Sign In

By signing in or creating an account, you agree with Associated Broadcasting Company's Terms & Conditions and Privacy Policy.

Raksha Bandhan: ನರೇಂದ್ರ ಮೋದಿ ರಾಖಿ ಕಳಿಸಿ, 2024ರ ಚುನಾವಣೆಗೆ ಶುಭ ಕೋರಿದ ಪಾಕಿಸ್ತಾನಿ ಸೋದರಿ

Rakhi: 2024ರ ಮಹಾ ಚುನಾವಣೆಯಲ್ಲಿ ಮೋದಿ ಅವರಿಗೆ ಗೆಲುವು ಸಿಗಲಿ ಎಂದು ಶೇಖ್ ಮೊಹ್ಸಿನ್ ದೇವರಲ್ಲಿ ಪ್ರಾರ್ಥಿಸಿದ್ದಾರೆ.

Raksha Bandhan: ನರೇಂದ್ರ ಮೋದಿ ರಾಖಿ ಕಳಿಸಿ, 2024ರ ಚುನಾವಣೆಗೆ ಶುಭ ಕೋರಿದ ಪಾಕಿಸ್ತಾನಿ ಸೋದರಿ
ಪ್ರಧಾನಿ ಮೋದಿ ಅವರಿಗೆ ರಾಖಿ ಕಟ್ಟುತ್ತಿರುವ ಶೇಖ್ ಮೊಹ್ಸಿನ್ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 08, 2022 | 7:04 AM

ದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ತನ್ನ ಸೋದರ ಎಂದು ಹೇಳುವ ಪಾಕಿಸ್ತಾನ ಮೂಲದ ಖಮರ್ ಮೊಹ್ಸಿನ್ ಶೇಖ್ (Qamar Shaikh Mohsin) ರಕ್ಷಾಬಂಧನಕ್ಕೆ (Raksha Bandhan) ಕೆಲ ದಿನಗಳು ಬಾಕಿಯಿರುವಂತೆಯೇ ರಾಖಿ ಕಳಿಸಿಕೊಟ್ಟಿದ್ದು, ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯಸ್ಸು ಕೋರಿ ಪತ್ರ ಬರೆದಿದ್ದಾರೆ. 2024ರ ಮಹಾ ಚುನಾವಣೆಯಲ್ಲಿ ಗೆಲುವು ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮೋದಿ ಅವರ ಭೇಟಿಗೆ ಈ ವರ್ಷ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಲ್ಲಿರುವ ಅವರು, ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ.

‘ಅವರು (ಪ್ರಧಾನಿ ಮೋದಿ) ಈ ವರ್ಷ ನನ್ನನ್ನು ದೆಹಲಿಗೆ ಕರೆಸಿಕೊಳ್ಳಬಹುದು ಎಂಬ ನಿರೀಕ್ಷೆಯಿದೆ. ನಾನು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದೇನೆ. ಅವರಿಗೆ ಕಟ್ಟಲೆಂದು ನಾನೇ ಸ್ವತಃ ಕಸೂತಿ ವಿನ್ಯಾಸದಲ್ಲಿ ರಾಖಿ ತಯಾರಿಸಿದ್ದೇನೆ’ ಮೊಹ್ಸಿನ್ ಶೇಖ್ ಹೇಳಿದರು. ‘ಮೋದಿ ಅವರು ಇನ್ನೊಮ್ಮೆ ಭಾರತದ ಪ್ರಧಾನಿಯಾಗುತ್ತಾರೆ ಎನ್ನುವ ಬಗ್ಗೆ ನನಗೆ ಯಾವುದೇ ಸಂಶಯವಿಲ್ಲ. ಅವರಿಗೆ ಆ ಸಾಮರ್ಥ್ಯವಿದೆ, ಅವರು ಆ ಸ್ಥಾನಕ್ಕೆ ಅರ್ಹರಾಗಿದ್ದಾರೆ. ಪ್ರತಿಬಾರಿಯೂ ಅವರೇ ಪ್ರಧಾನಿಯಾಗಲಿ ಎಂದು ನಾನು ಹಾರೈಸುತ್ತೇನೆ’ ಎಂದು ನುಡಿದರು.

ಮೋದಿ ಅವರಿಗೆ ಶೇಖ್ ಮೊಹ್ಸಿನ್ ಅವರು ಪ್ರತಿವರ್ಷವೂ ರಾಖಿ ಮತ್ತು ರಕ್ಷಾ ಬಂಧನದ ಶುಭಾಶಯ ಪತ್ರವನ್ನು ಕಳಿಸಿಕೊಡುತ್ತಿದ್ದಾರೆ. ಪಾಕಿಸ್ತಾನ ಮೂಲದ ಶೇಖ್ ಮೊಹ್ಸಿನ್ ಭಾರತೀಯನನ್ನು ಮದುವೆಯಾದ ನಂತರ ಭಾರತದಲ್ಲಿಯೇ ನೆಲೆಸಿದ್ದಾರೆ. ಕಳೆದ 25 ವರ್ಷಗಳಿಂದಲೂ ಮೋದಿ ಅವರಿಗೆ ರಾಖಿ ಕಟ್ಟುತ್ತಿದ್ದೇನೆ ಎಂದು ಹೇಳಿದ್ದಾರೆ.

ಮೋದಿ ಅವರು ಆರ್​ಎಸ್​ಎಸ್​ ಕಾರ್ಯಕರ್ತರಾಗಿದ್ದಾಗ ಮೊದಲ ಬಾರಿಗೆ ರಾಖಿ ಕಟ್ಟಿದ್ದೆ ಎಂದು ಶೇಖ್ ಮೊಹ್ಸಿನ್ ನೆನಪಿಸಿಕೊಳ್ಳುತ್ತಾರೆ. ಮುಂದಿನ ಶುಕ್ರವಾರ (ಆಗಸ್ಟ್ 12) ರಕ್ಷಾ ಬಂಧನದ ಆಚರಣೆಯಿದೆ.

Published On - 7:04 am, Mon, 8 August 22

ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ