AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಂದ ಸೋಷಿಯಲ್ ಮೀಡಿಯಾದಲ್ಲಿ ಆರೋಪಿಗಳ ಫೋಟೋ ಪ್ರಕಟಣೆ; X, ಮೆಟಾ, ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟೀಸ್

Supreme Court On Social Media Guidelines for Police: ಪೊಲೀಸರು ಆರೋಪಿಗಳ ಫೋಟೋ ಬಹಿರಂಗಪಡಿಸುವ ಸಂಬಂಧ ಸಾಮಾಜಿಕ ಜಾಲತಾಣಗಳು ಹಾಗೂ ಸರ್ಕಾರಕ್ಕೆ ಸರ್ವೋಚ್ಚ ನ್ಯಾಯಾಲಯ ನೋಟೀಸ್ ನೀಡಿದೆ. ಪೊಲೀಸ್ ಇಲಾಖೆಗಳು ಸೋಷಿಯಲ್ ಮೀಡಿಯಾದಲ್ಲಿ ಆರೋಪಿಗಳ ಫೋಟೋ ಮತ್ತು ವಿಡಿಯೋ ಹಂಚಿಕೊಳ್ಳುವುದನ್ನು ನಿಲ್ಲಿಸಲು ನಿರ್ದೇಶಿಸಬೇಕೆಂದು ಕೋರಿ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು.

ಪೊಲೀಸರಿಂದ ಸೋಷಿಯಲ್ ಮೀಡಿಯಾದಲ್ಲಿ ಆರೋಪಿಗಳ ಫೋಟೋ ಪ್ರಕಟಣೆ; X, ಮೆಟಾ, ಕೇಂದ್ರಕ್ಕೆ ಸುಪ್ರೀಂಕೋರ್ಟ್ ನೋಟೀಸ್
ಪೊಲೀಸರುImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 18, 2026 | 4:17 PM

Share

ನವದೆಹಲಿ, ಆಗಸ್ಟ್ 18: ಪೊಲೀಸ್ ಇಲಾಖೆಗಳು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಆರೋಪಿಗಳ ಫೋಟೋ ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುವುದನ್ನು ತಡೆಯಲು ಸೂಕ್ತ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ಸಂಬಂಧ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರ್ಕಾರ, ಎಲ್ಲಾ ರಾಜ್ಯಗಳು ಹಾಗೂ ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಿಗೆ ನೋಟಿಸ್ ಜಾರಿ ಮಾಡಿದೆ.

ಪೊಲೀಸರು ಕಸ್ಟಡಿಯಲ್ಲಿರುವ ಆರೋಪಿಗಳ ಮುಖ ಅಥವಾ ಗುರುತನ್ನು ಬಹಿರಂಗಪಡಿಸುವುದು ಹಾಗೂ ಅವರ ಕೈಗೆ ಕೋಳ ತೊಡಿಸಿರುವುದು, ಹಗ್ಗದಿಂದ ಕಟ್ಟುಹಾಕಿರುವುದು ಅಥವಾ ನೆಲದ ಮೇಲೆ ಕುಳಿರಿಸಿ ಅಮಾನುಷವಾಗಿ ಚಿತ್ರಿಸಿರುವ ಫೋಟೋ/ವೀಡಿಯೊಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದನ್ನು ತಡೆಯಲು ಅರ್ಜಿದಾರರು (ಹೇಮೇಂದ್ರ ಪಟೇಲ್) ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಇಮ್ರಾನ್ ಖಾನ್‌ಗೆ ಕೋರ್ಟ್‌ನಿಂದ ಬಿಗ್ ರಿಲೀಫ್: 48 ಗಂಟೆಗಳಲ್ಲಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಕ್ಕೆ ಆದೇಶ

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾ| ಜೋಯ್ಮಾಲ್ಯ ಬಾಗ್ಚಿ ಮತ್ತು ನ್ಯಾ| ವಿ. ಮೋಹನಾ ಅವರನ್ನೊಳಗೊಂಡ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿ ನೋಟಿಸ್ ನೀಡಿದೆ.

ಅರ್ಜಿದಾರರ ವಾದ: ಆರೋಪಿಗಳ ಚಿತ್ರಗಳನ್ನು ಈ ರೀತಿ ಬಹಿರಂಗಪಡಿಸುವುದರಿಂದ ಅವರಿಗೆ ನಿಷ್ಪಕ್ಷಪಾತ ವಿಚಾರಣೆ ಪಡೆಯುವ ಹಕ್ಕು ಮತ್ತು ಮಾನವ ಘನತೆಗೆ ಧಕ್ಕೆಯಾಗುತ್ತದೆ. ಈಗಾಗಲೇ ಪೊಲೀಸರು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಂಡಿರುವ ಇಂತಹ ಪೋಸ್ಟ್‌ಗಳನ್ನು ತಕ್ಷಣವೇ ತೆಗೆದುಹಾಕಲು ರಾಜ್ಯ ಸರ್ಕಾರಗಳಿಗೆ ಸೂಚಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಮಾರ್ಗದರ್ಶಿ ಸೂತ್ರಗಳ ಬೇಡಿಕೆ: ಪೊಲೀಸರು ಸಾಮಾಜಿಕ ಜಾಲತಾಣಗಳನ್ನು ಬಳಸುವ ಕುರಿತು ಸಮಗ್ರ ಮಾರ್ಗದರ್ಶಿ ಸೂತ್ರಗಳನ್ನು (Guidelines) ರೂಪಿಸಬೇಕು ಹಾಗೂ X ಮತ್ತು ಮೆಟಾ ಸಂಸ್ಥೆಗಳು ತಮ್ಮ ವೇದಿಕೆಗಳಲ್ಲಿ ಇಂತಹ ಅಪಮಾನಕರ ವಿಷಯಗಳು ಪೋಸ್ಟ್ ಆಗದಂತೆ ಸೂಕ್ತ ನೀತಿಯನ್ನು ಜಾರಿಗೆ ತರಬೇಕು ಎಂದು ಅರ್ಜಿದಾರರ ಪರ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣ್ ವಾದಿಸಿದರು.

ಇದನ್ನೂ ಓದಿ: ಸಿಜೆಪಿ ಪ್ರತಿಭಟನೆ ವೇಳೆ ಸಂಘರ್ಷ ಪ್ರಕರಣ: ತನಿಖೆಗಾಗಿ ಉನ್ನತ ಸಮಿತಿ ರಚನೆಗೆ ಸುಪ್ರೀಂ ಕೋರ್ಟ್ ನಿರ್ಧಾರ

ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ವಿಷಯಗಳ ಹರಡುವಿಕೆಯನ್ನು ನಿಯಂತ್ರಿಸುವುದು ಮತ್ತು ಸೂಕ್ತ ನಿಯಂತ್ರಣ ವ್ಯವಸ್ಥೆಯನ್ನು (Regulatory regime) ರೂಪಿಸುವುದು ಅಗತ್ಯ ಎಂದು ಸುಪ್ರೀಂ ಕೋರ್ಟ್ ಪೀಠವು ಅಭಿಪ್ರಾಯಪಟ್ಟಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us