂರಜ್ ಮತ್ತು ಮೀರಾ ಮಾಂಝಿ (Mira Manjhi) ಅವರ ಕುಟುಂಬವನ್ನು ಭೇಟಿ ಮಾಡಿದ್ದರು. ಇದೀಗ ಮೀರಾ ಮಾಂಝಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದಿದ್ದಾರೆ. ಜೊತೆಗೆ ಚಹಾ-ಸೆಟ್, ವಿವಿಧ ಬಣ್ಣದ ಡ್ರಾಯಿಂಗ್ ಬುಕ್​ ಮತ್ತು ಇತರೆ ಉಡುಗೊರೆಗಳನ್ನು ಸಹ ಕಳುಹಿಸಿಕೊಟ್ಟಿದ್ದಾರೆ.

ಜನವರಿ 22 ರಂದು ರಾಮಮಂದಿರದ ಮಹಾ ಉದ್ಘಾಟನೆಗೆ ಮುನ್ನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಲು ಅಯೋಧ್ಯೆಗೆ ಭೇಟಿ ನೀಡಿದ ವೇಳೆ ಪ್ರಧಾನಿ ಮೋದಿ ಅವರು ಡಿಸೆಂಬರ್ 30 ರಂದು ಮೀರಾ ಮಾಂಝಿ ಅವರ ಮನೆಗೆ ಭೇಟಿ ನೀಡಿ ಚಹಾ ಸೇವಿಸಿದ್ದರು.

ಪ್ರಧಾನಿ ಮೋದಿ ಬರೆದ ಪತ್ರದಲ್ಲೇನಿದೆ? 

2024ರ ಹೊಸ ವರ್ಷಕ್ಕೆ ನಿಮಗೆ ಮತ್ತು ನಿಮ್ಮ ಎಲ್ಲಾ ಕುಟುಂಬದ ಸದಸ್ಯರಿಗೆ ಶುಭಾಶಯಗಳು. ಭಗವಾನ್ ಶ್ರೀರಾಮನ ಪವಿತ್ರ ನಗರವಾದ ಅಯೋಧ್ಯೆಯಲ್ಲಿ ನಿಮ್ಮನ್ನು ಮತ್ತು ನಿಮ್ಮ ಕುಟುಂಬದ ಸದಸ್ಯರನ್ನು ಭೇಟಿಯಾಗಲು ಮತ್ತು ನೀವು ತಯಾರಿಸಿದ ಚಹಾವನ್ನು ಸೇವಿಸಿದ್ದು ತುಂಬಾ ಸಂತೋಷವಾಗಿದೆ.

ಇದ್ನೂ ಓದಿ: Narendra Modi: ಪ್ರಧಾನಿಯ ಅನಿರೀಕ್ಷಿತ ಭೇಟಿಯಿಂದ ಆವಾಕ್ಕಾದ ಉಜ್ವಲ ಸ್ಕೀಮ್ ಫಲಾನುಭವಿ; ಅಷ್ಟಕ್ಕೂ ಆ ಮಹಿಳೆ ಯಾರು?

ಅಯೋಧ್ಯೆಯಿಂದ ಬಂದ ನಂತರ ಹಲವು ಟಿವಿ ಚಾನೆಲ್‌ಗಳಲ್ಲಿ ನಿಮ್ಮ ಸಂದರ್ಶನ ನೋಡಿದೆ. ನಿಮ್ಮ ಮತ್ತು ಇತರೆ ಕುಟುಂಬದ ಸದಸ್ಯರ ವಿಶ್ವಾಸ ಮತ್ತು ನಿಮ್ಮ ಅನುಭವಗಳನ್ನು ನೀವು ಹಂಚಿಕೊಂಡ ಸರಳ ಮತ್ತು ಸುಲಭವಾದ ವಿಧಾನವನ್ನು ನೋಡಲು ಸಂತೋಷವಾಯಿತು. ನಿಮ್ಮಂತಹ ಕೋಟ್ಯಂತರ ಕುಟುಂಬದ ಸದಸ್ಯರ ಮುಖದಲ್ಲಿನ ಈ ನಿಮ್ಮ ನಗು ನನಗೆ ಸ್ಪೂರ್ತಿ. ಇದು ದೇಶಕ್ಕಾಗಿ ಪೂರ್ಣ ಹೃದಯದಿಂದ ಕೆಲಸ ಮಾಡಲು ನನಗೆ ಹೊಸ ಶಕ್ತಿಯನ್ನು ನೀಡುತ್ತದೆ.

ನೀವು ಉಜ್ವಲ ಯೋಜನೆಯ 10 ಕೋಟಿ ಫಲಾನುಭವಿಗಳಾಗುವುದು ಕೇವಲ ಒಂದು ಅಂಕಿ ಅಂಶವಲ್ಲ, ಬದಲಿಗೆ ಕೋಟ್ಯಂತರ ದೇಶವಾಸಿಗಳ ದೊಡ್ಡ ಕನಸು ಮತ್ತು ಸಂಕಲ್ಪಗಳ ನೆರವೇರಿಕೆಯ ಕೊಂಡಿಯಾಗಿ ನಾನು ನೋಡುತ್ತೇನೆ.

ಇದನ್ನೂ ಓದಿ: ಅಯೋಧ್ಯೆ: ಉಜ್ವಲಾ ಯೋಜನೆಯ ಫಲಾನುಭವಿ ಮನೆಗೆ ಮೋದಿ ಭೇಟಿ; ಚಹಾ ಜತೆ ಚಿಟ್ ಚಾಟ್

ಅಮೃತ ಕಾಲದಲ್ಲಿ, ನಿಮ್ಮಂತಹ ಆಕಾಂಕ್ಷೆಗಳಿಂದ ತುಂಬಿರುವ ಕೋಟ್ಯಂತರ ದೇಶವಾಸಿಗಳ ಚೈತನ್ಯ ಮತ್ತು ಉತ್ಸಾಹವು ಭವ್ಯವಾದ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ನಮ್ಮ ಗುರಿಯನ್ನು ಸಾಧಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ನನಗೆ ಸಂಪೂರ್ಣ ನಂಬಿಕೆ ಇದೆ. ಮಕ್ಕಳು, ಉತ್ತಮ ಆರೋಗ್ಯ ಮತ್ತು ಕುಟುಂಬದ ಉಜ್ವಲ ಭವಿಷ್ಯಕ್ಕಾಗಿ ಹಾರೈಕೆಗಳು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ