AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ: ಅಂದು ಐಸ್​ಕ್ರೀಂನಲ್ಲಿ ಸಿಕ್ಕ ಬೆರಳು ಯಾರದ್ದು, ಪೊಲೀಸರು ಹೇಳಿದ್ದೇನು?

ಮುಂಬೈನಲ್ಲಿ ವೈದ್ಯರೊಬ್ಬರು ಆನ್​ಲೈನ್​ ಮೂಲಕ ಬುಕ್​ ಮಾಡಿದ್ದ ಐಸ್​ಕ್ರೀಂನಲ್ಲಿ ಬೆರಳು ಪತ್ತೆಯಾದ ಪ್ರಕರಣಕ್ಕೆ ಹೊಸ ಆಯಾಮ ಸಿಕ್ಕಿದೆ, ಆ ಬೆರಳು ಯಾರದ್ದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವೈದ್ಯರೊಬ್ಬರು ಆನ್​ಲೈನ್ ಮೂಲಕ ಮೂರು ಕೋನ್ ಐಸ್​ಕ್ರೀಂ ಆರ್ಡರ್ ಮಾಡಿದ್ದರು, ಅದರಲ್ಲಿ ಮಾನವನ ಬೆರಳು ಪತ್ತೆಯಾಗಿತ್ತು.

ಮುಂಬೈ: ಅಂದು ಐಸ್​ಕ್ರೀಂನಲ್ಲಿ ಸಿಕ್ಕ ಬೆರಳು ಯಾರದ್ದು, ಪೊಲೀಸರು ಹೇಳಿದ್ದೇನು?
ಐಸ್​ಕ್ರೀಂ
ನಯನಾ ರಾಜೀವ್
|

Updated on: Jun 19, 2024 | 2:17 PM

Share

ಆನ್​ಲೈನ್​ ಮೂಲಕ ತರಿಸಿದ್ದ ಐಸ್​ಕ್ರೀಂ(Ice-Cream)ನಲ್ಲಿ ಪತ್ತೆಯಾಗಿದ್ದ ಬೆರಳು ಯಾರದ್ದು ಎಂಬುದರ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಮುಂಬೈನ ವೈದ್ಯರೊಬ್ಬರು ಆನ್​ಲೈನ್​ ಮೂಲಕ ತರಿಸಿದ್ದ ಕೋನ್​ ಐಸ್​ಕ್ರೀಂನಲ್ಲಿ ಮಾನವನ ಬೆರಳು ಪತ್ತೆಯಾಗಿತ್ತು. ಬಳಿಕ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದೀಗ ಆ ಬೆರಳು ಐಸ್​ಕ್ರೀಂ ತಯಾರಿಕಾ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯದ್ದು ಎನ್ನಲಾಗುತ್ತಿದೆ. ಈ ಐಸ್​ಕ್ರೀಂ ಫ್ಯಾಕ್ಟರಿ ಪುಣೆಯಲ್ಲಿದೆ, ಪೊಲೀಸರು ಅಲ್ಲಿಗೆ ತೆರಳಿ ವಿಚಾರಣೆ ನಡೆಸಿದಾಗ ಕೆಲ ದಿನಗಳ ಹಿಂದೆ ಇಲ್ಲಿ ಕೆಲಸ ಮಾಡುವವರ ಕೈಬೆರಳು ಕತ್ತರಿಸಿದ್ದ ವಿಚಾರ ಬೆಳಕಿಗೆ ಬಂದಿದೆ.

ಈಗ ಅದು ನಿಜವೋ ಸುಳ್ಳೋ ಗೊತ್ತಿಲ್ಲ, ಕತ್ತರಿಸಿದ ಬೆರಳು ಆ ನೌಕರನದ್ದೇ ಇರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಕ್ತಿಯ ಡಿಎನ್‌ಎ ಮಾದರಿಗಳನ್ನು ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ, ಶೀಘ್ರದಲ್ಲೇ ವರದಿ ಹೊರಬೀಳಲಿದೆ.

ಮತ್ತಷ್ಟು ಓದಿ: ಆನ್​ಲೈನ್​ ಮೂಲಕ ಆರ್ಡರ್​ ಮಾಡಿದ್ದ ಐಸ್​ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ

Yummo ಐಸ್ ಕ್ರೀಮ್ ಒಂದು ಹೆಸರಾಂತ ಬ್ರ್ಯಾಂಡ್ ಎಂದು ಹೇಳಲಾಗುತ್ತಿದೆ. ಈಗ ಪೊಲೀಸರು ಮುಂದಿನ ಕ್ರಮ ಏನು ಎಂಬುದು ವರದಿ ಬಂದ ನಂತರವೇ ತಿಳಿದುಬರಲಿದೆ.

ಅಮೆಜಾನ್ ಕವರ್​ನಲ್ಲಿ ಹಾವು ಪತ್ತೆ ಬೆಂಗಳೂರಿನಲ್ಲಿ ಡೆಲಿವರಿಯಾದ ಅಮೆಜಾನ್​ ಪ್ಯಾಕೆಟ್​ನಲ್ಲಿ ಹಾವು ಪತ್ತೆಯಾಗಿತ್ತು, ಆದರೆ ಇದು ರಿಮೋಟ್​ ಕಂಟ್ರೋಲ್ಡ್​ ಹಾವಲ್ಲ, ಬದಲಾಗಿ ನಿಜವಾದ ಹಾವು ಪ್ಯಾಕೆಟ್​ನಲ್ಲಿತ್ತು. ಇನ್ನೊಂದು ಕಡೆ ಜೆಪ್ಟೋದಿಂದ ಚಾಕೊಲೇಟ್​ ಸಿರಪ್​ ಆರ್ಡರ್​ ಮಾಡಿದ್ದರೆ ಅದರಲ್ಲಿ ಸತ್ತ ಇಲಿ ಪತ್ತೆಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?