ರಾಷ್ಟ್ರಧ್ವಜದ ಅವಹೇಳನ ಆರೋಪ: ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ದೂರು ದಾಖಲು

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 01, 2022 | 6:59 AM

ಒಂದಲ್ಲ ಒಂದು ದಿನ ಕೇಸರಿ ಧ್ವಜ ವೇ ಭಾರತದ ರಾಷ್ಟ್ರಧ್ವಜವಾಗುತ್ತದೆ ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದರು.

ರಾಷ್ಟ್ರಧ್ವಜದ ಅವಹೇಳನ ಆರೋಪ: ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ದೂರು ದಾಖಲು
ಕೆ.ಎಸ್. ಈಶ್ವರಪ್ಪ
Follow us on

ದೆಹಲಿ: ಕರ್ನಾಟಕದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ವಿರುದ್ಧ ದೆಹಲಿಯಲ್ಲಿ ಆದ್ಮ ಆದ್ಮಿ ಪಕ್ಷದ (Aam Aadmi Party – AAP) ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಒಂದಲ್ಲ ಒಂದು ದಿನ ಕೇಸರಿ ಧ್ವಜ ವೇ ಭಾರತದ ರಾಷ್ಟ್ರಧ್ವಜವಾಗುತ್ತದೆ ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದರು. ಇಂಥ ಹೇಳಿಕೆ ನೀಡಿದ್ದ ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಸಂಜಯ್ ಸಿಂಗ್ ಆಗ್ರಹಿಸಿದ್ದಾರೆ.

ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಈಶ್ವರಪ್ಪ, ‘ಕೇಸರಿ ಧ್ವಜವು ಸಾವಿರಾರು ವರ್ಷಗಳಿಂದ ದೇಶದ ಗೌರವಕ್ಕೆ ಪಾತ್ರವಾಗಿದೆ. ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ದೇಶದ ಬಾವುಟವಾಗುತ್ತದೆ’ ಎಂದು ಹೇಳಿದ್ದರು ಎಂದು ದೂರಲಾಗಿದೆ.

ದೆಹಲಿಯ ನಾರ್ತ್ ಅವೆನ್ಯೂ ಪೊಲೀಸ್ ಠಾಣೆಗೆ ಆಪ್ ನಾಯಕ ಸಿಂಗ್ ದೂರು ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸಂಜಯ್ ಸಿಂಗ್, ‘ಕರ್ನಾಟಕದ ಮಾಜಿ ಸಚಿವ, ಹಾಲಿ ಶಾಸಕ ಈಶ್ವರಪ್ಪ ವಿರುದ್ಧ ಎಫ್​ಐಆರ್ ದಾಖಲಿಸಲು ಅರ್ಜಿ ನೀಡಿದ್ದೇನೆ. ಈಶ್ವರಪ್ಪ ಅವರು ರಾಷ್ಟ್ರಧ್ವಜವನ್ನು ಅವಮಾನಿಸಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ (Rashtriya Swayam Sevaka Sangha – RSS) ಪ್ರಧಾನ ಕಚೇರಿಯ ಮೇಲೆ ಕಳೆದ 50 ವರ್ಷಗಳಿಂದ ರಾಷ್ಟ್ರಧ್ವಜ ಹಾರಿಸುತ್ತಿಲ್ಲ. ಬಿಜೆಪಿ ಸಹ ರಾಷ್ಟ್ರಧ್ವಜವನ್ನು ವಿರೋಧಿಸಿತ್ತು’ ಎಂದು ಹೇಳಿದ್ದಾರೆ.

‘ರಾಷ್ಟ್ರಧ್ವಜವನ್ನು ಅವಮಾನಿಸಿರುವ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸುವುದಷ್ಟೇ ಅಲ್ಲ, ಅವರನ್ನು ಬಂಧಿಸಬೇಕು’ ಎಂದು ಆಗ್ರಹಿಸಿದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:58 am, Wed, 1 June 22