AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಂಧಿತ ಸಂಸದೆ ನವನೀತ್​ ರಾಣಾ ಆರೋಪಕ್ಕೆ ವಿಡಿಯೋ ಮೂಲಕ ತಿರುಗೇಟು ಕೊಟ್ಟ ಮುಂಬೈ ಪೊಲೀಸ್​ ಆಯುಕ್ತ ಸಂಜಯ್ ಪಾಂಡೆ

ಮಹಾರಾಷ್ಟ್ರದ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಸುದ್ದಿಗೋಷ್ಠಿ ನಡೆಸಿ, ಹನುಮಾನ್ ಚಾಲೀಸಾ ಪಠಿಸುವುದು ಅಷ್ಟು ದೊಡ್ಡ ಅಪರಾಧವಾಗಿದ್ದರೆ, ದೇಶದ್ರೋಹವಾಗಿದ್ದರೆ, ನಮ್ಮೆಲ್ಲರನ್ನೂ ಬಂಧಿಸಲಿ ಎಂದು ಹೇಳಿದ್ದರು.

Video: ಬಂಧಿತ ಸಂಸದೆ ನವನೀತ್​ ರಾಣಾ ಆರೋಪಕ್ಕೆ ವಿಡಿಯೋ ಮೂಲಕ ತಿರುಗೇಟು ಕೊಟ್ಟ ಮುಂಬೈ ಪೊಲೀಸ್​ ಆಯುಕ್ತ ಸಂಜಯ್ ಪಾಂಡೆ
ಪೊಲೀಸ್ ಮುಖ್ಯಸ್ಥ ಬಿಡುಗಡೆ ಮಾಡಿದ ವಿಡಿಯೋದಲ್ಲಿರುವ ದೃಶ್ಯ
TV9 Web
| Edited By: |

Updated on:Apr 26, 2022 | 4:31 PM

Share

ಮಹಾರಾಷ್ಟ್ರ ಸ್ವತಂತ್ರ ಸಂಸದೆ ನವನೀತ್​ ರಾಣಾ ಮತ್ತು ಆಕೆಯ ಪತಿ ಶಾಸಕ ರವಿ ರಾಣಾ ಬಂಧನವಾಗಿದೆ. ಸದ್ಯ ಅವರು ಪ್ರತ್ಯೆಕ ಜೈಲಿನಲ್ಲಿ ಇದ್ದಾರೆ. ಇವರಿಬ್ಬರೂ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮನೆಯ ಹೊರಗೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿದ್ದ ಹಿನ್ನೆಲೆಯಲ್ಲಿ ಅರೆಸ್ಟ್ ಮಾಡಲಾಗಿದೆ. ಈ ದಂಪತಿ ವಿರುದ್ಧ ದೇಶದ್ರೋಹ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಇದೆಲ್ಲದರ ಮಧ್ಯೆ ನವನೀತ್​ ರಾಣಾ ಪೊಲೀಸರ ವಿರುದ್ಧ ಆರೋಪ ಮಾಡಿದ್ದರು. ಪೊಲೀಸರು ತನ್ನನ್ನು ಬಂಧಿಸಿ ಕರೆದುಕೊಂಡು ಹೋದ ಬಳಿಕ ನನ್ನೊಂದು ಅಮಾನವೀಯವಾಗಿ ವರ್ತಿಸಿದ್ದಾರೆ. ಹೀಗಾಗಿ ಪೊಲೀಸ್ ಮುಖ್ಯಸ್ಥ ಸಂಜಯ್​ ಪಾಂಡೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ಹೇಳಿದ್ದರು. ನವನೀತ್​ ರಾಣಾ ಆರೋಪ ಮಾಡಿದ ಬೆನ್ನಲ್ಲೇ, ಈ ಬಗ್ಗೆ ವರದಿ ನೀಡುವಂತೆ ಮಹಾರಾಷ್ಟ್ರ ಪೊಲೀಸರಿಗೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ.

ಆದರೆ ನವನೀತ್​ ರಾಣಾ ಆರೋಪವನ್ನು ಮುಂಬೈ ಪೊಲೀಸ್ ಮುಖ್ಯಸ್ಥ ಸಂಜಯ್ ಪಾಂಡೆ ಖಂಡಿಸಿದ್ದಾರೆ. ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿರುವ ಅವರು, ನಾನೇನೂ ಹೇಳುವುದಿಲ್ಲ. ಎಲ್ಲವನ್ನೂ ಈ ವಿಡಿಯೋವೇ ಹೇಳುತ್ತದೆ ಎಂದಿದ್ದಾರೆ. ಅದರಲ್ಲಿ ನವನೀತ್ ರಾಣಾ ಮತ್ತು ಆಕೆಯ ಪತಿ ಇಬ್ಬರೂ ಪೊಲೀಸ್​ ಸ್ಟೇಶನ್​​ನಲ್ಲಿ ಆರಾಮಾಗಿ ಕುಳಿತು, ಟೀ ಕುಡಿಯುತ್ತಿರುವ ದೃಶ್ಯವಿದೆ.

ಹಾಗೇ, ಹನುಮಾನ್​ ಚಾಲೀಸಾ ಪಠಿಸುತ್ತೇನೆ ಎಂದು ಹೇಳಿದ್ದಕ್ಕೆ ಈ ರಾಜಕಾರಣಿ ದಂಪತಿಯನ್ನು ಬಂಧಿಸಿದ್ದಕ್ಕೆ ಬಿಜೆಪಿ ಕೂಡ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.  ಮಹಾರಾಷ್ಟ್ರದ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಸುದ್ದಿಗೋಷ್ಠಿ ನಡೆಸಿ, ಹನುಮಾನ್ ಚಾಲೀಸಾ ಪಠಿಸುವುದು ಅಷ್ಟು ದೊಡ್ಡ ಅಪರಾಧವಾಗಿದ್ದರೆ, ದೇಶದ್ರೋಹವಾಗಿದ್ದರೆ, ನಮ್ಮೆಲ್ಲರನ್ನೂ ಬಂಧಿಸಲಿ ಎಂದು ಹೇಳಿದ್ದರು. ಇನ್ನೊಂದೆಡೆ ಎನ್​ಸಿಪಿ ನಾಯಕಿ ಫಹ್ಮಿದಾ ಹಸನ್ ಖಾನ್ ಪ್ರಧಾನಿ ಅಮಿತ್ ಶಾ ಅವರಿಗೆ ಪತ್ರ ಬರೆದು, ತಾನು ಪ್ರಧಾನಿ ನಿವಾಸದ ಎದುರು ನಮಾಜ್ ಮಾಡಲು, ಹನುಮಾನ್ ಚಾಲೀಸಾ ಪಠಿಸಲು ಬಯಸುತ್ತೇನೆ ಅನುಮತಿ ಕೊಡಿ ಎಂದು ಕೇಳಿದ್ದಾರೆ.

ಇದನ್ನೂ ಓದಿ:  Heatwave: ಭಾರತದಲ್ಲಿ ತೀವ್ರಗೊಳ್ಳುತ್ತಿದೆ ಉಷ್ಣ ಅಲೆ; ತಾಪಮಾನ ಏರಿಕೆಯಿಂದ ಅಪಾಯ ಕಟ್ಟಿಟ್ಟ ಬುತ್ತಿ

Published On - 4:27 pm, Tue, 26 April 22

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ