
ಕೌಶಾಂಬಿ, ಜುಲೈ 22: ಮಹಿಳೆಯೊಬ್ಬಳು ತನ್ನದೇ ಕುಟುಂಬದ 8 ಸದಸ್ಯರನ್ನು ಕೊಲ್ಲಲು ಗೋಧಿ ಹಿಟ್ಟಿನಲ್ಲಿ ವಿಷ(Poison) ಬೆರೆಸಿದ್ದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ಘಟನೆ ನಡೆದಿದೆ. ಮಹಿಳೆ ಎಲ್ಲರನ್ನೂ ಕೊಲ್ಲುವ ಉದ್ದೇಶದಿಂದ ತಂದೆ ಜತೆಗೆ ಸೇರಿ ಈ ಕೃತ್ಯವೆಸಗಿದ್ದಳು. ಗೋಧಿ ಹಿಟ್ಟಿಗೆ ಸಲ್ಫೋಸ್ ಬೆರೆಸಿದ್ದಳು.
ಈ ಸಂಚು ಸಕಾಲದಲ್ಲಿ ಬಯಲಾಗಿದ್ದು, ಎಲ್ಲರ ಜೀವ ಉಳಿದಿವೆ, ಮಹಿಳೆ ಮತ್ತೆ ಆಕೆಯ ತಂದೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಲಕಿಯಾ ಬಾಜಾ ಖುರ್ರಂ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬ್ರಿಜೇಶ್ ಕುಮಾರ್ ಅವರ ಪತ್ನಿ ಮಾಲತಿದೇವಿ ನಿರಂತರ ನಡೆಯುತ್ತಿದ್ದ ಕೌಟುಂಬಿಕ ಕಲಹದಿಂದಾಗಿ ತನ್ನ ತಂದೆ ಜತೆ ಸೇರಿ ಯೋಜನೆ ರೂಪಿಸಿದ್ದಳು.
ಮಾಲತಿ ತನ್ನ ಅತ್ತಿಗೆ ಮಂಜು ದೇವಿ ಜತೆಗೆ ದೀರ್ಘಕಾಲದಿಂದ ನಡೆಯುತ್ತಿದ್ದ ಜಗಳದಿಂದ ಅಸಮಾಧಾನಗೊಂಡು ಇಡೀ ಕುಟುಂಬವನ್ನೇ ನಿರ್ಮೂಲನೆ ಮಾಡಲು ಮುಂದಾಗಿದ್ದಳು. ಮಂಜು ದೇವಿ ಆಹಾರ ಸಿದ್ಧಪಡಿಸಲು ಹೋದಾಗ ಗೋಧಿ ಹಿಟ್ಟಿನಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದಾಗ ಮಾಲತಿಯಯ ಉದ್ದೇಶ ಏನಿರಬಹುದು ಎಂಬುದು ತಿಳಿಯಿತು. ಕೂಡಲೇ ಕುಟುಂಬದ ಎಲ್ಲಾ ಸದಸ್ಯರಿಗೂ ಮಾಹಿತಿ ನೀಡಲಾಗಿತ್ತು. ವಿಚಾರಣೆ ಸಮಯದಲ್ಲಿ ಆಕೆ ಸಲ್ಫೋಸ್ ಮಿಶ್ರಣ ಮಾಡಿರುವುದು ಹೌದೆಂದು ಒಪ್ಪಿಕೊಂಡಿದ್ದಾಳೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದರು. ಮಾಲತಿ ದೇವಿ ಮತ್ತು ಆಕೆಯ ತಂದೆಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.
ಮತ್ತೊಂದು ಘಟನೆ
ಅವಳಿಗೆ ಸಾಯಬೇಕೆನಿಸಿತ್ತು, ಅದಕ್ಕೆ ಕೊಂದೆ; ಮಾಜಿ ಪ್ರೇಯಸಿಗೆ ವಿಷ ಹಾಕಿ ಸಾಯಿಸಿದ ಬಳಿಕ ತಪ್ಪೊಪ್ಪಿಕೊಂಡ ಯುವಕ!
ಮಾಜಿ ಲಿವ್ ಇನ್ ರಿಲೇಷನ್ ಸಂಗಾತಿಗೆ ವಿಷ ಹಾಕಿ ಕೊಂದಿರುವ ಯುವಕನೊಬ್ಬ ‘ಅವಳು ಸಾಯಲು ಬಯಸಿದ್ದಳು, ಅದಕ್ಕೆ ನಾನೇ ಅವಳನ್ನು ಕೊಂದೆ’ ಎಂದು ಹೇಳುವ ಮೂಲಕ ಪೊಲೀಸರಿಗೇ ಶಾಕ್ ನೀಡಿದ್ದಾನೆ.
ಉತ್ತರ ಪ್ರದೇಶದ ಲಲಿತಪುರದಲ್ಲಿ ಈ ಘಟನೆ ನಡೆದಿದೆ. ತನ್ನ ಮಾಜಿ ಪ್ರೇಯಸಿಗೆ ವಿಷಪ್ರಾಶನ ಮಾಡಿ ಕೊಲೆ ಮಾಡಿದ ನಂತರ ಯುವಕ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ. ಮೃತ ಯುವತಿ ರಾಣಿಯ ದೇಹವು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದ್ದು, ಪೊಲೀಸರಿಗೆ ಅವಳನ್ನು ಗುರುತಿಸುವುದು ಕಷ್ಟಕರವಾಗಿತ್ತು. ಆ ಯುವತಿಯ ಕೈಯಲ್ಲಿ ‘ಆರ್-ಜಗದೀಶ್’ ಎಂದು ಬರೆದಿದ್ದರಿಂದ ಅದು ಮಹಿಳೆಯನ್ನು ಗುರುತಿಸಲು ಸಹಾಯ ಮಾಡಿತು.
ಉತ್ತರ ಪ್ರದೇಶದ ಲಲಿತಪುರದಲ್ಲಿ ಒಬ್ಬ ವ್ಯಕ್ತಿ ತನ್ನ ಮಾಜಿ ಸಂಗಾತಿಯ ವಿಘಟನೆಯ ನಂತರ ಆಕೆಗೆ ವಿಷಪ್ರಾಶನ ಮಾಡಿ ಕೊಂದನು. ಆರೋಪಿ ಜಗದೀಶ್ ರಾಯ್ಕ್ವಾರ್ ತನ್ನ ಪ್ರಿಯತಮೆಯನ್ನು ಹೇಗೆ ಕೊಲ್ಲುವುದು ಮತ್ತು ನಂತರ ಆಕೆಗೆ ವಿಷ ಕುಡಿಸಿ ದೇಹವನ್ನು ನದಿಗೆ ಎಸೆಯುವುದು ಎಂದು ಗೂಗಲ್‌ನಲ್ಲಿ ಹುಡುಕಿದ್ದ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ