PMO Review: ತಮಿಳುನಾಡಿನಲ್ಲಿ ಪ್ರವಾಹ: ಉನ್ನತ ಮಟ್ಟದ ಸಭೆ ನಡೆಸಿದ ಮೋದಿ
ಪಿಎಂಒ ಅಧಿಕಾರಿಗಳು ತಮಿಳುನಾಡಿನ ಉನ್ನತ ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಮುಂದಾಗಿದ್ದಾರೆ. ಇದಲ್ಲದೇ ಜನರ ಸುರಕ್ಷತೆಗಾಗಿ ಕೇಂದ್ರವು ಹೆಲಿಕಾಪ್ಟರ್ ಜೊತೆಗೆ ಎನ್‌ಡಿಆರ್‌ಎಫ್ ಸಶಸ್ತ್ರ ಪಡೆಗಳನ್ನು ಕೂಡ ನಿಯೋಜಿಸಿದೆ.
ತಮಿಳುನಾಡು: ರಾಜ್ಯ ಮೈಚೌಂಗ್ ಚಂಡಮಾರುತದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಭಾರೀ ಮಳೆಯಿಂದ ಬಹುತೇಕ ಗ್ರಾಮಗಳು ಮುಳುಗಡೆಯ ಜೊತೆಗೆ ಸಾವಿರಾರು ಎಕರೆ ಬೆಳೆಗಳಿಗೆ ಹಾನಿಯುಂಟಾಗಿದೆ. ಭಾರೀ ಮಳೆಗೆ ಹಲವು ಮನೆಗಳು ಕುಸಿದಿದ್ದು, ಕೆಲವು ಪ್ರದೇಶಗಳು ಜಲಾವೃತಗೊಂಡಿವೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಪ್ರವಾಹ ದ ತೀವ್ರತೆ ಕಡಿಮೆಯಾಗಿದ್ದರೂ ಸಹ ಕೆಸರು ತುಂಬಿ ತೀವ್ರ ತೊಂದರೆಯಾಗುತ್ತಿದೆ. ಇಂತಹ ಸನ್ನಿವೇಶಗಳ ನಡುವೆ ಕೇಂದ್ರ ಸರ್ಕಾರ ಜನರಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸಿದ್ಧವಾಗಿದ್ದು, ಸ್ವತಹ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಧೈರ್ಯ ಹೇಳಿದ್ದಾರೆ. ಪ್ರವಾಹದ ನಂತರದ ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಈ ಪರಿಸ್ಥಿತಿಯಲ್ಲಿ ರಾಜ್ಯವನ್ನು ಬೆಂಬಲಿಸಲು ಇಂದು (ಡಿ.24) ಪಿಎಂಒದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಎನ್‌ಡಿಆರ್‌ಎಫ್ ಮತ್ತು ಹೆಲಿಕಾಪ್ಟರ್ ಸೇರಿದಂತೆ ಸಶಸ್ತ್ರ ಪಡೆಗಳ ನಿಯೋಜನೆಯ ಹೆಚ್ಚಿನ ಅಗತ್ಯತೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ವಾರದ ಹಿಂದೆ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದ್ದರು. ಸದ್ಯ ಪ್ರವಾಹ ಸಂತ್ರಸ್ತರಿಗೆ ಆಹಾರ, ಉತ್ತಮ ನೀರು ಪೂರೈಕೆ ಮಾಡಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ತಮಿಳುನಾಡಿನ ಪರಿಹಾರ ಮತ್ತು ಪುನರ್ವಸತಿ ಕ್ರಮಗಳನ್ನು ಪ್ರಧಾನಿ ಕಾರ್ಯಾಲಯ ಪರಿಶೀಲಿಸಿದೆ. ತಮಿಳುನಾಡಿನಲ್ಲಿ ಪ್ರವಾಹದ ನಂತರದ ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ರಾಜ್ಯಕ್ಕೆ ಬೆಂಬಲ ನೀಡಲು ಇಂದು ಪಿಎಂಒದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಪ್ರವಾಹದ ನಂತರದ ಪರಿಹಾರ ಮತ್ತು ಮುಂದಿನ ಕ್ರಮಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.
ಇದನ್ನೂ ಓದಿ: ಹಿಂದಿ ಭಾಷಿಗರು ತಮಿಳುನಾಡಿನಲ್ಲಿ ಶೌಚಾಲಯ ತೊಳೆಯುತ್ತಾರೆ: ದಯಾನಿಧಿ ಮಾರನ್
ಪಿಎಂಒ ಅಧಿಕಾರಿಗಳು ತಮಿಳುನಾಡಿನ ಉನ್ನತ ಸರ್ಕಾರಿ ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಮುಂದಾಗಿದೆ. ಇದಲ್ಲದೇ ಜನರ ಸುರಕ್ಷಿತೆಗಾಗಿ ಕೇಂದ್ರವು ಹೆಲಿಕಾಪ್ಟರ್ ಜೊತೆಗೆ ಎನ್‌ಡಿಆರ್‌ಎಫ್ ಸಶಸ್ತ್ರ ಪಡೆಗಳನ್ನು ಕೂಡ ನಿಯೋಜಿಸಿದೆ.ಹೆಚ್ಚಿನ ಪರಿಹಾರ ಕ್ರಮಗಳ ಅಗತ್ಯವಿದ್ದಲ್ಲಿ ಮಾಹಿತಿ ನೀಡುವಂತೆ ಸೂಚಿಸಲಾಗಿದ್ದು, ಬೆಳೆ, ಜೀವ ಮತ್ತು ಆಸ್ತಿ ನಷ್ಟವನ್ನು ನಿರ್ಣಯಿಸಲು ರಾಜ್ಯದ ಸಚಿವಾಲಯಗಳ ಸಮನ್ವಯದಲ್ಲಿ ಕೇಂದ್ರ ತಂಡದ ಭೇಟಿ ಕುರಿತು ಚರ್ಚಿಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:04 pm, Sun, 24 December 23