AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Mother Health Updates: ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Heeraben Modi Health Update; ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್​ನ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

PM Modi Mother Health Updates: ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಪ್ರಧಾನಿ ನರೇಂದ್ರ ಮೋದಿ ಜತೆ ಅವರ ತಾಯಿ ಹೀರಾಬೆನ್ ಮೋದಿ (ಸಂಗ್ರಹ ಚಿತ್ರ)Image Credit source: PTI
TV9 Web
| Edited By: |

Updated on:Dec 28, 2022 | 3:22 PM

Share

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ  (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್​ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಹೀರಾಬೆನ್ ಅವರ ಆರೋಗ್ಯದಲ್ಲಿ ಬುಧವಾರ ಬೆಳಿಗ್ಗೆ ಏರುಪೇರಾಗಿದೆ. ಹೀಗಾಗಿ ಅವರನ್ನು ಅಹಮದಾಬಾದ್​ನ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮ ವರದಿಗಳು ಉಲ್ಲೇಖಿಸಿವೆ. ತಾಯಿಯ ಅನಾರೋಗ್ಯದ ಸುದ್ದಿ ತಿಳಿದು ನರೇಂದ್ರ ಮೋದಿ ಅವರು ಆಸ್ಪತ್ರೆಗೆ ಭೇಟಿ ನೀಡಲು ದೆಹಲಿಯಿಂದ ಅಹಮದಾಬಾದ್​ಗೆ ಹೊರಟಿದ್ದಾರೆ. ಮೋದಿ ತಾಯಿಯ ಅನಾರೋಗ್ಯದ ಸುದ್ದಿ ತಿಳಿದ ಬೆನ್ನಲ್ಲೇ ಗುಜರಾತ್​​ನ ಅನೇಕ ಶಾಸಕರು ಯುಎನ್ ಮೆಹ್ತಾ ಆಸ್ಪತ್ರೆಗೆ ತೆರಳಿ ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಬುಧವಾರ ಮಧ್ಯಾಹ್ನ 3 ಗಂಟೆಯ ವೇಳೆಗೆ ದೊರೆತ ಮಾಹಿತಿಗಳ ಪ್ರಕಾರ, ಹೀರಾಬೆನ್ ಅವರ ಆರೋಗ್ಯ ಸ್ಥಿರವಾಗಿದೆ.

ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಕುಟುಂಬದವರ ಕಾರು ಮೈಸೂರಿನ ಕಡಕೊಳ ಬಳಿ ಮಂಗಳವಾರ ಅಪಘಾತಕ್ಕೀಡಾಗಿತ್ತು. ಅವರು ಸದ್ಯ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಮೋದಿಯವರ ತಾಯಿಯ ಆರೋಗ್ಯವೂ ಹದಗೆಟ್ಟಿದೆ.

ಲೈವ್ ಅಪ್​ಡೇಟ್ಸ್​: PM Modi Mother News Live: ತಾಯಿ ಹೀರಾಬೆನ್ ಭೇಟಿಗೆ ಅಹಮದಾಬಾದ್ ಆಸ್ಪತ್ರೆಯತ್ತ ಪ್ರಧಾನಿ ಮೋದಿ

ಈ ಹಿಂದೆ 2016ರಲ್ಲಿ ಒಮ್ಮೆ ಹೀರಾಬೆನ್ ಅವರ ಆರೋಗ್ಯ ಹದಗೆಟ್ಟಿತ್ತು. 108 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಗಾಂಧಿನಗರದ ಸಿವಿಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಸಾಮಾನ್ಯ ರೋಗಿಗಳಂತೆ ಆಸ್ಪತ್ರೆಯ ಸಾಮಾನ್ಯ ವೈದ್ಯರ ಬಳಿ ತಪಾಸಣೆಗೆ ಒಳಗಾಗಿದ್ದರು.ಹೀರಾಬೆನ್ ಅವರು ಪ್ರಸ್ತುತ ನರೇಂದ್ರ ಮೋದಿ ಅವರ ಸಹೋದರ ಪಂಕಜ್ ಭಾಯ್ ಅವರೊಂದಿಗೆ ಗಾಂಧಿನಗರದ ನಿವಾಸದಲ್ಲಿ ವಾಸಿಸುತ್ತಿದ್ದಾರೆ.

ಇತ್ತೀಚೆಗಷ್ಟೇ ಹೀರಾಬೆನ್ ಭೇಟಿ ಮಾಡಿದ್ದ ಮೋದಿ

ಪ್ರತಿ ವರ್ಷ ಮೋದಿಯವರು ತಮ್ಮ ಹುಟ್ಟುಹಬ್ಬದಂದು ಗಾಂಧಿನಗರದಲ್ಲಿರುವ ಸಹೋದರನ ನಿವಾಸಕ್ಕೆ ತೆರಳಿ ತಾಯಿಯ ಆಶೀರ್ವಾದ ಪಡೆಯುತ್ತಾರೆ. ಅದರಂತೆ ಈ ವರ್ಷವೂ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದಿದದ್ದರು. ಇದೇ ತಿಂಗಳ ನಾಲ್ಕರಂದು ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೂ ಮುನ್ನ ಮೋದಿ ಅವರು ತಾಯಿನ್ನು ಭೇಟಿಯಾಗಿದ್ದರು. ಮೋದಿ ಜೂನ್ 18 ರಂದು ತಾಯಿ ಹೀರಾಬೆನ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಲು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿದ್ದರು. ಅದಾದ ಬಳಿಕ ಇದೀಗ ಬರೋಬ್ಬರಿ ಐದು ತಿಂಗಳು ನಂತರ ಡಿಸೆಂಬರ್ 4ರಂದು ಮನೆಗೆ ಬಂದಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:14 pm, Wed, 28 December 22

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್