AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

INDIA ಪದದ ‘ಅಸಮರ್ಪಕ ಬಳಕೆ’ಗಾಗಿ 26 ವಿರೋಧ ಪಕ್ಷಗಳ ವಿರುದ್ಧ ದೂರು ದಾಖಲು

ಮಂಗಳವಾರ, ಬೆಂಗಳೂರಿನಲ್ಲಿ ನಡೆದ ಜಂಟಿ ಸಭೆಯ ನಂತರ 26 ವಿರೋಧ ಪಕ್ಷಗಳು ತಮ್ಮ ಮೈತ್ರಿಗೆ 'ಇಂಡಿಯಾ' (Indian National Developmental Inclusive Alliance) ಎಂಬ ಹೆಸರು ಘೋಷಿಸಿತ್ತು.

INDIA ಪದದ 'ಅಸಮರ್ಪಕ ಬಳಕೆ'ಗಾಗಿ 26 ವಿರೋಧ ಪಕ್ಷಗಳ ವಿರುದ್ಧ ದೂರು ದಾಖಲು
ವಿಪಕ್ಷಗಳ ಸಭೆ
ರಶ್ಮಿ ಕಲ್ಲಕಟ್ಟ
|

Updated on:Jul 19, 2023 | 8:10 PM

Share

ದೆಹಲಿ ಜುಲೈ 19:ಇಂಡಿಯಾ (INDIA) ಹೆಸರನ್ನು ಅಸಮರ್ಪಕವಾಗಿ ಬಳಸಿದ ಆರೋಪದ ಮೇಲೆ 26 ವಿರೋಧ ಪಕ್ಷಗಳ ವಿರುದ್ಧ ದೆಹಲಿಯ ಬರಾಖಂಬಾ ಪೊಲೀಸ್ (Barakhamba Police Station) ಠಾಣೆಯಲ್ಲಿ ಪೊಲೀಸ್ ದೂರು ದಾಖಲಾಗಿದೆ. ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಮತ್ತು ಗುರುತಿಸುವುದಕ್ಕಾಗಿ ಈ ಹೆಸರನ್ನು ಬಳಸಲಾಗಿದೆ. ಹಾಗಾಗಿ ಮೈತ್ರಿ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ದೂರುದಾರ ಡಾ.ಅವಿನೀಶ್ ಮಿಶ್ರಾ ಒತ್ತಾಯಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಮಂಗಳವಾರ, ಬೆಂಗಳೂರಿನಲ್ಲಿ ನಡೆದ ಜಂಟಿ ಸಭೆಯ ನಂತರ 26 ವಿರೋಧ ಪಕ್ಷಗಳು ತಮ್ಮ ಮೈತ್ರಿಗೆ ‘ಇಂಡಿಯಾ’ (Indian National Developmental Inclusive Alliance) ಎಂಬ ಹೆಸರು ಘೋಷಿಸಿತ್ತು.

ಮೈತ್ರಿಯ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿದ ಡಾ.ಅವಿನೀಶ್ ಮಿಶ್ರಾ, ಚುನಾವಣೆಯಲ್ಲಿ ಅನಗತ್ಯವಾಗಿ ‘ಇಂಡಿಯಾ’ ಎಂಬ ಪದವನ್ನು ಬಳಸಲಾಗುತ್ತಿದ್ದು, ಜನರ ಭಾವನೆಗಳಿಗೆ ಧಕ್ಕೆ ತಂದಿರುವ ಕಾರಣ ಪಕ್ಷಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. 26 ರಾಜಕೀಯ ಪಕ್ಷಗಳು ದೇಶದ ಹೆಸರನ್ನು ದುರ್ಬಳಕೆ ಮಾಡಿಕೊಂಡಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಲಾಂಛನಗಳ ಕಾಯಿದೆಯ ಸೆಕ್ಷನ್ 2(ಸಿ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ,. ಲಾಂಛನಗಳ ಕಾಯಿದೆಯ ಸೆಕ್ಷನ್ 5, ಲಾಂಛನಗಳ ಕಾಯಿದೆಯ ಸೆಕ್ಷನ್ 3 ರ ನಿಬಂಧನೆಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ₹ 500 ದಂಡವನ್ನು ವಿಧಿಸಲು ಅವಕಾಶ ನೀಡುತ್ತದೆ ಎಂದು ಎಎನ್ಐ ವರದಿ ಉಲ್ಲೇಖಿಸಿದೆ.

ಇಂದು ಬೆಳಗ್ಗೆ ಮಹಾರಾಷ್ಟ್ರ ಬಿಜೆಪಿ ನಾಯಕ ಅಶುತೋಷ್ ದುಬೆ ಕೂಡ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ‘ಇಂಡಿಯಾ’ವನ್ನು ಪ್ರತಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದು ಇದು ದೇಶದ ಘನತೆಗೆ ಅಗೌರವ ತಂದಿದೆ ಎಂದು ಹೇಳಿದ್ದಾರೆ.

“ಈ ವಿಷಯದಲ್ಲಿ ನಿಮ್ಮ ಮಧ್ಯಸ್ಥಿಕೆಯು ನಮ್ಮ ರಾಷ್ಟ್ರದ ಘನತೆಯನ್ನು ಕಾಪಾಡಿಕೊಳ್ಳಲು ಮತ್ತು ನಮ್ಮ ದೇಶ ನಿಂತಿರುವ ಪ್ರಜಾಪ್ರಭುತ್ವದ ತತ್ವಗಳನ್ನು ಕಾಪಾಡಲು ಸಹಾಯ ಮಾಡುತ್ತದೆ ಎಂದು ನಾನು ನಂಬುತ್ತೇನೆ” ಎಂದು ಬಿಜೆಪಿ ನಾಯಕ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಎದುರಿಸಲು 26 ವಿರೋಧ ಪಕ್ಷಗಳು ಮಂಗಳವಾರ ‘ಇಂಡಿಯಾ’ ಎಂಬ ಮೈತ್ರಿಕೂಟ ರಚಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು “ಇಂಡಿಯಾ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ” ಹೋರಾಟ ನಡೆಯಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಟ್ವಿಟರ್​​ನಲ್ಲಿ 9 ಕೋಟಿ ದಾಟಿದ ಫಾಲೋಯರ್​​ಗಳ ಸಂಖ್ಯೆ; ಜೋ ಬೈಡನ್, ರಿಷಿ ಸುನಕ್​​ನ್ನು ಹಿಂದಿಕ್ಕಿದ ಮೋದಿ

ಹೊಸದಾಗಿ ರೂಪುಗೊಂಡ ಮೈತ್ರಿಕೂಟವು ಜಾತಿ ಗಣತಿ, ಮಣಿಪುರ ಹಿಂಸಾಚಾರದಿಂದ ಹಿಡಿದು ರಾಜ್ಯಪಾಲರು ಮತ್ತು ಎಲ್‌ಜಿಗಳ ಪಾತ್ರ ಮತ್ತು ನೋಟು ಅಮಾನ್ಯೀಕರಣದವರೆಗಿನ ವಿವಿಧ ವಿಷಯಗಳ ಕುರಿತು ಪ್ರಸ್ತಾಪಿಸುವ ‘ಸಾಮೂಹಿಕ ಸಂಕಲ್ಪ್’ ಘೋಷಣೆಯನ್ನು ಸಹ ಬಿಡುಗಡೆ ಮಾಡಿದೆ.

ಮೈತ್ರಿಕೂಟವು 11 ಸದಸ್ಯರ ಸಮನ್ವಯ ಸಮಿತಿಯನ್ನು ಸ್ಥಾಪಿಸಲು ಒಪ್ಪಿಕೊಂಡಿತು. ಆದರೆ ಮುಂಬೈನಲ್ಲಿ ಅವರ ಮುಂದಿನ ಸಭೆಯಲ್ಲಿ ಅದರ ಸದಸ್ಯರು ಮತ್ತು ಸಂಚಾಲಕನ ನಿರ್ಧಾರವನ್ನು ಬಿಟ್ಟಿತು. ಮೊದಲ ಸಭೆ ಬಿಹಾರದ ಪಾಟ್ನಾದಲ್ಲಿ ನಡೆದರೆ, ಎರಡನೆಯ ಸಭೆಯು ಕರ್ನಾಟಕದ ಬೆಂಗಳೂರಿನಲ್ಲಿ ನಡೆದಿದೆ.

26 ವಿರೋಧ ಪಕ್ಷಗಳು- ಕಾಂಗ್ರೆಸ್, ಟಿಎಂಸಿ, ಡಿಎಂಕೆ, ಎಎಪಿ, ಜೆಡಿ(ಯು), ಆರ್‌ಜೆಡಿ, ಜೆಎಂಎಂ, ಎನ್‌ಸಿಪಿ (ಶರದ್ ಪವಾರ್), ಶಿವಸೇನಾ (ಯುಬಿಟಿ), ಎಸ್‌ಪಿ, ಎನ್‌ಸಿ, ಪಿಡಿಪಿ, ಸಿಪಿಐ(ಎಂ), ಸಿಪಿಐ, ಆರ್‌ಎಲ್‌ಡಿ ,  ಎಂಡಿಎಂಕೆ, ಕೊಂಗುನಾಡು ಮಕ್ಕಳ್ ದೇಶಿಯಾ ಕಚ್ಚಿ (KMDK), ವಿಸಿಕೆ, ಆರ್​ಎಸ್​​ಪಿ, ಸಿಪಿಐ- ಎಂಎಲ್ (ಲಿಬರೇಶನ್), ಫಾರ್ವರ್ಡ್ ಬ್ಲಾಕ್, ಐಯುಎಂಲ್, ಕೇರಳ ಕಾಂಗ್ರೆಸ್ (ಜೋಸೆಫ್), ಕೇರಳ ಕಾಂಗ್ರೆಸ್ (ಮಾಣಿ), ಅಪ್ನಾ ದಳ (ಕಾಮೆರವಾಡಿ), ಮತ್ತು ಮನಿತಾನೇಯ ಮಕ್ಕಳ್ ಕಚ್ಚಿ (ಎಂಎಂಕೆ).

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Wed, 19 July 23

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ