AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Vidyalaxmi Scheme: ಪಿಎಂ ವಿದ್ಯಾಲಕ್ಷ್ಮಿ ಯೋಜನೆಗೆ ಯಾರು ಅರ್ಹರು?; ಅರ್ಜಿ ಸಲ್ಲಿಸುವುದು ಹೇಗೆ?

ಯಾವುದೇ ಕೊಲ್ಯಾಟರಲ್ ಮತ್ತು ಗ್ಯಾರಂಟಿ ನೀಡುವವರ ಸಹಾಯವಿಲ್ಲದೆ ವಿದ್ಯಾರ್ಥಿ ಸಾಲಕ್ಕಾಗಿ ಪಿಎಂ - ವಿದ್ಯಾಲಕ್ಷ್ಮಿ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಗೆ ಇಂದು ಸಚಿವ ಸಂಪುಟ ಅನುಮೋದನೆ ನೀಡಿದೆ. ಹಾಗಾದರೆ, ಪಿಎಂ-ವಿದ್ಯಾಲಕ್ಷ್ಮಿ ಯೋಜನೆ ಎಂದರೇನು? ಯಾರು ಅರ್ಹರು? ಇದಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು? ಎಂಬ ಕುರಿತು ಮಾಹಿತಿ ಇಲ್ಲಿದೆ.

PM Vidyalaxmi Scheme: ಪಿಎಂ ವಿದ್ಯಾಲಕ್ಷ್ಮಿ ಯೋಜನೆಗೆ ಯಾರು ಅರ್ಹರು?; ಅರ್ಜಿ ಸಲ್ಲಿಸುವುದು ಹೇಗೆ?
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Nov 06, 2024 | 7:08 PM

Share

ನವದೆಹಲಿ: ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಜಾರಿಗೊಳಿಸಲಾದ ಕೇಂದ್ರ ಸರ್ಕಾರದ ಕಾರ್ಯಕ್ರಮವಾದ ಪಿಎಂ- ವಿದ್ಯಾಲಕ್ಷ್ಮಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಿಂದಾಗಿ ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣವನ್ನು ಮುಂದುವರಿಸಲಾಗದಿರುವವರಿಗೆ ಸಹಾಯವಾಗಲಿದೆ. ಪತ್ರಿಕಾ ಮಾಹಿತಿ ಬ್ಯೂರೋ (PIB) ಇಂದು ಪಿಎಂ- ವಿದ್ಯಾಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸುವ ಕುರಿತು ಪತ್ರಿಕಾ ಪ್ರಕಟಣೆಯನ್ನು ನೀಡಿದೆ.

ಪಿಎಂ- ವಿದ್ಯಾಲಕ್ಷ್ಮಿ ಯೋಜನೆಯಡಿ ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ (QHEIs) ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಕೋರ್ಸಿಗೆ ಸಂಬಂಧಿಸಿದ ಪೂರ್ಣ ಪ್ರಮಾಣದ ಬೋಧನಾ ಶುಲ್ಕ ಮತ್ತು ಇತರ ವೆಚ್ಚಗಳನ್ನು ಭರಿಸಲು ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಂದ ಕೊಲ್ಯಾಟರಲ್ ಇಲ್ಲದೆ, ಗ್ಯಾರಂಟಿದಾರರಿಲ್ಲದೆ ಸಾಲವನ್ನು ಪಡೆಯಲು ಅರ್ಹರಾಗಿರುತ್ತಾರೆ.

ಇದನ್ನೂ ಓದಿ: ರಾಜತಾಂತ್ರಿಕರನ್ನು ಹೆದರಿಸುವ ಹೇಡಿತನದ ಪ್ರಯತ್ನ; ಕೆನಡಾದ ಹಿಂದೂ ದೇವಾಲಯದ ದಾಳಿಗೆ ಪಿಎಂ ಮೋದಿ ಖಂಡನೆ

ಉನ್ನತ ಶಿಕ್ಷಣ ಇಲಾಖೆಯು “ಪಿಎಂ-ವಿದ್ಯಾಲಕ್ಷ್ಮಿ” ಎಂಬ ಏಕೀಕೃತ ಪೋರ್ಟಲ್ ಅನ್ನು ಹೊಂದಿದ್ದು, ಎಲ್ಲಾ ಬ್ಯಾಂಕ್‌ಗಳು ಬಳಸಲು ಸರಳೀಕೃತ ಅಪ್ಲಿಕೇಶನ್ ಪ್ರಕ್ರಿಯೆಯ ಮೂಲಕ ವಿದ್ಯಾರ್ಥಿಗಳು ಶಿಕ್ಷಣ ಸಾಲ ಮತ್ತು ಬಡ್ಡಿ ರಿಯಾಯಿತಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ. ಇ-ವೋಚರ್ ಮತ್ತು ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ (CBDC) ವ್ಯಾಲೆಟ್‌ಗಳ ಮೂಲಕ ಬಡ್ಡಿ ಉಪದಾನದ ಪಾವತಿಯನ್ನು ಮಾಡಲಾಗುತ್ತದೆ.

ಪಿಎಂ-ವಿದ್ಯಾಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?:

ಉನ್ನತ ಶಿಕ್ಷಣ ಇಲಾಖೆಯು ಏಕೀಕೃತ ಪೋರ್ಟಲ್ ಅನ್ನು ರಿಲೀಸ್ ಮಾಡುತ್ತದೆ. ಉನ್ನತ ಶಿಕ್ಷಣ ಇಲಾಖೆಯು “PM-Vidyalaxmi” ಎಂಬ ಕ್ರೋಢೀಕೃತ ಪೋರ್ಟಲ್ ಅನ್ನು ಪರಿಚಯಿಸುತ್ತಿದೆ. ಅಲ್ಲಿ ವಿದ್ಯಾರ್ಥಿಗಳು ವಿದ್ಯಾಲಕ್ಷ್ಮಿ ಯೋಜನೆಯಡಿ ಶಿಕ್ಷಣ ಸಾಲ ಮತ್ತು ಬಡ್ಡಿ ರಿಯಾಯಿತಿಗಾಗಿ ಅರ್ಜಿ ಸಲ್ಲಿಸಬಹುದು. ಸಬ್ವೆನ್ಶನ್ ಪಾವತಿಯನ್ನು ಇ-ವೋಚರ್ ಮತ್ತು ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ (CBDC) ವ್ಯಾಲೆಟ್‌ಗಳ ಮೂಲಕ ಮಾಡಲಾಗುತ್ತದೆ.

ಪಿಎಂ ವಿದ್ಯಾಲಕ್ಷ್ಮಿ ಯೋಜನೆಗೆ ಯಾರು ಅರ್ಹರು?:

ಈ ಯೋಜನೆಯು NIRF ಶ್ರೇಯಾಂಕದಲ್ಲಿ ಅಗ್ರ 100ರೊಳಗೆ ಸ್ಥಾನ ಪಡೆದಿರುವ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುತ್ತದೆ. ಜೊತೆಗೆ NIRFನಲ್ಲಿ 101-200ರಲ್ಲಿ ರಾಜ್ಯ ಸರ್ಕಾರದ HEIಗಳು ಮತ್ತು ಎಲ್ಲಾ ಕೇಂದ್ರ ಸರ್ಕಾರದ ಆಡಳಿತದ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಲು ಇಚ್ಛಿಸುವ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದೆ. ವರ್ಷಕ್ಕೆ 22 ಲಕ್ಷ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆಯಬಹುದು.

ಇದನ್ನೂ ಓದಿ: ಪಿಎಂ-ವಿದ್ಯಾಲಕ್ಷ್ಮಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ; ಅರ್ಹ ವಿದ್ಯಾರ್ಥಿಗಳಿಗೆ 10 ಲಕ್ಷ ರೂ.ವರೆಗೆ ಶಿಕ್ಷಣ ಸಾಲ

ವಾರ್ಷಿಕ ಕುಟುಂಬ ಆದಾಯದ 8 ಲಕ್ಷ ರೂ.ವರೆಗಿನ ವಿದ್ಯಾರ್ಥಿಗಳಿಗೆ ಈ ಯೋಜನೆಯು 10 ಲಕ್ಷ ರೂ.ವರೆಗಿನ ಸಾಲದ ಮೇಲೆ 3% ಬಡ್ಡಿ ರಿಯಾಯಿತಿಯನ್ನು ನೀಡುತ್ತದೆ. ಪ್ರತಿ ವರ್ಷ 1 ಲಕ್ಷ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಗುವುದು.

ಈ ಯೋಜನೆಯು ಕೇಂದ್ರ ವಲಯದ ಬಡ್ಡಿ ಸಬ್ಸಿಡಿ (CSIS) ಮತ್ತು ಶಿಕ್ಷಣ ಸಾಲಗಳ ಕ್ರೆಡಿಟ್ ಗ್ಯಾರಂಟಿ ಫಂಡ್ ಯೋಜನೆ (CGFSEL), ವಾರ್ಷಿಕ ಕುಟುಂಬ ಆದಾಯ 4.5 ಲಕ್ಷ ರೂ.ವರೆಗೆ ಮತ್ತು ಅನುಮೋದಿತ ಸಂಸ್ಥೆಗಳಿಂದ ತಾಂತ್ರಿಕ ಅಥವಾ ವೃತ್ತಿಪರ ಕೋರ್ಸ್ ಅನ್ನು ಅನುಸರಿಸುವ ವಿದ್ಯಾರ್ಥಿಗಳಿಗೆ ಪೂರಕವಾಗಿರುತ್ತದೆ. ಅಂತಹ ವಿದ್ಯಾರ್ಥಿಗಳು ಶಿಕ್ಷಣ ಸಾಲಗಳಿಗೆ ಮೊರಟೋರಿಯಂ ಅವಧಿಯಲ್ಲಿ ಸಂಪೂರ್ಣ ಬಡ್ಡಿ ರಿಯಾಯಿತಿಯನ್ನು ಪಡೆಯಲಿದ್ದಾರೆ.

7.5 ಲಕ್ಷ ರೂ.ವರೆಗಿನ ಸಾಲಕ್ಕಾಗಿ ವಿದ್ಯಾರ್ಥಿಗಳು 75% ಬಾಕಿ ಉಳಿದಿರುವ ಡೀಫಾಲ್ಟ್‌ನ ಕ್ರೆಡಿಟ್ ಗ್ಯಾರಂಟಿಯನ್ನು ಸಹ ಪಡೆಯಬಹುದು. ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲಗಳನ್ನು ಲಭ್ಯವಾಗುವಂತೆ ಮಾಡಲು ಬ್ಯಾಂಕ್‌ಗಳಿಗೆ ಬೆಂಬಲವನ್ನು ನೀಡುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ