AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ ಗಾಂಧಿ ವಾದ್ರಾರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಮಹಿಳಾ ಪೊಲೀಸ್​​; ತನಿಖೆಗೆ ಆದೇಶಿಸಿದ ಆಯುಕ್ತರು

ತಮ್ಮೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಪೊಲೀಸ್​ ಮಹಿಳಾ ಸಿಬ್ಬಂದಿ ಬಗ್ಗೆ ಉತ್ತರಪ್ರದೇಶ ಸಿಎಂ ಅಸಮಾಧಾನಗೊಂಡಿದ್ದಾರೆ, ಪೊಲೀಸ್ ಹಿರಿಯ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ ಎಂದು ತಿಳಿಯುತ್ತಿದ್ದಂತೆ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಮಹಿಳಾ ಪೊಲೀಸ್​​; ತನಿಖೆಗೆ ಆದೇಶಿಸಿದ ಆಯುಕ್ತರು
ಪ್ರಿಯಾಂಕಾ ಗಾಂಧಿ ವಾದ್ರಾರೊಂದಿಗೆ ಸೆಲ್ಫಿ ತೆಗೆದುಕೊಂಡ ಪೊಲೀಸ್​ ಸಿಬ್ಬಂದಿ
Follow us
TV9 Web
| Updated By: Lakshmi Hegde

Updated on: Oct 21, 2021 | 11:29 AM

ಆಗ್ರಾದಲ್ಲಿ ಪೊಲೀಸ್​ ಕಸ್ಟಡಿಯಲ್ಲಿ ಕಾರ್ಮಿಕನೊಬ್ಬ ಮೃತಪಟ್ಟ ಹಿನ್ನೆಲೆಯಲ್ಲಿ ನಿನ್ನೆ ಅವರ ಕುಟುಂಬದವರನ್ನು ಭೇಟಿಯಾಗಲು ಪ್ರಿಯಾಂಕಾ ಗಾಂಧಿ ವಾದ್ರಾ ಲಕ್ನೋದಿಂದ ಆಗ್ರಾಕ್ಕೆ ಹೊರಟಿದ್ದಾಗ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಆದರೆ ನಂತರ ಅವರನ್ನು ಬಿಡಲಾಯಿತಾದರೂ, ಅದಕ್ಕೂ ಮೊದಲು ಕೆಲವು ಮಹಿಳಾ ಪೊಲೀಸರು ಪ್ರಿಯಾಂಕಾ ಗಾಂಧಿಯವರೊಟ್ಟಿಗೆ ಸೆಲ್ಫೀ ಕ್ಲಿಕ್ಕಿಸಿಕೊಂಡಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ. ಪ್ರಿಯಾಂಕಾ ಗಾಂಧಿಯವರನ್ನು ವಶಕ್ಕೆ ಪಡೆದ ಮಹಿಳಾ ಪೊಲೀಸರು ಅವರೊಂದಿಗೆ ತೆಗೆದುಕೊಂಡ ಫೋಟೋ ವೈರಲ್​ ಆದ ಬೆನ್ನಲ್ಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಕೂಡ ಸಿಟ್ಟಾಗಿದ್ದಾರೆ ಎಂದು ಹೇಳಲಾಗಿದೆ.

ಹೀಗೆ ಪ್ರಿಯಾಂಕಾ ಗಾಂಧಿಯವರನ್ನು ವಶಕ್ಕೆ ಪಡೆದ ಸಂದರ್ಭದಲ್ಲಿ ಅವರೊಟ್ಟಿಗೆ ಸೆಲ್ಫೀ ಕ್ಲಿಕ್ಕಿಸಿಕೊಂಡ ಮಹಿಳಾ ಪೊಲೀಸ್​ ಸಿಬ್ಬಂದಿ ವಿರುದ್ಧ ಲಕ್ನೌ ಪೊಲೀಸ್​ ಆಯುಕ್ತ ಧ್ರುವ ಕಾಂತ್​​​ ಠಾಕೂರ್​​ ಪ್ರಾಥಮಿಕ ತನಿಖೆಗೆ ಕೂಡ ಆದೇಶಿಸಿದ್ದಾರೆ.  ಈ ಮಹಿಳಾ ಪೊಲೀಸ್​ ಸಿಬ್ಬಂದಿ ಹೀಗೆ ಸೆಲ್ಫಿ ತೆಗೆದುಕೊಂಡಿದ್ದು ಪೊಲೀಸ್​​ ಇಲಾಖೆ ನಿಯಮಗಳ ಉಲ್ಲಂಘನೆಯೇ? ಎಂಬುದನ್ನು ಪರಿಶೀಲಿಸಿ, ವರದಿ ಸಲ್ಲಿಸುವ ಹೊಣೆಯನ್ನು ಕೇಂದ್ರೀಯ ವಿಭಾಗದ ಡೆಪ್ಯೂಟಿ ಕಮಿಷನರ್​ ಆಫ್​ ಪೊಲೀಸ್​​ಗೆ ವಹಿಸಲಾಗಿದೆ.  ಇವರು ನೀಡುವ ವರದಿ ಆಧಾರದ ಮೇಲೆ ಠಾಕೂರ್​ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ.

ನನ್ನನ್ನು ಶಿಕ್ಷಿಸಿ ಇನ್ನು ತಮ್ಮೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಪೊಲೀಸ್​ ಮಹಿಳಾ ಸಿಬ್ಬಂದಿ ಬಗ್ಗೆ ಉತ್ತರಪ್ರದೇಶ ಸಿಎಂ ಅಸಮಾಧಾನಗೊಂಡಿದ್ದಾರೆ, ಪೊಲೀಸ್ ಹಿರಿಯ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ ಎಂದು ತಿಳಿಯುತ್ತಿದ್ದಂತೆ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ. ಮಹಿಳಾ ಪೊಲೀಸರು ನನ್ನೊಂದಿಗೆ ತೆಗೆಸಿಕೊಂಡ ಸೆಲ್ಫಿಯಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ರಿಗೆ ತುಂಬ ನೋವಾಗಿದೆ ಎಂದು ಗೊತ್ತಾಯಿತು. ನನ್ನೊಂದಿಗೆ ಫೋಟೋ ತೆಗೆದುಕೊಳ್ಳುವುದು ಅಪರಾಧವಾಗುತ್ತದೆ ಅಂತಾದ ಮೇಲೆ ಅಲ್ಲಿ ಕ್ರೈಂಗೆ ಕಾರಣ ನಾನಾಗುತ್ತೇನೆ. ಹಾಗಾಗಿ ನನಗೆ ಶಿಕ್ಷೆ ನೀಡಬೇಕು. ಈ ನಿಷ್ಠಾವಂತ, ಶ್ರಮಜೀವಿ ಪೊಲೀಸ್​ ಸಿಬ್ಬಂದಿಯ ವೃತ್ತಿ ಜೀವನವನ್ನು ಹಾಳುಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

2 ಲಕ್ಷ ರೂ. ಹಣ ಕದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಆಗ್ರಾದ ಕಾರ್ಮಿಕನೊಬ್ಬ ಪೊಲೀಸ್ ವಶದಲ್ಲಿರುವಾಗಲೇ ಸಾವನ್ನಪ್ಪಿದ್ದ. ಮೃತ ಕಾರ್ಮಿಕನ ಕುಟುಂಬಕ್ಕೆ ಸಾಂತ್ವನ ಹೇಳಲು ಲಕ್ನೋದಿಂದ ಆಗ್ರಾಗೆ ಹೊರಟಿದ್ದ ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ಪ್ರಿಯಾಂಕಾ ಗಾಂಧಿ (Priyanka Gandhi Vadra) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆಗ್ರಾಕ್ಕೆ ಹೊರಟಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಲಕ್ನೋ-ಆಗ್ರಾ ಎಕ್ಸ್​ಪ್ರೆಸ್​ ಹೈವೇ ಮಾರ್ಗದ ಟೋಲ್ ಬಳಿ ಪೊಲೀಸರು ತಡೆದಿದ್ದರು.  ನಂತರ ಬಿಡುಗಡೆ ಮಾಡಲಾಯಿತು.

ಇದನ್ನೂ ಓದಿ: ಹೋಟೆಲ್ ಬ್ಯುಸಿನೆಸ್ ಮಾಡ್ತಿದ್ದವರು ಕಳ್ಳತನ ಮಾಡಿ ಅರೆಸ್ಟ್, ಕಳ್ಳತನಕ್ಕೆ ಸಹಾಯ ಮಾಡ್ತು ಸೋಶಿಯಲ್ ಮೀಡಿಯಾ

India vs Australia: ಅತ್ತ ಪಂದ್ಯ ನಡೆಯುತ್ತಿದ್ದರೆ ಇತ್ತ ಧೋನಿಯಿಂದ ರಿಷಭ್ ಪಂತ್​ಗೆ ಭರ್ಜರಿ ಕ್ಲಾಸ್: ವಿಡಿಯೋ ವೈರಲ್

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು