ಮಲ್ಕನ್‌ಗಿರಿ: ಟ್ರಕ್‌ನಲ್ಲಿ ಕಲ್ಲಿದ್ದಲಿನ ಮಧ್ಯೆ 2 ಕೋಟಿ ರೂ. ಗಾಂಜಾ ಸಾಗಣೆ, ಜಪ್ತಿ, ಮೂವರ ಸೆರೆ

ಟ್ರಕ್‌ನಲ್ಲಿ ಕಲ್ಲಿದ್ದಲಿನ ಜತೆ ಆರೋಪಿಗಳು ಗಾಂಜಾ ಸಾಗಿಸುತ್ತಿದ್ದ ವೇಳೆ ಪೊಲೀಸರು ಸೆರೆಹಿಡಿದಿದ್ದಾರೆ. ಆರೋಪಿಗಳಿಂದ 2.25 ಕೋಟಿ ರೂಪಾಯಿ ಮೌಲ್ಯದ 2,256 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಲ್ಕನ್‌ಗಿರಿ: ಟ್ರಕ್‌ನಲ್ಲಿ ಕಲ್ಲಿದ್ದಲಿನ ಮಧ್ಯೆ 2 ಕೋಟಿ ರೂ. ಗಾಂಜಾ ಸಾಗಣೆ, ಜಪ್ತಿ, ಮೂವರ ಸೆರೆ
2.25 ಕೋಟಿ ರೂಪಾಯಿ ಮೌಲ್ಯದ 2,256 ಕೆಜಿ ಗಾಂಜಾ ಜಪ್ತಿ
Follow us
| Updated By: preethi shettigar

Updated on:Sep 22, 2021 | 11:01 AM

ಒಡಿಶಾ: ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಒಡಿಶಾದ ಮಲ್ಕನ್‌ಗಿರಿಯಲ್ಲಿ ನಡೆದಿದೆ. ಟ್ರಕ್‌ನಲ್ಲಿ ಕಲ್ಲಿದ್ದಲಿನ ಜತೆ ಆರೋಪಿಗಳು ಗಾಂಜಾ ಸಾಗಿಸುತ್ತಿದ್ದ ವೇಳೆ ಪೊಲೀಸರು ಸೆರೆಹಿಡಿದಿದ್ದಾರೆ. ಆರೋಪಿಗಳಿಂದ 2.25 ಕೋಟಿ ರೂಪಾಯಿ ಮೌಲ್ಯದ 2,256 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಚಿತ್ರಕೊಂಡ (ಒಡಿಶಾ)ದಿಂದ ಚತ್ತೀಸ್​ಗಡದ ರಾಯ್‌ಪುರ್‌ಗೆ ಗಾಂಜಾವನ್ನು ಕಳ್ಳಸಾಗಣೆ ಮಾಡಲಾಗುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಚಿತ್ರಕೊಂಡ ಎಸ್‌ಡಿಪಿಒ ಅಂಶುಮನ್ ದ್ವಿವೇದಿ ಹೇಳಿದ್ದಾರೆ.

ಇತ್ತೀಚೆಗೆ ವಿವಿಧೆಡೆ ಪತ್ತೆಯಾದ ಗಾಂಜಾ ಪ್ರಕರಣಗಳು:

ರಾಮನಗರ: ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ರಾಮನಗರದಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಠಾಣೆ ಪೊಲೀಸರ ಕಾರ್ಯಾಚರಣೆ ವೇಳೆ ಗಾಂಜಾ ಸಾಗಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಗ್ರಾಮದ ಚೇತನ್ ಹಾಗೂ ಧ್ರುವರಾಜ್ ಬಂಧಿತ ಆರೋಪಿಗಳು. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೂರು ಕೆಜಿ ಗಾಂಜಾ ಗಿಡ ವಶಪಡಿಸಿಕೊಳ್ಳಲಾಗಿದೆ.

ಚಿಕ್ಕಮಗಳೂರು: 1 ಕ್ವಿಂಟಲ್​ಗೂ ಹೆಚ್ಚು ತೂಕದ ಒಣ ಗಾಂಜಾ ತರಕಾರಿ ಗಾಡಿಯಲ್ಲಿ ಪತ್ತೆ, ಮೂವರು ವಶಕ್ಕೆ ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳ ಕಾಲೇಜು ಹುಡುಗರು, ಕೂಲಿ ಕಾರ್ಮಿಕರನ್ನ ಗುರಿಯಾಗಿಸಿ ಗಾಂಜಾ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವೊಂದರ ಮೇಲೆ ದಾಳಿ ನಡೆಸಿರುವ ಚಿಕ್ಕಮಗಳೂರು ಪೊಲೀಸರು ಒಂದು ಕ್ವಿಂಟಲ್​ಗೂ ಹೆಚ್ಚು ತೂಕದ ಒಣ ಗಾಂಜಾ (Marijuana) ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು ತಾಲ್ಲೂಕಿನ ಕರ್ತಿಕೆರೆ ಬಳಿ ಘಟನೆ ನಡೆದಿದ್ದು, ಗಾಂಜಾ ಸಾಗಿಸುತ್ತಿದ್ದ ವಾಹನದ ಮೇಲೆ CEN ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇದೇ ಮೊದಲ ಬಾರಿಗೆ ಮಲೆನಾಡು ಭಾಗದಲ್ಲಿ ಇಷ್ಟು ದೊಡ್ಡಮಟ್ಟದ ಕಾರ್ಯಾಚರಣೆ ನಡೆದ್ದು, ಒಟ್ಟು 102 ಕೆಜಿ ಒಣ ಗಾಂಜಾ ದಾಳಿ ವೇಳೆ ಲಭ್ಯವಾಗಿದೆ.

CEN ಇನ್ಸ್ಪೆಕ್ಟರ್ ರಕ್ಷಿತ್ ನೇತೃತ್ವದಲ್ಲಿ ಪೊಲೀಸರ ಕಾರ್ಯಾಚರಣೆ ನಡೆದಿದ್ದು, ಆರೋಪಿಗಳು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ಖರೀದಿ ಮಾಡಿ ಚಿಕ್ಕಮಗಳೂರು ಸೇರಿದಂತೆ ಮಂಗಳೂರು, ಉಡುಪಿ, ಶಿವಮೊಗ್ಗ ಜಿಲ್ಲೆಗಳಿಗೆ ತಮ್ಮ ತಂಡದ ಮೂಲಕ ಪೂರೈಕೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಈ ಗುಂಪು ತರಕಾರಿ ಗಾಡಿಯಲ್ಲಿ ಗಾಂಜಾ ಸಾಗಣೆ ಮಾಡುವ ಮೂಲಕ ಅಕ್ರಮ ಚಟುವಟಿಕೆಯನ್ನು ಎಗ್ಗಿಲ್ಲದೆ ನಡೆಸುತ್ತಿದ್ದರು, ಕಾಲೇಜು ಹುಡುಗರು, ಕೂಲಿ ಕಾರ್ಮಿಕರೇ ಇವರ ಗುರಿಯಾಗಿದ್ದರು ಎಂದು ಹೇಳಲಾಗಿದೆ.

ಈ ರೀತಿಯ ಗಾಂಜಾ ರೇಡ್ ಇದು ಮೊದಲೆನಲ್ಲ. ಈ ಹಿಂದೆಯೂ ಹಲವಾರು ದಾಳಿ ನಡೆಸಿ ಪೊಲೀಸರು ಗಾಂಜಾ ಮಾಲು ಸಮೇತ ಆರೋಪಿಗಳನ್ನ ಬಂಧಿಸಿದ್ದರು. ಆದರೆ ಇದು ದೊಡ್ಡಮಟ್ಟದ ಕಾರ್ಯಾಚರಣೆಯಾಗಿದ್ದು, ಈ ಹಿಂದೆ ಬಂಧನ ಮಾಡಿದ ಆರೋಪಿಗಳಿಂದ ಪಡೆದ ಮಾಹಿತಿ ಹಾಗೂ ಈ ಗಾಂಜಾ ಖರೀದಿಯಲ್ಲಿ ಯಾರ್ಯಾರು ಭಾಗಿಯಾಗುತ್ತಾರೆ ಅನ್ನೋ ಮಾಹಿತಿಯನ್ನ ಪಡೆದ ಪೊಲೀಸರು ಆ ವ್ಯಕ್ತಿಗಳ ಚಲನ ವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದರು. ಚಿಕ್ಕಬಳ್ಳಾಪುರದ ಇಬ್ಬರು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಗಾಂಜಾವನ್ನ ದೊಡ್ಡ ಮಟ್ಟದಲ್ಲಿ ಡೀಲ್ ಮಾಡಿಕೊಂಡು ಅದನ್ನ ನಮ್ಮ ರಾಜ್ಯಕ್ಕೆ ಸಾಗಿಸುತ್ತಿದ್ದರು ಎಂಬ ಮಾಹಿತಿಯನ್ನ ಅರಿತ ಪೊಲೀಸರು ಆರೋಪಿಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದರು. ನಿನ್ನೆ ಕೂಡ ವಿಶಾಖಪಟ್ಣಣದಿಂದ ಗಾಂಜಾ ಲೋಡ್ ಆಗಿ ಬರುತ್ತಿದ್ದ ಮಾಹಿತಿಯನ್ನ ಖಚಿತ ಪಡಿಸಿಕೊಂಡು ಆರೋಪಿಗಳ ಸಮೇತ ಗಾಂಜಾವನ್ನ ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ; ಬಂಧಿತರಿಂದ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಗಿಡ ವಶ

ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ ಗಾಂಜಾ ಮಾರಾಟಕ್ಕೆ ಇಳಿದಿದ್ದ ಯುವಕ ಮೊದಲ ಪ್ರಯತ್ನದಲ್ಲೇ ಪೊಲೀಸರಿಗೆ ಸಿಕ್ಕಿ ಬಿದ್ದ!

Published On - 8:30 am, Wed, 22 September 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ