AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್ ಸಿಎಂ ಮನೆ ಮೇಲೆ ಪೊಲೀಸ್ ದಾಳಿ; ಬಿಜೆಪಿ ವಿರುದ್ಧ ಆಪ್ ಆರೋಪ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ದೆಹಲಿ ನಿವಾಸದ ಮೇಲೆ ಪೊಲೀಸರಿಂದ ದಾಳಿ ನಡೆಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. ಆದರೆ, ಈ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ. ಭಗವಂತ್ ಮಾನ್ ದೆಹಲಿಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗ ಈ ದಾಳಿ ನಡೆದಿದೆ ಎನ್ನಲಾಗಿದೆ.

ಪಂಜಾಬ್ ಸಿಎಂ ಮನೆ ಮೇಲೆ ಪೊಲೀಸ್ ದಾಳಿ; ಬಿಜೆಪಿ ವಿರುದ್ಧ ಆಪ್ ಆರೋಪ
Bhagwant Mann
ಸುಷ್ಮಾ ಚಕ್ರೆ
|

Updated on: Jan 30, 2025 | 6:28 PM

Share

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವಾದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವ ಸಮಯದಲ್ಲಿ ಅವರ ದೆಹಲಿ ನಿವಾಸದ ಮೇಲೆ ದಾಳಿ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ದೆಹಲಿ ಮುಖ್ಯಮಂತ್ರಿ ಅತಿಶಿ ಈ ಬಗ್ಗೆ ಎಕ್ಸ್​ನಲ್ಲಿ ಆರೋಪಿಸಿದ್ದು, ದೆಹಲಿ ಪೊಲೀಸರ ತಂಡವು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ದೆಹಲಿ ನಿವಾಸವಾದ ಕಪುರ್ತಲಾ ಮನೆಗೆ ದಾಳಿ ನಡೆಸಲು ತೆರಳಿದೆ ಎಂದಿದ್ದಾರೆ. ಆದರೆ ಪೊಲೀಸರು ಈ ಹೇಳಿಕೆಯನ್ನು ನಿರಾಕರಿಸಿದ್ದಾರೆ.

ದೆಹಲಿ ಪೊಲೀಸರ ತಂಡವು ರಾಜಧಾನಿಯಲ್ಲಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಅಧಿಕೃತ ನಿವಾಸವಾದ ಕಪುರ್ತಲಾ ಮನೆಗೆ ದಾಳಿ ನಡೆಸಲು ಆಗಮಿಸಿದೆ ಎಂದು ಆಮ್ ಆದ್ಮಿ ಪಕ್ಷ ಇಂದು ಆರೋಪಿಸಿದೆ. ದೆಹಲಿ ಮುಖ್ಯಮಂತ್ರಿ ಅತಿಶಿ ಈ ಬಗ್ಗೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ದೆಹಲಿ ಪೊಲೀಸರು ಚುನಾಯಿತ ಮುಖ್ಯಮಂತ್ರಿಯನ್ನು ಅನ್ಯಾಯವಾಗಿ ಗುರಿಯಾಗಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೇಜ್ರಿವಾಲ್ ದೆಹಲಿಯನ್ನು ಕಸದ ತೊಟ್ಟಿಯಾಗಿ ಮಾಡಿದ್ದಾರೆ, ಯಮುನಾ ನೀರನ್ನು ಕಲುಷಿತಗೊಳಿಸಿದ್ದಾರೆ; ಅಮಿತ್ ಶಾ

ಎಎಪಿಯ ಪಂಜಾಬಿನ ಪ್ರಮುಖ ನಾಯಕರಾಗಿರುವ ಪಂಜಾಬ್ ಸಿಎಂ ಭಗವಂತ್ ಮಾನ್, ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಪರವಾಗಿ ಪ್ರಚಾರ ಮಾಡಲು ದೆಹಲಿಯಲ್ಲಿದ್ದಾರೆ. ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್, ಪಂಜಾಬ್‌ನ ಮಾನ್ ಮತ್ತು ಅವರ ಬೆಂಬಲಿಗರು ರಾಷ್ಟ್ರ ರಾಜಧಾನಿಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಕಾನೂನುಬಾಹಿರ ವಿಧಾನಗಳನ್ನು ಬಳಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ