ಕೊವಿಡ್​ನಿಂದ ಅನಾಥರಾದ ಮಕ್ಕಳಿಗೆ ವಿಶೇಷ ವಿದ್ಯಾರ್ಥಿ ವೇತನ: ಮೇ 30ರಂದು ಪ್ರಧಾನಿ ಮೋದಿ ಘೋಷಣೆ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: May 29, 2022 | 8:46 AM

ಕೊವಿಡ್ ಸಂತ್ರಸ್ತರಿಗೆ ಪರಿಹಾರ ಚೆಕ್​ಗಳನ್ನು ವಿತರಿಸುವ ಜೊತೆಗೆ ವಿಶೇಷ ವಿದ್ಯಾರ್ಥಿ ವೇತನವನ್ನು ಘೋಷಿಸಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದರು.

ಕೊವಿಡ್​ನಿಂದ ಅನಾಥರಾದ ಮಕ್ಕಳಿಗೆ ವಿಶೇಷ ವಿದ್ಯಾರ್ಥಿ ವೇತನ: ಮೇ 30ರಂದು ಪ್ರಧಾನಿ ಮೋದಿ ಘೋಷಣೆ
ಪ್ರಧಾನಿ ನರೇಂದ್ರ ಮೋದಿ
Follow us on

ದೆಹಲಿ: ಕೊವಿಡ್-19 ಪಿಡುಗಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ನಾಳೆ (ಮೇ 30) ಪರಿಹಾರ ಚೆಕ್​ಗಳನ್ನು ವಿತರಿಸುವ ಜೊತೆಗೆ ವಿಶೇಷ ವಿದ್ಯಾರ್ಥಿ ವೇತನವನ್ನು ಘೋಷಿಸಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದರು.

ಮೋದಿ ಸರ್ಕಾರದ 8ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಮೇ 30ರಿಂದ ಜೂನ್ 14ರವರೆಗೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿ ವೇತನ ಘೋಷಣೆಯೂ ಈ ಕಾರ್ಯಕ್ರಮದ ಭಾಗವಾಗಿಯೇ ನಡೆಯಲಿದೆ ಎಂದು ಅವರು ತಿಳಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವಾಸಾರ್ಹ, ಜನಪ್ರಿಯ, ಚುರುಕಿನ ನಿರ್ಧಾರಗಳನ್ನು ತೆಗೆದುಕೊಳ್ಳುವ ನಾಯಕ. ದೇಶಕ್ಕಾಗಿ ಹಲವು ತ್ಯಾಗಗಳನ್ನು ಮಾಡಿದ ಪ್ರಬಲ ನಾಯಕ. ಇಂದು ಇಡೀ ದೇಶವೇ ಅವರೊಂದಿಗೆ ನಿಂತಿದೆ ಎಂದು ಹೇಳಿದರು.

ಮೇ 31ರಂದು ಶಿಮ್ಲಾದಲ್ಲಿ ನಡೆಯಲಿರುವ ‘ಆಜಾದಿ ಕಾ ಅಮೃತ್ ಮಹೋತ್ಸವ್’ ಕಾರ್ಯಕ್ರಮದಲ್ಲಿಯೂ ಮೋದಿ ಅವರು ಪಾಲ್ಗೊಳ್ಳಲಿದ್ದು ಕೇಂದ್ರ ಸರ್ಕಾರದ 16 ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:46 am, Sun, 29 May 22