AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುಕುಲದಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಅವಿಮುಕ್ತೇಶ್ವರಾನಂದ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲು

ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಗಳಿಗೆ ಸಂಬಂಧಿಸಿದಂತೆ ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರಿಗೆ ಭಾರೀ ಹಿನ್ನಡೆಯಾಗಿದೆ. ಅವಿಮುಕ್ತೇಶ್ವರಾನಂದ ಸ್ವಾಮೀಜಿ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಪ್ರಯಾಗ್‌ರಾಜ್‌ನ ಎಡಿಜೆ ಅತ್ಯಾಚಾರ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯವು ಇಂದು ಮಹತ್ವದ ಆದೇಶವನ್ನು ಹೊರಡಿಸಿದೆ. ಎಡಿಜೆ ಪೋಕ್ಸೋ ಕಾಯ್ದೆಯಡಿಯಲ್ಲಿ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಗಿರಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ವಿನೋದ್ ಕುಮಾರ್ ಚೌರಾಸಿಯಾ ನಿರ್ದೇಶನ ನೀಡಿದ್ದಾರೆ. ಈ ಕುರಿತು ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸುವಂತೆ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ.

ಗುರುಕುಲದಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಅವಿಮುಕ್ತೇಶ್ವರಾನಂದ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲು
Avimukteshwaranand Swami
ಸುಷ್ಮಾ ಚಕ್ರೆ
|

Updated on:Feb 21, 2026 | 6:54 PM

Share

ನವದೆಹಲಿ, ಫೆಬ್ರವರಿ 21: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಎಡಿಜೆ ಅತ್ಯಾಚಾರ ಮತ್ತು ಪೋಕ್ಸೋ (POCSO) ವಿಶೇಷ ನ್ಯಾಯಾಲಯವು ಜ್ಯೋತಿಷ್ ಪೀಠದ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮೀಜಿ ಮತ್ತು ಅವರ ಶಿಷ್ಯ ಮುಕುಂದಾನಂದ ಗಿರಿ ವಿರುದ್ಧ ಗಂಭೀರ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದೆ. ನ್ಯಾಯಾಧೀಶ ವಿನೋದ್ ಕುಮಾರ್ ಚೌರಾಸಿಯಾ ಅವರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸುವಂತೆ ಜೋನ್ಸಿ ಪೊಲೀಸ್ ಠಾಣೆಗೆ ಆದೇಶಿಸಿದ್ದಾರೆ.

ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ನ ಅಧ್ಯಕ್ಷ ಶಕುಂಭರಿ ಪೀಠಾಧೀಶ್ವರ ಅಶುತೋಷ್ ಬ್ರಹ್ಮಚಾರಿ ಮಹಾರಾಜ್ ಅವರು ಜನವರಿ 28ರಂದು ಸೆಕ್ಷನ್ 173(4) ಸಿಆರ್‌ಪಿಸಿ ಅಡಿಯಲ್ಲಿ ಸಲ್ಲಿಸಿದ ಅರ್ಜಿಯ ಬಳಿಕ ಈ ಪ್ರಕರಣ ಗಮನ ಸೆಳೆದಿತ್ತು. ವಾರಾಣಸಿಯ ವಿದ್ಯಾಮಠದಲ್ಲಿ ‘ಗುರು ಸೇವೆ’ಯ ಸೋಗಿನಲ್ಲಿ ಅವಿಮುಕ್ತೇಶ್ವರಾನಂದ ಸ್ವಾಮಿಯ ಆಶ್ರಮವು ಗುರುಕುಲದಲ್ಲಿರುವ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ನಡೆಸುತ್ತಿದೆ ಎಂದು ಅವರು ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದರು. ಅವರು ಅದಕ್ಕೆ ಸಾಕ್ಷ್ಯವಾಗಿ ಸಿಡಿಯನ್ನು ಸಲ್ಲಿಸಿದ್ದರು. ತಮ್ಮನ್ನು ಸಂಪರ್ಕಿಸಿದ್ದ ಸ್ವಾಮೀಜಿಯಿಂದ ಕಿರುಕುಳಕ್ಕೆ ಒಳಗಾದ ಸುಮಾರು 20 ಮಕ್ಕಳ ಬಗ್ಗೆ ಅದರಲ್ಲಿ ನಮೂದಿಸಿದ್ದರು. ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು.

ಇದನ್ನೂ ಓದಿ: ಧರ್ಮಗುರುವಿನಿಂದ ಬಾಲಕಿಗೆ ಲೈಂಗಿಕ ಕಿರುಕುಳ; ಮಗು ಹುಟ್ಟೋವರೆಗೂ ಗರ್ಭಿಣಿಯಾದ ವಿಷಯವೇ ಗೊತ್ತಾಗಲಿಲ್ಲ!

ಫೆಬ್ರವರಿ 13ರಂದು, ನ್ಯಾಯಾಲಯವು ಇಬ್ಬರು ಅಪ್ರಾಪ್ತ ಬಾಲಕರಿಂದ ವೀಡಿಯೊ-ಗ್ರಾಫ್ ಮಾಡಿದ ಹೇಳಿಕೆಗಳನ್ನು ದಾಖಲಿಸಿತ್ತು. ಪೊಲೀಸ್ ವರದಿಯ ಜೊತೆಗೆ ಈ ಸಾಕ್ಷ್ಯಗಳನ್ನು ಪರಿಶೀಲಿಸಿದ ನಂತರ, ನ್ಯಾಯಾಧೀಶರು ಎಫ್‌ಐಆರ್ ದಾಖಲಿಸುವ ನಿರ್ದೇಶನವನ್ನು ನೀಡುವ ಮೊದಲು ತೀರ್ಪನ್ನು ಕಾಯ್ದಿರಿಸಿದ್ದರು. ಇದೀಗ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಿಸಿ ತನಿಖೆ ನಡೆಸಲು ಆದೇಶ ನೀಡಲಾಗಿದೆ.

ದೂರುದಾರ ಆಶುತೋಷ್ ಬ್ರಹ್ಮಚಾರಿ ಈ ತೀರ್ಪನ್ನು ದೈವಿಕ ನ್ಯಾಯವೆಂದು ಶ್ಲಾಘಿಸಿದ್ದಾರೆ. ಜನರಿಗೆ ಸತ್ಯವನ್ನು ಬಹಿರಂಗಪಡಿಸಲು ಪ್ರಯಾಗರಾಜ್‌ನಿಂದ ವಿದ್ಯಾಮಠ ವಾರಾಣಸಿಗೆ ಪಾದಯಾತ್ರೆಯನ್ನು ನಡೆಸುವುದಾಗಿ ಅವರು ಪ್ರತಿಜ್ಞೆ ಮಾಡಿದ್ದಾರೆ. ಸ್ವಾಮೀಜಿಯ ಬಣವು ಈ ಆರೋಪಗಳನ್ನು ಅವರ ಗೋಸಂರಕ್ಷಣಾ ಕಾರ್ಯವನ್ನು ಹಳಿತಪ್ಪಿಸಲು ರೂಪಿಸಲಾದ ಆರೋಪಗಳೆಂದು ತಳ್ಳಿಹಾಕಿದೆ. ಆದರೆ, ಕಾನೂನಿನ ಮುಂದೆ ಎಲ್ಲರೂ ಒಂದೇ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:47 pm, Sat, 21 February 26

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More