AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಯಿಂದ ಹೊಸ ಪ್ರಯೋಗ; ಬಂಗಾಳ ರ‍್ಯಾಲಿ ವೇಳೆ ವ್ಲಾಗರ್ ಆದ ಪ್ರಧಾನಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ದಿನಗಣನೆ ಶುರುವಾಗಿದೆ. ಚುನಾವಣಾ ರ‍್ಯಾಲಿಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ವ್ಲಾಗರ್ ಆಗಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಹೊಸ ಪ್ರಯೋಗ ನಡೆಸಿದ್ದಾರೆ. ಇದೇ ಮೊದಲ ಬಾರಿಗೆ ತಾವೇ ಕ್ಯಾಮೆರಾದ ಎದುರು ನಿಂತು ಪ್ರಧಾನಿ ಮೋದಿ ತಮ್ಮ ಹಿಂದೆ ಸೇರಿದ್ದ ಜನಸಾಗರವನ್ನು ಪರಿಚಯಿಸುವ ಮೂಲಕ ಪಶ್ಚಿಮ ಬಂಗಾಳದ ಚುನಾವಣಾ ಅಖಾಡದ ಬಗ್ಗೆ ಮಾಹಿತಿ ನೀಡಿದ್ದಾರೆ. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮೋದಿಯಿಂದ ಹೊಸ ಪ್ರಯೋಗ; ಬಂಗಾಳ ರ‍್ಯಾಲಿ ವೇಳೆ ವ್ಲಾಗರ್ ಆದ ಪ್ರಧಾನಿ
Pm Modi Make A VideoImage Credit source: PTI
ಸುಷ್ಮಾ ಚಕ್ರೆ
|

Updated on: Apr 11, 2026 | 8:20 PM

Share

ನವದೆಹಲಿ, ಏಪ್ರಿಲ್ 11: ಪಶ್ಚಿಮ ಬಂಗಾಳದ ಪುರ್ಬಾ ವರ್ಧಮಾನ್‌ನಲ್ಲಿ ತಮ್ಮ ರ‍್ಯಾಲಿಗೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನರನ್ನು ಉದ್ದೇಶಿಸಿ ಒಂದು ವಿಡಿಯೋ ಮಾಡಿ ರಿಲೀಸ್ ಮಾಡಿದ್ದಾರೆ. ಈ ವಿಡಿಯೋ ಮೂಲಕ ಪ್ರಧಾನಿ ಮೋದಿ (PM Modi) ವ್ಲಾಗರ್ ಆಗಿ ಬದಲಾಗಿದ್ದಾರೆ. ಪಶ್ಚಿಮ ಬಂಗಾಳದ ಹೆಲಿಪ್ಯಾಡ್‌ನಲ್ಲಿ ನೆರೆದಿದ್ದ ದೊಡ್ಡ ಜನಸಮೂಹವನ್ನು ಅದ್ಭುತ ದೃಶ್ಯ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಬಿಸಿಲಿನ ಬೇಗೆಯ ಹೊರತಾಗಿಯೂ ಜನರ ಉತ್ಸಾಹ ಕಡಿಮೆಯಾಗದೆ ಹಾಗೆಯೇ ಉಳಿದಿದೆ ಎಂದು ಅವರು ಹೇಳಿದ್ದಾರೆ.

ಬಿಸಿಲಿನ ಬೇಗೆಯ ಹೊರತಾಗಿಯೂ ಮಧ್ಯಾಹ್ನಕ್ಕೂ ಮೊದಲೇ ಹೆಲಿಪ್ಯಾಡ್‌ನಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರು. ಇದು ಈ ದಿನದ ಮೋದಿಯವರ ಮೊದಲ ಸಭೆಯಾಗಿದ್ದು, ಅವರು ಸ್ಥಳಕ್ಕೆ ಬರುವ ಮೊದಲೇ ಹೆಚ್ಚಿನ ಸಂಖ್ಯೆಯ ಜನರು ಅವರಿಗಾಗಿ ಕಾಯುತ್ತಿದ್ದರು ಎಂಬುದನ್ನು ಮೋದಿ ತಮ್ಮ ವಿಡಿಯೋದಲ್ಲಿ ವಿವರಿಸಿದ್ದಾರೆ. ಈ ರೀತಿ ಮೋದಿ ತಮ್ಮ ಚುನಾವಣಾ ರ‍್ಯಾಲಿಯ ನೇರಪ್ರಸಾರ ಮಾಡುತ್ತಾ, ಲೈವ್ ಕಮೆಂಟರಿ ನೀಡಿದ್ದು ಇದೇ ಮೊದಲು. ಈ ಮೂಲಕ ಪ್ರಧಾನಿ ಮೋದಿ ಹೊಸ ಪ್ರಯೋಗ ಮಾಡಿದ್ದಾರೆ.

ಇದನ್ನೂ ಓದಿ: ಬಂಗಾಳಿಗಳನ್ನು ಅಲ್ಪಸಂಖ್ಯಾತರಾಗಲು ಬಿಡುವುದಿಲ್ಲ; ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಭರವಸೆ

ಪುರ್ಬಾ ಬರ್ಧಮಾನ್‌ನಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಗೆ ಮುನ್ನ ಪ್ರಧಾನಿ ಮೋದಿ ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಈ ಸಣ್ಣ ವೀಡಿಯೊ ಕ್ಲಿಪ್ ಅನ್ನು ಪೋಸ್ಟ್ ಮಾಡಿದ್ದಾರೆ. ಇದು ಭಾರೀ ವೈರಲ್ ಆಗಿದೆ. ಈ ಕ್ಲಿಪ್ ಅನ್ನು ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಜನರು ವೀಕ್ಷಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ
ಚಾಮರಾಜನಗರ ಆದಿವಾಸಿಗಳಿಗೆ ಆಹಾರ ಕಿಟ್ ಸ್ಥಗಿತ
ಚಾಮರಾಜನಗರ ಆದಿವಾಸಿಗಳಿಗೆ ಆಹಾರ ಕಿಟ್ ಸ್ಥಗಿತ
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು