ವೈದ್ಯಕೀಯ ಸೌಲಭ್ಯಗಳ ಕೊರತೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಮಾಡಿದವರ ವಿರುದ್ಧ ದೂರು ದಾಖಲಿಸುವಂತಿಲ್ಲ: ಸುಪ್ರೀಂಕೋರ್ಟ್

ಕೇಂದ್ರ ಸರ್ಕಾರಕ್ಕೊಂದು ರಾಜ್ಯ ಸರ್ಕಾರಕ್ಕೊಂದು ಲಸಿಕೆ ಬೆಲೆ ನಿಗದಿ ಏಕೆ? ದೇಶದ ನಿರ್ಗತಿಕರು, ದಲಿತರ ಸ್ಥಿತಿ ಏನಾಗಬೇಕು? ಖಾಸಗಿ ಆಸ್ಪತ್ರೆಗಳ ಮುಲಾಜಿನಲ್ಲಿ ಜನರು ಇರಬೇಕೇ? ಔಷಧಿ ಇಲ್ಲದಿದ್ದರೆ ಚಿಕಿತ್ಸೆ ನೀಡುವುದು ಹೇಗೆ? ಎಂದು ಪ್ರಶ್ನಿಸಿರುವ ಸುಪ್ರೀಂಕೊರ್ಟ್​, ಸಾಲುಸಾಲು ಪ್ರಶ್ನೆಗಳನ್ನು ಸರ್ಕಾರದ ಮುಂದಿಟ್ಟಿದೆ.

ವೈದ್ಯಕೀಯ ಸೌಲಭ್ಯಗಳ ಕೊರತೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಮಾಡಿದವರ ವಿರುದ್ಧ ದೂರು ದಾಖಲಿಸುವಂತಿಲ್ಲ: ಸುಪ್ರೀಂಕೋರ್ಟ್
ಸುಪ್ರೀಂ ಕೋರ್ಟ್
Follow us
Skanda
|

Updated on: Apr 30, 2021 | 2:15 PM

ದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆ ಚಿಂತಾಜನಕ ಪರಿಸ್ಥಿತಿಯನ್ನು ಸೃಷ್ಟಿಸಿದೆ. ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಸಿಗದೇ ಏರುಗತಿಯಲ್ಲಿ ಸಾಗುತ್ತಿದ್ದು ವೈದ್ಯಕೀಯ ಸೌಲಭ್ಯಗಳಲ್ಲಿ ಅಭಾವ ಸೃಷ್ಟಿಯಾಗಿದೆ. ಈ ಬಗ್ಗೆ ಕೊರೊನಾ ಸೋಂಕಿತರು ಹಾಗೂ ಅವರ ಕುಟುಂಬಸ್ಥರು ಸಾಮಾಜಿಕ ಜಾಲತಾಣಗಳಲ್ಲಿ ಸಾಲು ಸಾಲು ಮಾಹಿತಿಯನ್ನೂ ಹಂಚಿಕೊಂಡಿದ್ದಾರೆ. ಅಲ್ಲದೇ ಹಲವರು ಸಾಮಾಜಿಕ ಜಾಲತಾಣಗಳ ಮೂಲಕ ಆಕ್ಸಿಜನ್, ಬೆಡ್, ವೈದ್ಯರ ಕೊರತೆ ಇದೆ ಸಹಾಯ ಮಾಡಿ ಎಂದು ಪೋಸ್ಟ್​ ಕೂಡಾ ಮಾಡಿದ್ದಾರೆ. ಈ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯ ಮಹತ್ವದ ಸಂದೇಶವೊಂದನ್ನು ನೀಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸಹಾಯ ಕೇಳಿ ಪೋಸ್ಟ್ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತಿಲ್ಲ ಎಂದು ಎಲ್ಲ ರಾಜ್ಯದ ಡಿಜಿಪಿಗಳಿಗೆ ಸೂಚನೆ ನೀಡಿದೆ. ಅಲ್ಲದೇ ಒಂದುವೇಳೆ ಸುಪ್ರೀಂಕೋರ್ಟ್ ಹೊರಡಿಸಿರುವ ಈ ಆದೇಶ ಉಲಂಘಿಸಿ ಪ್ರಕರಣ ದಾಖಲಿಸಿಕೊಂಡರೆ ಪೊಲೀಸರ ವಿರುದ್ಧವೇ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವ ಎಚ್ಚರಿಕೆಯನ್ನೂ ನೀಡಿದೆ.

ಸುಪ್ರೀಂಕೋರ್ಟ್​ನಲ್ಲಿ ದೇಶದ ಕೊರೊನಾ ಸ್ಥಿತಿಗತಿ ಬಗ್ಗೆ ವಿಚಾರಣೆ ನಡೆಯುತ್ತಿದ್ದು, ಲಸಿಕೆ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಹತ್ವದ ಸಲಹೆಯನ್ನು ನ್ಯಾಯಾಲಯ ನೀಡಿದೆ. ದೇಶದ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡುವ ಬಗ್ಗೆ ಆಲೋಚಿಸಿ. ರಾಷ್ಟ್ರೀಯ ಲಸಿಕಾ ಅಭಿಯಾನದ ಕಾರ್ಯಕ್ರಮ ಜಾರಿಗೊಳಿಸಿ. ಯಾವ ರಾಜ್ಯ ಎಷ್ಟು ಲಸಿಕೆ ಪಡೆಯಬೇಕು ಎನ್ನುವುದನ್ನ ಕಂಪನಿಗಳ ನಿರ್ಧಾರಕ್ಕೆ ಬಿಡಬೇಡಿ. ಕೇಂದ್ರ, ರಾಜ್ಯ ಸರ್ಕಾರ, ಖಾಸಗಿ ಆಸ್ಪತ್ರೆಗಳಿಗೆ ಬೇರೆ ಬೇರೆ ಲಸಿಕೆ ಬೆಲೆ ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದೆ.

ಕೇಂದ್ರ ಸರ್ಕಾರಕ್ಕೊಂದು ರಾಜ್ಯ ಸರ್ಕಾರಕ್ಕೊಂದು ಲಸಿಕೆ ಬೆಲೆ ನಿಗದಿ ಏಕೆ? ದೇಶದ ನಿರ್ಗತಿಕರು, ದಲಿತರ ಸ್ಥಿತಿ ಏನಾಗಬೇಕು? ಖಾಸಗಿ ಆಸ್ಪತ್ರೆಗಳ ಮುಲಾಜಿನಲ್ಲಿ ಜನರು ಇರಬೇಕೇ? ಔಷಧಿ ಇಲ್ಲದಿದ್ದರೆ ಚಿಕಿತ್ಸೆ ನೀಡುವುದು ಹೇಗೆ? ಎಂದು ಪ್ರಶ್ನಿಸಿರುವ ಸುಪ್ರೀಂಕೊರ್ಟ್​, ಮೆಡಿಕಲ್ ಆಕ್ಸಿಜನ್ ಹಂಚಿಕೆಯ ಹಿಂದಿರುವ ಮಾನದಂಡಗಳೇನು? ಆಸ್ಪತ್ರೆಯಲ್ಲಿ ಆಕ್ಸಿಜನ್ ಲಭ್ಯತೆಯ ಫಲಕ ಹಾಕಲಾಗಿದೆಯೇ? ರೋಗಿಯನ್ನ ಆಸ್ಪತ್ರೆಗೆ ದಾಖಲಿಸಲು ಇರುವ ರಾಷ್ಟ್ರೀಯ ನೀತಿ‌ ಏನು? ಲಸಿಕಾ ಕಂಪನಿಗಳಿಗೆ ಸರ್ಕಾರ ಹಣಕಾಸಿನ ನೆರವು ನೀಡಿದೆಯೇ? ಎಲ್ಲ ಲಸಿಕೆಯನ್ನ ಕೇಂದ್ರ ಸರ್ಕಾರವೇ ಖರೀದಿಸಿ ಹಂಚಲು ಸಾಧ್ಯವಿಲ್ಲವೇ? ಆರ್​ಟಿಪಿಸಿಆರ್​ ಪರೀಕ್ಷೆಯಲ್ಲಿ ಪತ್ತೆಯಾಗದಿರುವ ಹೊಸ ಪ್ರಭೇದದ ವೈರಸ್ ಪತ್ತೆಗೆ ಏನು ಸಂಶೋಧನೆ ನಡೆದಿದೆ? ಸರ್ಕಾರ ಲಾಕ್​ಡೌನ್ ಮಾಡುವ ಪ್ಲ್ಯಾನ್ ಸಿದ್ದಪಡಿಸಿದೆಯೇ? ಎಂದು ಸಾಲುಸಾಲು ಪ್ರಶ್ನೆಗಳನ್ನು ಸರ್ಕಾರದ ಮುಂದಿಟ್ಟಿದೆ.

ಇದೆಲ್ಲದರೊಂದಿಗೆ ವೈದ್ಯರು, ನರ್ಸ್​ಗಳಿಗೆ ಹೆಚ್ಚಿನ ವೇತನ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದು, ದೇಶದಲ್ಲಿ 25 ಸಾವಿರ ಎಂಬಿಬಿಎಸ್ ಪದವಿಧರರು ಪದವಿ ಪೂರ್ಣಗೊಳಿಸುತ್ತಿದ್ದಾರೆ. ಎರಡು ಲಕ್ಷ ನರ್ಸ್​ಗಳ ಪದವಿ ಪೂರ್ಣವಾಗ್ತಿದೆ. ಇವರ ಸೇವೆಯನ್ನು ಏಕೆ ಬಳಸಿಕೊಳ್ಳುತ್ತಿಲ್ಲ. ಈಗಲೇ ಕ್ರಮ ಕೈಗೊಳ್ಳದಿದ್ದರೆ ದೇಶದ ಆರೋಗ್ಯ ವ್ಯವಸ್ಥೆ ಕುಸಿದು ಬೀಳಲಿದೆ ಎಂದು ಜಸ್ಟೀಸ್ ಡಿ.ವೈ.ಚಂದ್ರಚೂಡ ಅವರ ಪೀಠದಲ್ಲಿ ನಡೆದ ವಿಚಾರಣೆ ವೇಳೆ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗಿದೆ.

ಇದನ್ನೂ ಓದಿ:  ಕೊವಿಡ್ 19 ಲಸಿಕೆಗೆ ಬೆಲೆ ನಿಗದಿ ಮಾಡುವಲ್ಲಿ ಯಾವ ತಾರ್ಕಿಕ ಆಧಾರ ಅನ್ವಯಿಸಿದ್ದೀರಿ?-ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ 

ಕೊವಿಡ್ ಬಗ್ಗೆ ತಪ್ಪು ಮಾಹಿತಿಗಳನ್ನು ಹಬ್ಬಿಸುವ ಪೋಸ್ಟ್​ಗಳನ್ನು ತೆಗೆದು ಹಾಕಲು ಸಾಮಾಜಿಕ ಮಾಧ್ಯಮಗಳಿಗೆ ಐಟಿ ಸಚಿವಾಲಯ ಸೂಚನೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್