ತಡರಾತ್ರಿ ಕಾಶ್ಮೀರದ ದೇವಸ್ಥಾನಕ್ಕೆ ಪ್ರವೇಶಿಸಿದ ಪೊಲೀಸ್​​ನ್ನು ಗುಂಡಿಕ್ಕಿ ಹತ್ಯೆಮಾಡಿದ ಭದ್ರತಾ ಸಿಬ್ಬಂದಿ

ನಿನ್ನೆ ತಡರಾತ್ರಿ ಕಾನ್‌ಸ್ಟೇಬಲ್‌ ಧರ್ ದೇವಸ್ಥಾನದ ಬಾಗಿಲನ್ನು ಬಡಿಯಲ ಆರಂಭಿಸಿದಾಗ ಭದ್ರತಾ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಡರಾತ್ರಿ ಕಾಶ್ಮೀರದ ದೇವಸ್ಥಾನಕ್ಕೆ ಪ್ರವೇಶಿಸಿದ ಪೊಲೀಸ್​​ನ್ನು ಗುಂಡಿಕ್ಕಿ ಹತ್ಯೆಮಾಡಿದ ಭದ್ರತಾ ಸಿಬ್ಬಂದಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 22, 2021 | 7:30 PM

ಕಾಶ್ಮೀರ: ಕಾಶ್ಮೀರದಲ್ಲಿ ಓರ್ವ ಪೊಲೀಸ್​​ನ್ನು ಭದ್ರತಾ ಸಿಬ್ಬಂದಿಗಳು ಹತ್ಯೆ ಮಾಡಿದ್ದಾರೆ. ರಾತ್ರಿ ಹೊತ್ತು ಪೊಲೀಸ್ ದೇವಾಲಯಕ್ಕೆ ನುಗ್ಗಿದ್ದರಿಂದ ಸೆಕ್ಯುರಿಟಿ ಗಾರ್ಡ್​​ಗಳು ದೇವಾಲಯಕ್ಕೆ ದೇಶ ವಿರೋಧಿಗಳು ಯಾರೋ ನುಗ್ಗಿಬಿಟ್ಟಿದ್ದಾರೆ ಎಂದು ಹತ್ಯೆ ಮಾಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಹತ್ಯೆಯಾದ ಕಾನ್‌ಸ್ಟೇಬಲ್‌ನ್ನು ಅಜಯ್ ಧರ್, ಲಂಗೇಟ್ ಹಂದ್ವಾರ ನಿವಾಸಿ ಎಂದು ಗುರುತಿಸಲಾಗಿದೆ. ಈ ಘಟನೆ ದುರದೃಷ್ಟಕರ ಎಂದು ಪೊಲೀಸರು ಹೇಳಿದ್ದಾರೆ. ನಿನ್ನೆ ತಡರಾತ್ರಿ ಕಾನ್‌ಸ್ಟೇಬಲ್‌ ಧರ್ ದೇವಸ್ಥಾನದ ಬಾಗಿಲನ್ನು ಬಡಿಯಲ ಆರಂಭಿಸಿದಾಗ ಭದ್ರತಾ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಗಾಳಿಯಲ್ಲಿ ಗುಂಡು ಹಾರಿಸಿದರೂ ಕಾನ್‌ಸ್ಟೇಬಲ್‌ ಧರ್ ತನ್ನ ಗುರುತನ್ನು ಬಹಿರಂಗಪಡಿಸದೆ ಬಾಗಿಲನ್ನು ಬಡಿಯುತ್ತಿದ್ದನು. ಇದು ತಪ್ಪಾದ ಗುರುತಿನ ಸ್ಪಷ್ಟ ಪ್ರಕರಣ. ಏಕೆಂದರೆ ಇದು ದಾಳಿ ಎಂದು ಸೆಂಟ್ರಿ ಊಹಿಸಿದ್ದಾನೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ಹೇಳಿದರು.

ಕಾಶ್ಮೀರದ ಬಹುತೇಕ ದೇವಸ್ಥಾನಗಳಿಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಈ ಘಟನೆಯು ಕಾಶ್ಮೀರದಲ್ಲಿನ ಭದ್ರತಾ ಅವ್ಯವಸ್ಥೆಗೆ ಮತ್ತೊಂದು ಉದಾಹರಣೆಯಾಗಿದೆ. ಹಿಂದೆ, “ತಪ್ಪಾದ” ಗುರುತಿನಿಂದಾಗಿ ರಾತ್ರಿ ಸಮಯದಲ್ಲಿ ನಾಗರಿಕರನ್ನು ಭದ್ರತಾ ಪಡೆಗಳು ಕೊಲ್ಲುವ ಘಟನೆಗಳು ನಡೆದಿವೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ; ಒಂದೇ ಕುಟುಂಬದ ನಾಲ್ವರು ಸಾವು, ಒಬ್ಬ ನಾಪತ್ತೆ

ಇದನ್ನೂ ಓದಿ:  Bhabanipur Bypoll ಮೋದಿ ಜೀ, ನಾವು ಭಾರತವನ್ನು ತಾಲಿಬಾನ್ ಮಾಡಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

(Police in Kashmir killed after security guards at a temple mistook him for anti-national element)

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ