AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಣಿಸಬೇಕಾಗಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಕೆಲಹೊತ್ತು ಏರ್​ಪೋರ್ಟ್​ನಲ್ಲೇ ವಿಮಾನ ನಿಂತಿದೆ. ಜಾರ್ಖಂಡ್​ನ ದಿಯೋಘರ್​ ಏರ್​ಪೋರ್ಟ್​ನಲ್ಲಿ ನಿಂತ ವಿಮಾನದ ಸಿಬ್ಬಂದಿ ತಾಂತ್ರಿಕ ದೋಷ ಸರಿಪಡಿಸಿದ ಬಳಿಕ ಮೋದಿ ತೆರಳಿದ್ದಾರೆ.

ಪ್ರಧಾನಿ ಮೋದಿ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ
ಪ್ರಧಾನಿ ಮೋದಿ
ಸುಷ್ಮಾ ಚಕ್ರೆ
|

Updated on: Nov 15, 2024 | 4:51 PM

Share

ರಾಂಚಿ: ಜಾರ್ಖಂಡ್‌ನ ದಿಯೋಘರ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿಮಾನ ತಾಂತ್ರಿಕ ದೋಷವನ್ನು ಎದುರಿಸುತ್ತಿದೆ. ಇದರಿಂದ ಮೋದಿ ದೆಹಲಿಗೆ ಹಿಂದಿರುಗುವುದು ವಿಳಂಬವಾಗಿದೆ. ಇಂದು (ಶುಕ್ರವಾರ) ಮಧ್ಯಾಹ್ನ ಮೋದಿಯವರ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಗೆ ಮರಳುವುದು ವಿಳಂಬವಾಯಿತು. ವಿಮಾನವು ದಿಯೋಘರ್ ವಿಮಾನ ನಿಲ್ದಾಣದಲ್ಲಿ ಸ್ವಲ್ಪ ಸಮಯದವರೆಗೆ ನಿಲ್ಲಬೇಕಾಯಿತು. ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ಮೋದಿ ಇಂದು ಜಾರ್ಖಂಡ್‌ನಲ್ಲಿ ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಇಂದು ಜಾರ್ಖಂಡ್‌ನಿಂದ ಹೊರಡಲು ಸಾಧ್ಯವಾಗಲಿಲ್ಲ. ಏರ್‌ ಟ್ರಾಫಿಕ್‌ ಕಂಟ್ರೋಲ್‌ನಿಂದ ಕ್ಲಿಯರನ್ಸ್‌ ಸಿಗದ ಹಿನ್ನೆಲೆಯಲ್ಲಿ ಅವರ ಹೆಲಿಕಾಪ್ಟರ್ ಅನ್ನು ಅಧಿಕಾರಿಗಳು ತಡೆಹಿಡಿದಿದ್ದರು. ಜಾರ್ಖಂಡ್‌ನ ಮಹಾಗಾಮದಲ್ಲಿ ನಡೆದ ಘಟನೆ ನಡೆದಿದೆ. ಎಟಿಸಿಯಿಂದ ಕ್ಲಿಯರೆನ್ಸ್‌ ಸಿಕ್ಕ ನಂತರ ರಾಹುಲ್‌ ಗಾಂಧಿ ಹೆಲಿಕಾಪ್ಟರ್‌ಗೆ ಟೇಕ್‌ ಆಫ್‌ ಆಗಲು ಅನುಮತಿ ಸಿಕ್ಕಿತು.  45 ನಿಮಿಷಗಳ ವಿಳಂಬದ ನಂತರ ಹೆಲಿಕಾಪ್ಟರ್ ಅನ್ನು ಪ್ರಯಾಣಕ್ಕೆ ರೆಡಿ ಮಾಡಲಾಯಿತು.

ಇದನ್ನೂ ಓದಿ: ಬುಡಕಟ್ಟು ಸಮುದಾಯದ ಸಮಸ್ಯೆ ತಿಳಿಯಲು ಬರಿಗಾಲಲ್ಲೇ ಪ್ರಯಾಣಿಸಿದ್ದರು ಮೋದಿ

“ಪ್ರಧಾನಿ ಮೋದಿ ದಿಯೋಗಢ್‌ನಲ್ಲಿರುವುದರಿಂದ ರಾಹುಲ್ ಗಾಂಧಿಗೆ ಆ ಪ್ರದೇಶವನ್ನು ದಾಟಲು ಅವಕಾಶ ನೀಡಲಿಲ್ಲ. ನಮಗೆ ಕೂಡ ಪ್ರೋಟೋಕಾಲ್ ತಿಳಿದಿದೆ. ಕಾಂಗ್ರೆಸ್ 70 ವರ್ಷಗಳ ಕಾಲ ದೇಶವನ್ನು ಆಳಿತು. ಆದರೆ ಯಾವುದೇ ವಿರೋಧ ಪಕ್ಷದ ನಾಯಕನ ಜೊತೆ ಈ ರೀತಿ ವರ್ತಿಸಲಿಲ್ಲ. ಇದನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಎಂಎಲ್ಎ ಮತ್ತು ಮಹಾಗಾಮಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದೀಪಿಕಾ ಪಾಂಡೆ ಸಿಂಗ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ