ಹರಿಯುತ್ತಿರುವ ಹಳ್ಳವನ್ನೇ ಲೆಕ್ಕಿಸದೆ.. ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಿದ ಪೊಲೀಸರು

ತೆಲಂಗಾಣ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಮಹಿಳೆಯನ್ನು ಪೊಲೀಸರೇ ಟ್ರ್ಯಾಕ್ಟರ್ ಮುಖಾಂತರ ಉಕ್ಕಿಹರಿಯುತ್ತಿರುವ ಹಳ್ಳವನ್ನು ದಾಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಧಾರಾಕಾರ ಮಳೆಯಿಂದಾಗಿ ನಗರಕ್ಕೂ ಹಾಗೂ ಗ್ರಾಮಕ್ಕೂ ಸಂಪರ್ಕ ಸೇರಿಸುವ ರಸ್ತೆ ಮಧ್ಯದಲ್ಲಿ ಹಳ್ಳವೊಂದು ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಮಹಿಳೆಯನ್ನು ಪೊಲೀಸರು ಟ್ರ್ಯಾಕ್ಟರ್ ಮುಖಾಂತರ, ಉಕ್ಕಿಹರಿಯುತ್ತಿರುವ ಹಳ್ಳವನ್ನು ದಾಟಿ, ಕೋಟಪಲ್ಲಿ ಮಂಡಲದ ಚೆನ್ನೂರಿನಲ್ಲಿರುವ ಆಸ್ಪತ್ರೆಗೆ ಸುರಕ್ಷಿತವಾಗಿ ಸೇರಿಸಿದ್ದಾರೆ. ಪೊಲೀಸರ […]

ಹರಿಯುತ್ತಿರುವ ಹಳ್ಳವನ್ನೇ ಲೆಕ್ಕಿಸದೆ.. ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಿದ ಪೊಲೀಸರು
ಸಾಧು ಶ್ರೀನಾಥ್​

Updated on: Aug 17, 2020 | 1:20 PM

ತೆಲಂಗಾಣ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಮಹಿಳೆಯನ್ನು ಪೊಲೀಸರೇ ಟ್ರ್ಯಾಕ್ಟರ್ ಮುಖಾಂತರ ಉಕ್ಕಿಹರಿಯುತ್ತಿರುವ ಹಳ್ಳವನ್ನು ದಾಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಧಾರಾಕಾರ ಮಳೆಯಿಂದಾಗಿ ನಗರಕ್ಕೂ ಹಾಗೂ ಗ್ರಾಮಕ್ಕೂ ಸಂಪರ್ಕ ಸೇರಿಸುವ ರಸ್ತೆ ಮಧ್ಯದಲ್ಲಿ ಹಳ್ಳವೊಂದು ಉಕ್ಕಿ ಹರಿಯುತ್ತಿದೆ.

ಇದರಿಂದಾಗಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಮಹಿಳೆಯನ್ನು ಪೊಲೀಸರು ಟ್ರ್ಯಾಕ್ಟರ್ ಮುಖಾಂತರ, ಉಕ್ಕಿಹರಿಯುತ್ತಿರುವ ಹಳ್ಳವನ್ನು ದಾಟಿ, ಕೋಟಪಲ್ಲಿ ಮಂಡಲದ ಚೆನ್ನೂರಿನಲ್ಲಿರುವ ಆಸ್ಪತ್ರೆಗೆ ಸುರಕ್ಷಿತವಾಗಿ ಸೇರಿಸಿದ್ದಾರೆ. ಪೊಲೀಸರ ಈ ಸಾಹಸ ಈಗ ಎಲ್ಲೆಡೆ ಸುದ್ದಿಯಾಗುತ್ತಿದ್ದು, ಸಾರ್ವಜನಿಕರಿಂದ ಪ್ರಶಂಸೆಯ ಮಹಾಪೂರವೇ ಹರಿದುಬರುತ್ತಿದೆ.

Published On - 1:16 pm, Mon, 17 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us