ಮಧ್ಯಪ್ರದೇಶ: ಹೇಯ ಕೃತ್ಯದ ನಡುವೆ ಮಾನವೀಯ ಕೆಲಸ ಮಾಡಿದ ಪೊಲೀಸರು, ಅತ್ಯಾಚಾರವಾದ ಬಾಲಕಿಯ ಜೀವನಕ್ಕೆ ಇವರೇ ಆಸರೆ

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ರಕ್ತಸಿಕ್ತ ಸ್ಥಿತಿಯಲ್ಲಿ ರಸ್ತೆ ರಸ್ತೆಗಳಲ್ಲಿ ಸಹಾಯಕ್ಕಾಗಿ ಅಂಗಲಾಚುತ್ತಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿತ್ತು. ಆಕೆಯನ್ನು ಈ ಸ್ಥಿತಿಗೆ ತಂದ ವ್ಯಕ್ತಿಯನ್ನು ಈಗಾಗಲೇ ಬಂಧಿಸಿದ್ದಾರೆ. ಇದರ ಜತೆಗೆ ಬಾಲಕಿಯ ಮುಂದಿನ ಜೀವನಕ್ಕೆ ಈ ಪೊಲೀಸರೆ ಆಸರೆಯಾಗಿದ್ದಾರೆ.

ಮಧ್ಯಪ್ರದೇಶ: ಹೇಯ ಕೃತ್ಯದ ನಡುವೆ ಮಾನವೀಯ ಕೆಲಸ ಮಾಡಿದ ಪೊಲೀಸರು, ಅತ್ಯಾಚಾರವಾದ ಬಾಲಕಿಯ ಜೀವನಕ್ಕೆ ಇವರೇ ಆಸರೆ
Follow us
ಅಕ್ಷಯ್​ ಪಲ್ಲಮಜಲು​​
|

Updated on:Sep 29, 2023 | 4:55 PM

ಭೋಪಾಲ್, ಸೆ.29: ಮಧ್ಯಪ್ರದೇಶದ (Madhya Pradesh) ಉಜ್ಜಯಿನಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ರಕ್ತಸಿಕ್ತ ಸ್ಥಿತಿಯಲ್ಲಿ ರಸ್ತೆ ರಸ್ತೆಗಳಲ್ಲಿ ಸಹಾಯಕ್ಕಾಗಿ ಅಂಗಲಾಚುತ್ತಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ದೇಶದ್ಯಾಂತ ಆಕ್ರೋಶ ಕೂಡ ವ್ಯಕ್ತವಾಗಿತ್ತು. ನಂತರ ಬಾಲಕಿಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಆಕೆ ಚಿಕಿತ್ಸೆ ನೀಡಿದ್ದಾರೆ. ಈ ಹೇಯ ಕೃತ್ಯ ನಡುವೆಯು ಒಂದು ಮಾನವೀಯ ಕೆಲಸವನ್ನು ಪೊಲೀಸರು ಮಾಡಿದ್ದಾರೆ. ಬಾಲಕಿಗೆ ಚಿಕಿತ್ಸೆ ನೀಡಿದ್ದು ಮಾತ್ರವಲ್ಲದೆ. ಇಬ್ಬರು ಪೊಲೀಸರು ರಕ್ತದಾನ ಮಾಡಿದ್ದಾರೆ, ಜತೆಗೆ ಮತ್ತೊಬ್ಬ ಪೊಲೀಸ್​ ಬಾಲಕಿ ಶಿಕ್ಷಣ ಮತ್ತು ಆರೋಗ್ಯದ ಜಬಾವ್ದಾರಿಯನ್ನು ಹೊತ್ತುಕೊಂಡಿದ್ದಾರೆ.

ಬಾಲಕಿಯ ಮೇಲೆ ಅಮಾನುಷವಾಗಿ ಅತ್ಯಾಚಾರ ಮಾಡಿ, ಆಕೆ ರಕ್ತಸಿಕ್ತ ಸ್ಥಿತಿಯಲ್ಲಿ ರಸ್ತೆ ರಸ್ತೆಗಳಲ್ಲಿ ಸಹಾಯಕ್ಕಾಗಿ ಅಂಗಲಾಚಿದರು ಯಾರು ಸಹಾಯ ಮಾಡದ ಸಮಯದಲ್ಲಿ ಪೊಲೀಸರು ಬಂದು ಆಕೆಯ ರಕ್ಷಣೆ ಮಾಡಿ, ಚಿಕಿತ್ಸೆ ನೀಡಿದ್ದಾರೆ. ಇದೀಗ ಪೊಲೀಸ್​​ ಅಧಿಕಾರಿಯೊಬ್ಬರು ಬಾಲಕಿಗೆ​​​​ ರಕ್ತದಾನ ಮಾಡಿದ್ದಾರೆ. ಮತ್ತಿಬ್ಬರು ಪೊಲೀಸರು ಶಿಕ್ಷಣ ಮತ್ತು ಆರೋಗ್ಯ ಬಗ್ಗೆ ನೋಡಿಕೊಳ್ಳವೇ ಎಂದು ಮುಂದೆ ಬಂದಿದ್ದಾರೆ. ಇನ್ನು ಬಾಲಕಿಯ ಮನೆಯವರು ಯಾರು ಎಂದು ಇನ್ನು ತಿಳಿದು ಬಂದಿಲ್ಲ. ಈ ಕಾರಣಕ್ಕೆ ಆಕೆಯನ್ನು ಉಜ್ಜಯಿನಿಯ ಮಹಾಕಾಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಜಯ್ ವರ್ಮಾ ದತ್ತು ಪಡೆಯುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಆಕೆಯ ಸಹಾಯಕ್ಕೆ ಬಂದ ಅಧಿಕಾರಿಗಳು ಆಸ್ಪತ್ರೆಯಲ್ಲಿ ಬಾಲಕಿಯ ಕಿರುಚಾಟ ಕೇಳಿ ಕಣ್ಣೀರಿಟ್ಟಿದ್ದಾರೆ. ಈ ಬಗ್ಗೆ ಮಾತನಾಡಿದ ಇನ್ಸ್‌ಪೆಕ್ಟರ್ ಅಜಯ್ ವರ್ಮಾ ಆಕೆ ಚಿಕಿತ್ಸೆ ಪಡೆಯುತ್ತಿದ್ದಾಗ ತುಂಬಾ ನೋವು ತಿಂದಿದ್ದಾಳೆ. ಬಾಲಕಿಯ ಕಿರುಚಾಟ ನೋಡಿ ನನಗೆ ಕಣ್ಣೀರು ಬಂತು. ದೇವರು ಆಕೆಗೆ ಯಾಕೆ ಇಷ್ಟೊಂದು ನೋವು ನೀಡಿದ್ದಾನೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ರಸ್ತೆಯಲ್ಲಿ ಸಹಾಯಕ್ಕೆ ಅಂಗಲಾಚುವಂತೆ ಮಾಡಿದ್ದ ಆರೋಪಿಗಳ ಬಂಧನ 

ಬಾಲಕಿಯ ಕಟುಂಬವನ್ನು ಪತ್ತೆ ಮಾಡುವ ಪ್ರಯತ್ನದಲ್ಲಿದ್ದೇವೆ. ಒಂದು ವೇಳೆ ಆಕೆಯ ಮನೆಯವರು ಸಿಕ್ಕಿಲ್ಲ ಎಂದರೆ ನಾನೇ ಆಕೆಯನ್ನು ಕಾನೂನಿಬದ್ಧವಾಗಿ ದತ್ತು ಪಡೆಯುವೇ, ಈಗಾಗಲೇ ಆಕೆಯ ಎಲ್ಲ ಜವಾಬ್ದಾರಿಯನ್ನು ಇಲಾಖೆಯ ನಾವೇ ವಹಿಸಿಕೊಂಡಿದ್ದೇವೆ ಎಂದು ಹೇಳಿದರು. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ವಶಪಡೆಯಲಾಗಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:56 pm, Fri, 29 September 23

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ