ಪಿಒಕೆಯಲ್ಲಿನ ಹಿಂಸಾಚಾರಕ್ಕೆ ಪಾಕಿಸ್ತಾನವೇ ಹೊಣೆ; ಭಾರತ ಆರೋಪ
ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿ ಹೆಚ್ಚಾಗಿರುವ ಅಶಾಂತಿ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಭಾರತ ಪಾಕ್ ವಿರುದ್ಧ ವಾಗ್ದಾಳಿ ನಡೆಸಿದೆ. ಪಾಕಿಸ್ತಾನ ಸರ್ಕಾರದ ವಿರುದ್ಧ ಪಿಒಕೆಯಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇದು 12 ನಾಗರಿಕರ ಸಾವಿಗೆ ಕಾರಣವಾಗಿದೆ. ಜಂಟಿ ಅವಾಮಿ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

ನವದೆಹಲಿ, ಅಕ್ಟೋಬರ್ 3: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಇತ್ತೀಚೆಗೆ ನಡೆದ ಪ್ರತಿಭಟನೆಗಳ ಕುರಿತು ಭಾರತ ಇಂದು ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ನಡೆಯುತ್ತಿರುವ ಪ್ರಕ್ಷುಬ್ಧತೆಯು ಪಾಕಿಸ್ತಾನದ ದಶಕಗಳ ಶೋಷಣೆ ಮತ್ತು ದಬ್ಬಾಳಿಕೆಯ ಅನಿವಾರ್ಯ ಪರಿಣಾಮವಾಗಿದೆ. ಈ ಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಭಾರತ ಹೇಳಿದೆ.
ಪಿಒಕೆಯಲ್ಲಿನ ಸಂಘರ್ಷ ಪಾಕಿಸ್ತಾನದ ‘ದಬ್ಬಾಳಿಕೆಯ ನೀತಿಗಳ’ ಪರಿಣಾಮ ಎಂದು ಭಾರತ ಹೇಳಿದೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ (ಎಂಇಎ) ವಕ್ತಾರ ರಣಧೀರ್ ಜೈಸ್ವಾಲ್, ಪಿಒಕೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಗೆ ಪಾಕಿಸ್ತಾನವೇ ಕಾರಣ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ತಾನದ 5 ಯುದ್ಧ ವಿಮಾನ ಪತನ; ಐಎಎಫ್ ಮುಖ್ಯಸ್ಥ ಮಹತ್ವದ ಮಾಹಿತಿ
“ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಹಲವಾರು ಪ್ರದೇಶಗಳಲ್ಲಿ ನಡೆದ ಪ್ರತಿಭಟನೆಗಳ ವರದಿಗಳನ್ನು ನಾವು ನೋಡಿದ್ದೇವೆ. ಅಲ್ಲಿ ಪಾಕಿಸ್ತಾನಿ ಪಡೆಗಳು ಅಮಾಯಕ ನಾಗರಿಕರ ಮೇಲೆ ದೌರ್ಜನ್ಯಗಳನ್ನು ನಡೆಸಿವೆ. ಪಾಕಿಸ್ತಾನವು ತನ್ನ ಭಯಾನಕ ಮಾನವ ಹಕ್ಕುಗಳ ಉಲ್ಲಂಘನೆಗೆ ಹೊಣೆಗಾರನಾಗಬೇಕು” ಎಂದು ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
VIDEO | Delhi: In a press briefing, MEA Spokesperson Randhir Jaiswal (@MEAIndia) commented on the violence in PoK: “We have seen reports of protests across several areas of Pakistan-occupied Kashmir, including acts of brutality by Pakistani forces against innocent civilians. This… pic.twitter.com/FBvYQa0cwC
— Press Trust of India (@PTI_News) October 3, 2025
ಇದನ್ನೂ ಓದಿ: ಭಯೋತ್ಪಾದನೆಯನ್ನು ನಿಲ್ಲಿಸದಿದ್ದರೆ ಭೂಪಟದಿಂದಲೇ ಮಾಯವಾಗುತ್ತೀರಿ; ಪಾಕಿಸ್ತಾನಕ್ಕೆ ಸೇನಾ ಮುಖ್ಯಸ್ಥ ಎಚ್ಚರಿಕೆ
ಪಾಕಿಸ್ತಾನ ಸರ್ಕಾರದ ವಿರುದ್ಧ ಪಿಒಕೆಯಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇದು 12 ನಾಗರಿಕರ ಸಾವಿಗೆ ಕಾರಣವಾಯಿತು. ಈ ಘಟನೆಯಲ್ಲಿ 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪಿಒಕೆ ಜನರಿಗೆ ಆರ್ಥಿಕ ಪರಿಹಾರ ಮತ್ತು ಹೆಚ್ಚಿನ ರಾಜಕೀಯ ಸ್ವಾಯತ್ತತೆಯನ್ನು ನೀಡುವಂತೆ ಒತ್ತಾಯಿಸುತ್ತಿರುವ ಜಂಟಿ ಅವಾಮಿ ಕ್ರಿಯಾ ಸಮಿತಿ (ಜೆಎಎಸಿ) ನೇತೃತ್ವದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.
ಪ್ರತಿಭಟನೆಗಳ ಕಾರಣದಿಂದಾಗಿ, ಸ್ಥಳೀಯ ಅಧಿಕಾರಿಗಳು ಪಿಒಕೆಯಲ್ಲಿ ಮೊಬೈಲ್ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ಮುಜಫರಾಬಾದ್‌ನಾದ್ಯಂತ ಹೋಟೆಲ್‌ಗಳು, ಅಂಗಡಿಗಳು ಮತ್ತು ವಾಣಿಜ್ಯ ಕೇಂದ್ರಗಳು ಸಹ ಮುಚ್ಚಲ್ಪಟ್ಟಿವೆ. ಈ ಪ್ರದೇಶದಲ್ಲಿ ನಿರ್ಬಂಧಗಳು ಮುಂದುವರಿಯುವ ಸಾಧ್ಯತೆಯಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:18 pm, Fri, 3 October 25




