ಪಿಎಂ ವಿಶ್ವಕರ್ಮ ಯೋಜನೆಯಡಿ 5% ಬಡ್ಡಿಗೆ ಸಿಗಲಿದೆ 3 ಲಕ್ಷ ರೂ. ಸಾಲ; ಈ ಸೌಲಭ್ಯ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

PM Vishwakarma Scheme: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವರ್ಗದ ಕುಶಲಕರ್ಮಿಗಳಿಗೆ ಆರ್ಥಿಕ ನೆರವು ನೀಡುವ ಹಾಗೂ ಅವರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕಳೆದ ವರ್ಷ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಈ ಯೋಜನೆಯ ಅಡಿಯಲ್ಲಿ ಕುಶಲಕರ್ಮಿಗಳಿಗೆ 5% ಬಡ್ಡಿಗೆ ಸುಮಾರು 3 ಲಕ್ಷದಷ್ಟು ಸಾಲ ಸೌಲಭ್ಯ ದೊರೆಯಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕಡಿಮೆ ಬಡ್ಡಿದರದ ಈ ಸಾಲ ಸೌಲಭ್ಯವನ್ನು ಪಡೆಯುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.

ಪಿಎಂ ವಿಶ್ವಕರ್ಮ ಯೋಜನೆಯಡಿ 5% ಬಡ್ಡಿಗೆ ಸಿಗಲಿದೆ 3 ಲಕ್ಷ ರೂ. ಸಾಲ; ಈ ಸೌಲಭ್ಯ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 12, 2024 | 5:19 PM

ಕೇಂದ್ರ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿವೆ. ಅವುಗಳಲ್ಲಿ ಪಿಎಂ ವಿಶ್ವಕರ್ಮ ಯೋಜನೆಯೂ ಒಂದು. ದೇಶದ ಸಾಂಪ್ರದಾಯಿಕ ಕಲೆಗಳಿಗೆ ಉತ್ತೇಜನ ನೀಡುವ ಜೊತೆ ಜೊತೆಗೆ ಕುಶಲಕರ್ಮಿಗಳ ಅಭ್ಯುದಯಕ್ಕೆ ನೆರವು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕಳೆದ ವರ್ಷ ಅಂದರೆ ಸೆಪ್ಟೆಂಬರ್ 17, 2023 ರಂದು ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೊಳಿಸಿತು. ಸಾಲ ಸೌಲಭ್ಯದಿಂದ ಹಿಡಿದು ಆಧುನಿಕ ತರಬೇತಿ, ಮಾರುಕಟ್ಟೆ ವ್ಯವಸ್ಥೆ ಸೇರಿದಂತೆ ಹಲವು ಸೌಲಭ್ಯಗಳನ್ನು ಈ ಸ್ಕೀಮ್‌ನ ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಲಕ್ಷಾಂತರ ಕುಶಲಕರ್ಮಿಗಳು ಈ ಯೋಜನೆಯ ಪ್ರಯೋಜನವನ್ನು ಕೂಡಾ ಪಡೆಯುತ್ತಿದ್ದಾರೆ. ಇದೀಗ ಪಿಎಂ ವಿಶ್ವಕರ್ಮ ಯೋಜನೆಯಡಿ 1,751 ಕೋಟಿ ರೂ. ಸಾಲವನ್ನು ಬಿಡುಗಡೆ ಮಾಡಲಾಗಿದ್ದು, ಈ ಯೋಜನೆಯಡಿ ಕುಶಲಕರ್ಮಿಗಳು 5% ಬಡ್ಡಿಗೆ ಸುಮಾರು 3 ಲಕ್ಷ ರೂ. ಗಳವರೆಗೆ ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ.

ಅಕ್ಟೋಬರ್‌ 31 ರ ವೇಳೆಗೆ ಪಿಎಂ ವಿಶ್ವಕರ್ಮ ಯೋಜನೆಯಡಿ 1,751 ಕೋಟಿ ರೂ. ಸಾಲವನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್‌ ಚೌಧರಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಅವರು, “ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಜನ ಎದುರಿಸುತ್ತಿರುವ ಸವಾಲುಗಳನ್ನು ನಿವಾರಿಸಲು, ಸಾಲ ಸೌಲಭ್ಯ ವಿತರಣೆಗೆ ಎದುರಾಗಿದ್ದ ತೊಡಕುಗಳ ನಿವಾರಣೆಗೆ ಮತ್ತು ಸುಲಭವಾಗಿ ಸಾಲ ಸಿಗುವಂತೆ ಮಾಡಲು ಸರ್ಕಾರ ವಿವಿಧ ಕ್ರಮಗಳನ್ನು ಕೈಗೊಂಡಿದೆ” ಎಂದು ಹೇಳಿದ್ದಾರೆ.

5% ಬಡ್ಡಿಗೆ 3 ಲಕ್ಷ ರೂ. ಸಾಲ:

ಬಡಿಗ, ದೋಣಿ ತಯಾರಕರು, ಕುಂಬಾರರು, ಕಮ್ಮಾರರು, ಅಕ್ಕಸಾಲಿಗರು, ಶಿಲ್ಪಿಗಳು, ಕ್ಷೌರಿಕರು, ರಾಜಮೇಸ್ತ್ರಿಗಳು, ಮೀನಿನ ಬಲೆ ತಯಾರಕರು ಸೇರಿದಂತೆ 18 ಬಗೆಯ ಕುಶಲಕರ್ಮಿಗಳಿಗಾಗಿ ಪಿಎಂ ವಿಶ್ವಕರ್ಮ ಯೋಜನೆಯನ್ನು ಕಳೆದ ವರ್ಷ ಜಾರಿಗೊಳಿಸಲಾಗಿದೆ. ಈ ಯೋಜನೆ ಅಡಿಯಲ್ಲಿ ಈ ಎಲ್ಲಾ 18 ವರ್ಗದ ಕುಶಲಕರ್ಮಿಗಳು ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆಯಬಹುದಾಗಿದೆ.

ಸ್ವಂತ ಉದ್ಯೋಗ ಅಥವಾ ಉದ್ಯಮವನ್ನು ಸ್ಥಾಪಿಸಲು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ 5% ಬಡ್ಡಿಯಲ್ಲಿ 3 ಲಕ್ಷ ರೂ. ಸಾಲ ಸೌಲಭ್ಯವನ್ನು ಒದಗಿಸಲಾಗಿದೆ. ಈ ಯೋಜನೆಯಡಿ 3 ಲಕ್ಷ ರೂಪಾಯಿ ಸಾಲವನ್ನು ಫಲಾನುಭವಿಗಳಿಗೆ ನೀಡಲಾಗುತ್ತದೆ. ಸಾಲದ ಮೊತ್ತವನ್ನು ಫಲಾನುಭವಿಗೆ 2 ಕಂತುಗಳಲ್ಲಿ ನೀಡಲಾಗುತ್ತದೆ. ಮೊದಲ ಹಂತದಲ್ಲಿ 1 ಲಕ್ಷ ಹಾಗೂ ಎರಡನೇ ಹಂತದಲ್ಲಿ 2 ಲಕ್ಷ ಸಾಲ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

PM ವಿಶ್ವಕರ್ಮ ಯೋಜನೆಗೆ ಅಧಿಕೃತ ವೆಬ್‌ಸೈಟ್ pmvishwakarma.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವೆಬ್‌ಸೈಟ್ ತೆರೆದ ನಂತರ, ನೀವು ಅನ್ವಯಿಸು ಆನ್‌ಲೈನ್ ಆಯ್ಕೆಯನ್ನು ಕ್ಲಿಕ್ ಮಾಡಬೇಕಾಗುತ್ತದೆ ಮತ್ತು ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ, ನೀವು ನೋಂದಣಿಯನ್ನು ಪೂರ್ಣಗೊಳಿಸಬೇಕಾಗುತ್ತದೆ. ನೋಂದಣಿಗಾಗಿ, ಫಲಾನುಭವಿಯು ಕಡ್ಡಾಯವಾಗಿ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಆದಾಯ ಪ್ರಮಾಣಪತ್ರ, ಗುರುತಿನ ಚೀಟಿ, ಬ್ಯಾಂಕ್ ಪಾಸ್ಬುಕ್ ವಿವರ ಮತ್ತು ವಾಸಸ್ಥಳ ದೃಢೀಕರಣ ಪತ್ರವನ್ನು ಹೊಂದಿರಬೇಕು.

ಅರ್ಹತೆ ಏನು

• ಭಾರತ ಪ್ರಜೆಯಾಗಿರಬೇಕು.

• ವಯಸ್ಸು 18 ವರ್ಷದಿಂದ 50 ವರ್ಷಗಳ ನಡುವೆ ಇರಬೇಕು.

• ಯೋಜನೆಯಲ್ಲಿ ಒಳಗೊಂಡಿರುವ 18 ವರ್ಗದ ಯಾವುದಾದರೂ ಒಂದು ಉದ್ಯಮದಲ್ಲಿ ತೊಡಗಿಸಿಕೊಂಡಿರಬೇಕು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:01 pm, Wed, 11 December 24

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ