ಮಹಾರಾಷ್ಟ್ರದಾದ್ಯಂತ ಭಾರಿ ಮಳೆ, ಪ್ರಧಾನಿ ಮೋದಿ ಪುಣೆ ಭೇಟಿ ರದ್ದು
ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಪುಣೆ ಭೇಟಿ ರದ್ದುಗೊಂಡಿದೆ. ಪುಣೆಯಲ್ಲಿ ನಿರ್ಮಾಣವಾಗಿರುವ ಮೆಟ್ರೋ ಮಾರ್ಗದ ಉದ್ಘಾಟನೆಗೆ ಪ್ರಧಾನಿ ಬರಬೇಕಿತ್ತು. ಭಾರಿ ಮಳೆ ಹಿನ್ನೆಯಲ್ಲಿ ಮುಂಬೈಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಪುಣೆ ಭೇಟಿ ರದ್ದುಗೊಂಡಿದೆ. ಪುಣೆಯಲ್ಲಿ ನಿರ್ಮಾಣವಾಗಿರುವ ಮೆಟ್ರೋ ಮಾರ್ಗದ ಉದ್ಘಾಟನೆಗೆ ಪ್ರಧಾನಿ ಬರಬೇಕಿತ್ತು. ಭಾರಿ ಮಳೆ ಹಿನ್ನೆಯಲ್ಲಿ ಮುಂಬೈಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಎಚ್ಚರಿಕೆ ಹಿನ್ನೆಲೆಯಲ್ಲಿ ಗುರುವಾರ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಲವು ರಸ್ತೆಗಳು ಮುಳುಗಿವೆ. ಇಷ್ಟೇ ಅಲ್ಲ, ಮಳೆ ಮತ್ತು ಬಲವಾದ ಗಾಳಿಯಿಂದಾಗಿ ಹಲವು ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದೆ. ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನಗಳು ನಿಧಾನವಾಗಿ ಸಂಚರಿಸಿದವು.
ಮುಂಬೈ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್, ಇಂಡಿಗೋ ಮತ್ತು ವಿಸ್ತಾರಾ ವಿಮಾನಗಳ ಮೇಲೆ ಪರಿಣಾಮ ಬೀರಿತು. ವಾಯು ಸೇವೆ ಒದಗಿಸುವ ಕಂಪನಿಗಳು ಹವಾಮಾನದ ಬದಲಾವಣೆಯಿಂದ ಪರಿಣಾಮ ಬೀರುವ ವಿಮಾನಗಳ ಹೊಸ ಸ್ಥಿತಿಯ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿಯನ್ನು ಹಂಚಿಕೊಂಡಿವೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಎರಡು ದಿನ ಭಾರಿ ಮಳೆ
ಮುಂಬೈ ಮತ್ತು ನೆರೆಯ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಮುಂಬೈ, ಥಾಣೆ, ರಾಯಗಢ ಮತ್ತು ರತ್ನಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
#WATCH नवी मुंबई (महाराष्ट्र): भारी बारिश के कारण शहर में जलभराव हुआ। वीडियो बेलापुर से है। pic.twitter.com/53isQRfT1O
— ANI_HindiNews (@AHindinews) September 25, 2024
ಮುಂಬೈನಲ್ಲಿ ಭಾರೀ ಮಳೆ ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಶುರುವಾಯಿತು. 5 ಗಂಟೆಗಳ ಅವಧಿಯಲ್ಲಿ ಮುಂಬೈ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ 200 ಮಿ.ಮೀ ಗಿಂತ ಹೆಚ್ಚು ಮಳೆ ಸುರಿದಿದೆ. ಪುಣೆಯ (Pune) ಶಿವಾಜಿನಗರದಲ್ಲಿ ಮಂಗಳವಾರ ಸಂಜೆ 5:30ರವರೆಗೂ 19.2 ಮಿಮಿ. ಮಳೆ ದಾಖಲಾಗಿತ್ತು. ಇದರಿಂದಾಗಿ ಭಾರತೀಯ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿ, ಮುಂದಿನ 24 ಗಂಟೆಗಳಲ್ಲಿ ತ್ರೀವ ಮಳೆಯಾಗುವ ಸಾಧ್ಯತೆಯಿದೆ ಎಂದು ಮೂನ್ಸೂಚನೆ ನೀಡಿತ್ತು. ಬಳಿಕ ಮಳೆಯ ತೀವ್ರತೆಯಿಂದಾಗಿ ಸೆ.25 ರಂದು ರೆಡ್ ಅಲರ್ಟ್ ಘೋಷಣೆ ಮಾಡಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ