Kerala Gold Smuggling ಪ್ರಕರಣ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಕಚೇರಿ
ತಿರುವನಂತಪುರಂ: ಕೇರಳದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಧಾನಿ ಕಾರ್ಯಾಲಯ ಮಾಹಿತಿ ಪಡೆಯಲು ಮುಂದಾಗಿದೆ. ಇದಲ್ಲದೆ, ಕೇರಳದ ಸಚಿವರೊಬ್ಬರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮೊದಲು ಸೀಮಾ ಸುಂಕ (Customs) ಇಲಾಖೆಯಿಂದ ಕೇಂದ್ರ ಸರ್ಕಾರಕ್ಕೆ ವರದಿ ಸಿಗಬೇಕು. ಅದರ ಬಳಿಕ ಉನ್ನತ ತನಿಖೆ ಬಗ್ಗೆ ಕೇಂದ್ರ ನಿರ್ಧಾರ ಕೈಗೊಳ್ಳಲಿದೆ. ಈ ಮಧ್ಯೆ ಎರ್ನಾಕುಲಂನಲ್ಲಿರುವ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸಿಬಿಐ ತಂಡವೊಂದು ಸಭೆ ನಡೆಸಿದೆ. ಈ ನಡುವೆ ವಿಪಕ್ಷಗಳು ಸಿಎಂ […]
ತಿರುವನಂತಪುರಂ: ಕೇರಳದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಧಾನಿ ಕಾರ್ಯಾಲಯ ಮಾಹಿತಿ ಪಡೆಯಲು ಮುಂದಾಗಿದೆ. ಇದಲ್ಲದೆ, ಕೇರಳದ ಸಚಿವರೊಬ್ಬರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಮೊದಲು ಸೀಮಾ ಸುಂಕ (Customs) ಇಲಾಖೆಯಿಂದ ಕೇಂದ್ರ ಸರ್ಕಾರಕ್ಕೆ ವರದಿ ಸಿಗಬೇಕು. ಅದರ ಬಳಿಕ ಉನ್ನತ ತನಿಖೆ ಬಗ್ಗೆ ಕೇಂದ್ರ ನಿರ್ಧಾರ ಕೈಗೊಳ್ಳಲಿದೆ. ಈ ಮಧ್ಯೆ ಎರ್ನಾಕುಲಂನಲ್ಲಿರುವ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸಿಬಿಐ ತಂಡವೊಂದು ಸಭೆ ನಡೆಸಿದೆ.
ಈ ನಡುವೆ ವಿಪಕ್ಷಗಳು ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆಗೆ ಒತ್ತಾಯಿಸಿವೆ. ವಿರೋಧ ಪಕ್ಷದ ನಾಯಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಚೆನ್ನಿತ್ತಲ ಪ್ರಕರಣದ ಮುಖ್ಯ ಆರೋಪಿ ಸ್ವಪ್ನಾ ಸುರೇಶ್ ಗೆ ರಾಜ್ಯದ ಮಾಹಿತಿ ತಂತ್ರಜ್ಞಾನ ಇಲಾಖೆಯಲ್ಲಿ ಆಯಕಟ್ಟಿನ ಜಾಗದಲ್ಲಿ ಉದ್ಯೋಗ ನೀಡಿ ತಿಂಗಳಿಗೆ 1.5 ಲಕ್ಷ ಸಂಬಳ ಸಹ ನಿಗದಿ ಮಾಡಲಾಗಿತ್ತು. ಇಲಾಖೆಯ ನೇರ ಜವಾಬ್ದಾರಿ ಹೊಂದಿರುವ ಸಿಎಂ ವಿಜಯನ್ ಅರಿವಿಲ್ಲದೆ ಇದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.
ಜೊತೆಗೆ ಸಿಎಂ ಪಿಣರಾಯಿ ವಿಜಯನ್ ವಜಾಗೊಂಡಿರುವ ಮಾಹಿತಿ ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಿವಶಂಕರ್ ಮತ್ತು ಸ್ವಪ್ನಾ ಸುರೇಶ್ರನ್ನ ಬಚಾವ್ ಮಾಡುವ ಯತ್ನದಲ್ಲಿ ತೊಡಗಿದ್ದಾರೆ. ಅದಕ್ಕಾಗಿ, ಸಿಎಂ ಕಾರ್ಯಾಲಯವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
Published On - 4:01 pm, Wed, 8 July 20