ಪ್ರಧಾನಿ ಭದ್ರತಾ ಲೋಪ; ಪಂಜಾಬ್​ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಲು 27 ಐಪಿಎಸ್ ಅಧಿಕಾರಿಗಳಿಂದ ರಾಷ್ಟ್ರಪತಿಗೆ ಪತ್ರ

PM Security Breach: ಪ್ರಧಾನಿ ಭದ್ರತೆಯ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಮಾಜಿ ಡಿಜಿಪಿಗಳು ಸೇರಿದಂತೆ 27 ಐಪಿಎಸ್ ಅಧಿಕಾರಿಗಳು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ಪ್ರಧಾನಿ ಭದ್ರತಾ ಲೋಪ; ಪಂಜಾಬ್​ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಲು 27 ಐಪಿಎಸ್ ಅಧಿಕಾರಿಗಳಿಂದ ರಾಷ್ಟ್ರಪತಿಗೆ ಪತ್ರ
ಪಂಜಾಬ್​ನಲ್ಲಿ ನಡು ರಸ್ತೆಯಲ್ಲಿ ಸಿಲುಕಿದ ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jan 06, 2022 | 8:38 PM

ನವದೆಹಲಿ: ಬುಧವಾರ ಪಂಜಾಬ್​ನಲ್ಲಿ ಸುಮಾರು 42,750 ರೂ. ವೆಚ್ಚದ ವಿವಿಧ ಯೋಜನೆಗಳನ್ನು ಉದ್ಘಾಟಿಸಲು ತೆರಳಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ನೀಡಲಾಗಿದ್ದ ಭದ್ರತಾ ಲೋಪದಿಂದ ಅವರು ರಸ್ತೆಯಲ್ಲೇ ಸಿಲುಕಿಕೊಳ್ಳಬೇಕಾಯಿತು. ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಕಾಂಗ್ರೆಸ್ ನಾಯಕರೂ ಸೇರಿದಂತೆ ಬಿಜೆಪಿ ನಾಯಕರು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತಿತರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುಪ್ರೀಂಕೋರ್ಟ್​ನಲ್ಲೂ ವಿಚಾರಣೆ ನಡೆದಿದೆ. ಪಂಜಾಬ್​ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ ಕೂಡ ನಿನ್ನೆ ನಡೆದ ಘಟನೆಗೆ ಕ್ಷಮೆ ಕೇಳಿದ್ದು, ಪ್ರಧಾನಿ ನರೇಂದ್ರ ಮೋದಿಯವರ ರಕ್ಷಣೆಗೆ ನಾನು ಪ್ರಾಣ ಬೇಕಾದರೂ ಕೊಡುತ್ತಿದ್ದೆ ಎಂದಿದ್ದಾರೆ. ಇದೀಗ ಭಾರತದ 16 ಮಾಜಿ ಡಿಜಿಪಿಗಳು ಸೇರಿದಂತೆ 27 ಐಪಿಎಸ್​ ಅಧಿಕಾರಿಗಳು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ಪ್ರಧಾನಿ ಭದ್ರತೆಯ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಮಾಜಿ ಡಿಜಿಪಿಗಳು ಸೇರಿದಂತೆ 27 ಐಪಿಎಸ್ ಅಧಿಕಾರಿಗಳು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ, ಪಂಜಾಬ್​ಗೆ ಪ್ರಧಾನಿ ಮೋದಿಯವರ ಭೇಟಿಯ ಸಂದರ್ಭದಲ್ಲಿ, ಪಂಜಾಬ್‌ನಲ್ಲಿ ಪ್ರತಿಭಟನಾಕಾರರು ನಡೆಸಿದ ಉದ್ದೇಶಪೂರ್ವಕ ಮತ್ತು ಯೋಜಿತ ಭದ್ರತಾ ಲೋಪದ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಪಂಜಾಬ್‌ನ ಇಬ್ಬರು ಮಾಜಿ ಡಿಜಿಪಿಗಳಾದ ಪಿಸಿ ಡೋಗ್ರಾ ಮತ್ತು ಎಪಿ ಪಾಂಡೆ ಸೇರಿದಂತೆ ಒಟ್ಟು 16 ಡಿಜಿಪಿಗಳು ಈ ಪಟ್ಟಿಯಲ್ಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹಿಸಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರಿಗೂ ಪತ್ರದ ಪ್ರತಿಯನ್ನು ಕಳುಹಿಸಲಾಗಿದೆ.

ಪ್ರಧಾನಿಯವರು ಫಿರೋಜ್‌ಪುರಕ್ಕೆ ಹೋಗುವ ಮಾರ್ಗದಲ್ಲಿ ಹುತಾತ್ಮರ ಸ್ಮಾರಕಕ್ಕೆ ತೆರಳುವ ಮಾರ್ಗದಲ್ಲಿ ಪ್ಯಾರಿಯಾನಾ ಗ್ರಾಮದಲ್ಲಿ 20 ನಿಮಿಷಗಳ ಕಾಲ ಕಾದು ಹಿಂತಿರುಗಬೇಕಾಯಿತು. ವಾಪಸಾಗುತ್ತಿದ್ದಾಗ, ಪ್ರಧಾನಿಯವರು ಭಟಿಂಡಾ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳಿಗೆ, “ನಿಮ್ಮ ಮುಖ್ಯಮಂತ್ರಿಗಳಿಗೆ ಧನ್ಯವಾದಗಳನ್ನು ತಿಳಿಸಿ. ನಾನು ಜೀವಂತವಾಗಿ ಭಟಿಂಡಾಗೆ ಮರಳಿದ್ದೇನೆ” ಎಂದು ಹೇಳಿದ್ದರು.

ಇದು ಪಂಜಾಬ್ ಸರ್ಕಾರ ತೋರಿದ ದೊಡ್ಡ ನಿರ್ಲಕ್ಷ್ಯ ಮಾತ್ರವಲ್ಲ, ರಾಜ್ಯದ ಪದಾಧಿಕಾರಿಗಳ ಸ್ಪಷ್ಟವಾದ ಶಾಮೀಲು ಕಂಡುಬರುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ ಎಂದು ಮಾಜಿ ಐಪಿಎಸ್ ಅಧಿಕಾರಿಗಳು ಪತ್ರದಲ್ಲಿ ಬರೆದಿದ್ದಾರೆ. ಇದು ಭದ್ರತಾ ಲೋಪದಿಂದ ಈ ಘಟನೆ ನಡೆದಿದೆ. ನಾವು ಇಷ್ಟು ವರ್ಷಗಳ ಕಾಲ ಭಾರತದ ಬೇರೆ ಬೇರೆ ರಾಜ್ಯಗಳಲ್ಲಿ ಪೊಲೀಸ್ ಅಧಿಕಾರಿಗಳಾಗಿ ಯಶಸ್ವಿಯಾಗಿ ನಮ್ಮ ಜವಾಬ್ದಾರಿಯನ್ನು ನಿರ್ವಹಿಸಿದ್ದೇವೆ. ಪ್ರಧಾನಮಂತ್ರಿಯವರ ಭೇಟಿಯ ಭದ್ರತೆಯನ್ನು ಸಂಘಟಿಸಲು ನೇಮಕಗೊಂಡವರಿಗೆ ರಾಜ್ಯಕ್ಕೆ ಪರ್ಯಾಯ ಮಾರ್ಗಗಳ ಬಗ್ಗೆ ಚೆನ್ನಾಗಿ ತಿಳಿದಿತ್ತು. ಇದಲ್ಲದೆ, ಈ ದೇಶದ ಇತಿಹಾಸದಲ್ಲಿ ಇದುವರೆಗೆ ನಡೆದಿಲ್ಲವಾದ್ದರಿಂದ ನಾವು ನಿಮ್ಮನ್ನು ಸಂಪರ್ಕಿಸುತ್ತಿದ್ದೇವೆ ಎಂದು ಮಾಜಿ ಅಧಿಕಾರಿಗಳು ಪತ್ರದಲ್ಲಿ ಬರೆದಿದ್ದಾರೆ. ಪ್ರತಿಭಟನಕಾರರೆಂದು ಕರೆಸಿಕೊಳ್ಳುವವರು ತಡೆದ ಪ್ರಧಾನಿ ಮಾರ್ಗದ ಬಗ್ಗೆ ರಾಜ್ಯದ ಸಂಸ್ಥೆಗಳು ಸಮರ್ಥನೆ ನೀಡುತ್ತಿದ್ದು, ಮುಖ್ಯಮಂತ್ರಿ ಮಟ್ಟದಲ್ಲಿಯೂ ವ್ಯತಿರಿಕ್ತ ಮಾತುಗಳು ಕೇಳಿಬರುತ್ತಿವೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಪ್ರತಿಭಟನಾಕಾರರಿಗೆ ಮಾರ್ಗದ ಬಗ್ಗೆ ಹೇಗೆ ತಿಳಿಯುತ್ತದೆ ಎಂಬುದು ಅರ್ಥವಾಗದಿದ್ದರೆ, ಅದರ ಮಾಹಿತಿಯು ರಾಜ್ಯದ ಪೊಲೀಸ್ ಅಧಿಕಾರಿಗಳು ಮತ್ತು ಇತರರಿಗೆ ಮಾತ್ರ ತಿಳಿದಿರುತ್ತದೆ. ಅಲ್ಲದೆ, ಐಪಿಎಸ್ ಅಧಿಕಾರಿಗಳು ತಾಔಉ ಬರೆದಿರುವ ಪತ್ರದಲ್ಲಿ ಎಬಿಪಿ ನ್ಯೂಸ್‌ನ ಕ್ಲಿಪ್ ಅನ್ನು ಕೂಡ ಉಲ್ಲೇಖಿಸಿದ್ದಾರೆ. ದೂರದರ್ಶನ ಚಾನೆಲ್‌ಗಳು ಮತ್ತು ಮುದ್ರಣ ಮಾಧ್ಯಮಗಳಲ್ಲಿನ ವೀಡಿಯೊಗಳು ಸ್ಥಳದಲ್ಲಿ ಯಾವುದೇ ಹಿರಿಯ ಪೊಲೀಸ್ ಅಧಿಕಾರಿ ಇರಲಿಲ್ಲ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತವೆ. ಆಶ್ಚರ್ಯಕರವೆಂದರೆ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರೆಂದು ಕರೆಯಲ್ಪಡುವವರನ್ನು ತೆರವುಗೊಳಿಸುವ ಪ್ರಯತ್ನಗಳನ್ನು ಮಾಡುವ ಬದಲು ಅದನ್ನು ಎಂಜಾಯ್ ಮಾಡಿದ್ದಾರೆ. ತೆರೆದ ರಸ್ತೆಯಲ್ಲಿ ಪ್ರತಿಭಟನಾಕಾರರ ಮುಂದೆ ಪ್ರಧಾನಿ ಬೆಂಗಾವಲು ಪಡೆ ಅಸಹಾಯಕವಾಗಿದ್ದಾಗ, ಸ್ಥಳೀಯ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸೌಹಾರ್ದ ವಾತಾವರಣವಿತ್ತು. ಅಲ್ಲಿ ಪೊಲೀಸರು ಪ್ರತಿಭಟನಾಕಾರರೊಂದಿಗೆ ಚಹಾ ಕುಡಿಯುತ್ತಿದ್ದರು. ಮಾರ್ಗವನ್ನು ತೆರವುಗೊಳಿಸಲು ಅವರಿಗೆ ಆಸಕ್ತಿಯೇ ಇರಲಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಯಾರಾದರೂ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಪ್ರಧಾನಿಯವರ ಜೀವಕ್ಕೆ ಅಪಾಯವನ್ನುಂಟು ಮಾಡಬಹುದಿತ್ತು ಎಂದು ಪತ್ರದಲ್ಲಿ ಮಾಜಿ ಪೊಲೀಸ್ ಅಧಿಕಾರಿಗಳು ಬರೆದಿದ್ದಾರೆ.

ಈ ಘಟನೆ ನಡೆದ ಸ್ಥಳವು ಪಾಕಿಸ್ತಾನದ ಗಡಿಯಿಂದ ಕೇವಲ 15 ಕಿಮೀ ದೂರದಲ್ಲಿದೆ ಮತ್ತು ಭಯೋತ್ಪಾದನೆಯನ್ನು ಹರಡಲು ಪಾಕಿಸ್ತಾನದ ಕಣ್ಣುಗಳು ಯಾವಾಗಲೂ ಈ ಗಡಿ ರಾಜ್ಯದ ಮೇಲೆ ಇರುತ್ತವೆ. ಪಂಜಾಬ್‌ನಲ್ಲಿ ಚುನಾವಣೆ ನಡೆಯಲಿದ್ದು, ಇಂತಹ ಸಂದರ್ಭದಲ್ಲಿ ಹಲವು ರಾಜಕೀಯ ಪಕ್ಷಗಳ ಮುಖಂಡರು ಬರುತ್ತಾರೆ, ಹೋಗುತ್ತಾರೆ. ಎಲ್ಲರನ್ನೂ ರಕ್ಷಿಸುವ ಜವಾಬ್ದಾರಿ ಆಡಳಿತ ಯಂತ್ರದ ಮೇಲಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ. ರಾಜ್ಯದಲ್ಲಿ ಭದ್ರತೆಯ ವಾತಾವರಣದಲ್ಲಿ ಚುನಾವಣೆ ನಡೆಯುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ನರೇಂದ್ರ ಮೋದಿ ನಿನ್ನೆ ಹವಾಮಾನ ವೈಪರೀತ್ಯದ ಕಾರಣದಿಂದ ಕೊನೆ ಕ್ಷಣದಲ್ಲಿ ವಿಮಾನ ಮಾರ್ಗದ ಬದಲು ರಸ್ತೆ ಮೂಲಕ ಪಂಜಾಬ್​ನತ್ತ ಪ್ರಯಾಣ ಬೆಳೆಸಿದ್ದರು. ಆದರೆ, ಪಂಜಾಬ್​ನಲ್ಲಿ ಮಾರ್ಗ ಮಧ್ಯೆ ರೈತರು ಪ್ರತಿಭಟನೆ ನಡೆಸಿ, ಅಡ್ಡಗಟ್ಟಿದ್ದರಿಂದ ಸುಮಾರು 20 ನಿಮಿಷಗಳ ಕಾಲ ಪ್ರಧಾನಿ ಮೋದಿ ಹಾಗೂ ಅವರ ಬೆಂಗಾವಲು ಪಡೆ ವಾಹನಗಳು ರಸ್ತೆ ಮಧ್ಯೆ ಸಿಲುಕಿಕೊಳ್ಳುವಂತಾಗಿತ್ತು. ಬಳಿಕ ಪ್ರಧಾನಿ ಮೋದಿ ಪಂಜಾಬ್​ನ ರ್ಯಾಲಿಯನ್ನು ರದ್ದುಗೊಳಿಸಿ ಭಟಿಂಡಾ ವಿಮಾನ ನಿಲ್ದಾಣಕ್ಕೆ ವಾಪಾಸಾಗಬೇಕಾಯಿತು. ಈ ಘಟನೆಗೆ ಪಂಜಾಬ್​ ಸರ್ಕಾರದ ಭದ್ರತಾ ವೈಫಲ್ಯವೇ ಕಾರಣ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು.

ಪಂಜಾಬ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಪಂಜಾಬ್​ನ ಫಿರೋಜ್​ಪುರ್​ ಸೀನಿಯರ್ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (ಎಸ್​ಎಸ್​ಪಿ) ಅವರನ್ನು ಅಮಾನತು ಮಾಡಲಾಗಿದೆ. ಫಿರೋಜ್​ಪುರ್ ಎಸ್​ಎಸ್​ಪಿ ಹರ್ಮನ್​​​ ಹನ್ಸ್​ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿತ್ತು.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪವಾಗಿರುವುದು ಖಂಡನೀಯ: ಬಸವರಾಜ ಬೊಮ್ಮಾಯಿ ಹೇಳಿಕೆ

ಪಂಜಾಬ್​ನಲ್ಲಿ ಪ್ರಧಾನಿ ಭದ್ರತಾ ವೈಫಲ್ಯಕ್ಕೆ ಕೇಂದ್ರ ಸರ್ಕಾರವೇ ಕಾರಣ; ಮಲ್ಲಿಕಾರ್ಜುನ ಖರ್ಗೆ ಆರೋಪ

Published On - 8:37 pm, Thu, 6 January 22

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ