Narendra Modi: ಕೋರ್ಟ್​ಗೆ ಹೋದ ಭ್ರಷ್ಟ ಪಕ್ಷಗಳಿಗೆ ತಕ್ಕ ಶಾಸ್ತಿಯಾಗಿದೆ; ಪ್ರಧಾನಿ ಮೋದಿ ವಾಗ್ದಾಳಿ

ಕೆಲವು ಭ್ರಷ್ಟ ಪಕ್ಷಗಳು ತಮ್ಮ ಭ್ರಷ್ಟಾಚಾರ ಮುಚ್ಚಿಡುವುದಕ್ಕಾಗಿ ತನಿಖಾ ಸಂಸ್ಥೆಗಳ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದವು. ಅಲ್ಲಿ ಆ ಪಕ್ಷಗಳಿಗೆ ತಕ್ಕ ಶಾಸ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

Narendra Modi: ಕೋರ್ಟ್​ಗೆ ಹೋದ ಭ್ರಷ್ಟ ಪಕ್ಷಗಳಿಗೆ ತಕ್ಕ ಶಾಸ್ತಿಯಾಗಿದೆ; ಪ್ರಧಾನಿ ಮೋದಿ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ
Follow us
Ganapathi Sharma
|

Updated on: Apr 08, 2023 | 2:53 PM

ಹೈದರಾಬಾದ್: ಕೆಲವು ಭ್ರಷ್ಟ ಪಕ್ಷಗಳು ತಮ್ಮ ಭ್ರಷ್ಟಾಚಾರ ಮುಚ್ಚಿಡುವುದಕ್ಕಾಗಿ ತನಿಖಾ ಸಂಸ್ಥೆಗಳ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದವು. ಅಲ್ಲಿ ಆ ಪಕ್ಷಗಳಿಗೆ ತಕ್ಕ ಶಾಸ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದರು. ಸಿಕಂದರಾಬಾದ್ – ತಿರುಪತಿ ವಂದೇ ಭಾರತ್ ರೈಲಿಗೆ ಚಾಲನೆ, ಸಿಕಂದರಾಬಾದ್ ರೈಲು ನಿಲ್ದಾಣದ ಮರು ಅಭಿವೃದ್ಧಿಗೆ ಶಂಕುಸ್ಥಾಪನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದ ನಂತರ ಮಾತನಾಡಿದ ಪ್ರಧಾನಿ, ಪ್ರತಿಪಕ್ಷಗಳ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಕೇಂದ್ರ ಸರ್ಕಾರ ರಾಜಕೀಯ ವಿರೋಧಿಗಳಿಗೆ ಕಿರುಕುಳ ನೀಡಲು, ಬೆದರಿಸಲು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದ 14 ಪ್ರತಿಪಕ್ಷಗಳು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕೆಲವು ದಿನಗಳ ಹಿಂದೆ ವಜಾಗೊಳಿಸಿತ್ತು.

ತೆಲಂಗಾಣದಲ್ಲಿ ಕೇಂದ್ರ ಸರ್ಕಾರವು ಕೈಗೊಳ್ಳುತ್ತಿರುವ ಹಲವು ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ಯಾವುದೇ ಬೆಂಬಲ ಸಿಗುತ್ತಿಲ್ಲ. ಇದರಿಂದಾಗಿ ಯೋಜನೆಗಳು ವಿಳಂಬವಾಗುತ್ತಿವೆ. ಇದರಿಂದ ಜನರಿಗೆ ಸಾಕಷ್ಟು ನಷ್ಟವಾಗುತ್ತದೆ. ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಯಾಗಬಾರದು. ರಾಜ್ಯದಲ್ಲಿ ವಂಶಾಡಳಿತದಿಂದ ಭ್ರಷ್ಟಾಚಾರ ಹೆಚ್ಚಾಗಿದೆ. ಅವರಿಗೆ ಸಂಸಾರ ಬೆಳೆದರೆ ಸಾಕು ಎಂದು ಪ್ರಧಾನಿ ಮೋದಿ ಆಕ್ರೋಶ ವ್ಯಕ್ತಪಡಿಸಿದರು.

ಎಲ್ಲಾ ವಿಷಯಗಳಲ್ಲಿ ಅವರು ಕುಟುಂಬದ ಸ್ವಹಿತಾಸಕ್ತಿಯನ್ನಷ್ಟೇ ಬಯಸುತ್ತಾರೆ. ತೆಲಂಗಾಣದ ಜನರು ಇಂತಹವರೊಂದಿಗೆ ಜಾಗರೂಕರಾಗಿರಬೇಕು. ವಂಶ ರಾಜಕಾರಣದೊಂದಿಗೆ ಭ್ರಷ್ಟಾಚಾರ ಪೋಷಣೆಯಾಗುತ್ತಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ವಿರುದ್ಧ ಮೋದಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Vande Bharat Express: ಸಿಕಂದರಾಬಾದ್ – ತಿರುಪತಿ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ತೆಲಂಗಾಣ ರಚನೆಯಾದಾಗ ಕೇಂದ್ರದಲ್ಲಿ ಎನ್​ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿತ್ತು. ಪ್ರತ್ಯೇಕ ರಾಜ್ಯ ರಚನೆಯಾದ ನಂತರ ಜನರ ಆಶೋತ್ತರಗಳನ್ನು ಈಡೇರಿಸುವ ಜವಾಬ್ದಾರಿಯನ್ನು ಕೇಂದ್ರದ ಎನ್​ಡಿಎ ಸರ್ಕಾರ ವಹಿಸಿಕೊಂಡಿತು ಎಂದು ಪ್ರಧಾನಿ ಹೇಳಿದರು.

ಕೇಂದ್ರದ ಅಭಿವೃದ್ಧಿ ಕಾರ್ಯಗಳಿಂದಾಗಿ ಕೆಲವರಿಗೆ ಹೆದರಿಕೆಯಾಗಿದೆ ಎಂದು ಪ್ರಧಾನಿ ಮೋದಿ ವಿರೋಧ ಪಕ್ಷಗಳನ್ನು ಟೀಕಿಸಿದ್ದಾರೆ. ಕುಟುಂಬ ರಾಜಕಾರಣ ಎಂದು ಮಾಡುವವರಿಗೆ ದೇಶದ ಅಭಿವೃದ್ಧಿಯ ಬಗ್ಗೆ ಕಾಳಜಿ ಇಲ್ಲ. ಅಂಥವರು ಸ್ವಾರ್ಥ ಚಿಂತನೆಯಲ್ಲಿ ತೊಡಗುತ್ತಾರೆ ಎಂದು ಮೋದಿ ಟೀಕಿಸಿದರು.

ದೇಶವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಬೇಕೇ ಅಥವಾ ಬೇಡವೇ ಎಂದು ಸಭೆಯಲ್ಲಿದ್ದ ಜನರನ್ನು ಪ್ರಧಾನಿ ಮೋದಿ ಪ್ರಶ್ನಿಸಿದರು. ಭ್ರಷ್ಟ ನಾಯಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ