AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Walkar murder case ದೆಹಲಿ: ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಕರೆದೊಯ್ಯತ್ತಿದ್ದ ಪೊಲೀಸ್​​ ವ್ಯಾನ್​​ ಮೇಲೆ ದಾಳಿ

ಅಫ್ತಾಬ್ ಅಮೀನ್ ಪೂನಾವಾಲಾ ಶ್ರದ್ಧಾ ವಾಕರ್ ಮೃತದೇಹವನ್ನು ಕತ್ತರಿಸಲು ಬಳಸಿದ ಆಯುಧವನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Shraddha Walkar murder case ದೆಹಲಿ: ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಕರೆದೊಯ್ಯತ್ತಿದ್ದ ಪೊಲೀಸ್​​ ವ್ಯಾನ್​​ ಮೇಲೆ ದಾಳಿ
ಅಫ್ತಾಬ್ ಪೂನಾವಾಲಾನನ್ನು ಕರೆದೊಯ್ಯುತ್ತಿದ್ದ ವ್ಯಾನ್ ಮೇಲೆ ದಾಳಿ
TV9 Web
| Edited By: |

Updated on:Nov 28, 2022 | 9:16 PM

Share

ದೆಹಲಿಯಲ್ಲಿ ತನ್ನ ಲಿವಿಂಗ್ ಟುಗೆದರ್ ಸಂಗಾತಿ ಶ್ರದ್ದಾ ವಾಕರ್​​ನ್ನು(Shraddha Walker) ಕೊಂದು ಮೃತದೇಹವನ್ನು ತುಂಡು ಮಾಡಿ ಫ್ರಿಡ್ಜ್​​​​​​ನಲ್ಲಿರಿಸಿ ನಂತರ ಅದನ್ನು ಅರಣ್ಯದಲ್ಲಿ ಬಿಸಾಡಿದ ಕೊಲೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನನ್ನು (Aaftab Poonawala) ಕರೆದೊಯ್ಯುತ್ತಿದ್ದ ವ್ಯಾನ್ ಮೇಲೆ ದೆಹಲಿಯಲ್ಲಿ ದಾಳಿ ನಡೆದಿದೆ. ಅಫ್ತಾಬ್ ಅಮೀನ್ ಪೂನಾವಾಲಾ ಶ್ರದ್ಧಾ ವಾಕರ್ ಮೃತದೇಹವನ್ನು ಕತ್ತರಿಸಲು ಬಳಸಿದ ಆಯುಧವನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು  ತಿಳಿಸಿವೆ. ಪೂನಾವಾಲಾ ಇನ್ನೊಬ್ಬ ಮಹಿಳೆಗೆ ನೀಡಿದ್ದ ಎನ್ನಲಾದ ಶ್ರದ್ಧಾಳ ಉಂಗುರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು. ಪಾಲಿಗ್ರಾಫ್ ಪರೀಕ್ಷೆಯ ನಂತರ ಪೊಲೀಸ್ ವ್ಯಾನ್ ಪೂನಾವಾಲಾನನ್ನು ಪಶ್ಚಿಮ ದೆಹಲಿಯ ರೋಹಿಣಿಯಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಜೈಲಿಗೆ ಕರೆದೊಯ್ಯುತ್ತಿತ್ತು ಎಂದು ಮೂಲಗಳು ತಿಳಿಸಿವೆ.ಎಫ್‌ಎಸ್‌ಎಲ್ ಕಟ್ಟಡದ ಹೊರಭಾಗದಲ್ಲಿ ಈ ದಾಳಿ ನಡೆದಿದೆ. ಕತ್ತಿ ಹಿಡಿದ ಜನರು ವ್ಯಾನ್ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದು, ಅಫ್ತಾಬ್ ಪೂನಾವಾಲಾ ಸುರಕ್ಷಿತವಾಗಿದ್ದಾನೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ. ದಾಳಿಕೋರರಲ್ಲಿ ಕೆಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರದ್ಧಾ ಹತ್ಯೆ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಕರೆದೊಯ್ಯುತ್ತಿದ್ದ ಪೊಲೀಸ್ ವ್ಯಾನ್‌ನ ಮೇಲೆ ದೆಹಲಿಯ ಎಫ್‌ಎಸ್‌ಎಲ್ ಕಚೇರಿಯ ಹೊರಗೆ ಹಿಂದೂ ಸೇನೆಯೆಂದು ಹೇಳಿಕೊಳ್ಳುವ ಇಬ್ಬರು ವ್ಯಕ್ತಿಗಳು  ಕತ್ತಿ ಝಳಪಿಸಿ ದಾಳಿ ನಡೆಸಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.  ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವರದಿಗಳ ಪ್ರಕಾರ, ವ್ಯಾನ್‌ಗೆ ಕಾವಲು ಕಾಯುತ್ತಿದ್ದ ಪೊಲೀಸ್ ಸಿಬ್ಬಂದಿ ರಕ್ಷಣೆಗಾಗಿ ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು.

ದಾಳಿಕೋರರನ್ನು ಬಂಧಿಸಿ ಅವರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವಾಗ ವಾಹನವನ್ನು ಅಲ್ಲಿಂದ ಓಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಘಟನೆ ಸಂಜೆ 6. 45 ರ ಸುಮಾರಿಗೆ ನಡೆದಿದೆ.

ಅಫ್ತಾಬ್ ಶ್ರದ್ಧಾಳ ಕತ್ತು ಹಿಸುಕಿ ಅವಳ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ, ಅದನ್ನು  ದಕ್ಷಿಣ ದೆಹಲಿಯ ಮೆಹ್ರೌಲಿ ಪ್ರದೇಶದಲ್ಲಿನ ತನ್ನ ನಿವಾಸದಲ್ಲಿ ಸುಮಾರು ಮೂರು ವಾರಗಳ ಕಾಲ ಫ್ರಿಡ್ಜ್‌ನಲ್ಲಿ ಇಟ್ಟಿದ್ದ. ಮಧ್ಯರಾತ್ರಿಯ ನಂತರ ನಗರದಾದ್ಯಂತ ಅವುಗಳನ್ನು ಎಸೆದಿದ್ದಾನೆ.ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ತಂಡ ಗುರುವಾರ ಮುಂಬೈ ಸಮೀಪದ ಭಾಯಂದರ್ ಕ್ರೀಕ್‌ನಲ್ಲಿ ಮೊಬೈಲ್ ಫೋನ್‌ಗಾಗಿ ಹುಡುಕಾಟ ನಡೆಸಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೀರಾ-ಭಯಂದರ್-ವಸಾಯಿ-ವಿರಾರ್ ಪೊಲೀಸ್ ಸಿಬ್ಬಂದಿಯ ಸಹಾಯದಿಂದ ಶೋಧ ನಡೆಸಲಾಯಿತು ಎಂದು ಅವರು ಹೇಳಿದರು.

ನವೆಂಬರ್ 12 ರಂದು ಅಫ್ತಾಬ್​​ನ್ನು ಬಂಧಿಸಿ ಐದು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು. ಇದನ್ನು ನವೆಂಬರ್ 17 ರಂದು ಐದು ದಿನಗಳವರೆಗೆ ವಿಸ್ತರಿಸಲಾಯಿತು. ನವೆಂಬರ್ 22 ರಂದು ಆತನನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು. ನವೆಂಬರ್ 26 ರಂದು ನ್ಯಾಯಾಲಯ ಮತ್ತೆ ಆತನನ್ನು 13 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು.

Published On - 7:12 pm, Mon, 28 November 22

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು