Prashant Kishor ಶರದ್ ಪವಾರ್ ಭೇಟಿಯಾದ ಪ್ರಶಾಂತ್ ಕಿಶೋರ್; ರಾಜಕೀಯ ವಲಯದಲ್ಲಿ ಭಾರೀ ಊಹಾಪೋಹ ಸೃಷ್ಟಿ

Sharad Pawar: ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು ಸೋಲಿಸುವ ಸಲುವಾಗಿ 2022 ರ ಉತ್ತರ ಪ್ರದೇಶ ಚುನಾವಣೆ ಮತ್ತು 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ವಿರೋಧ ಪಕ್ಷಗಳು ಮತ್ತೊಮ್ಮೆ ಮೈತ್ರಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆಯೇ ಎಂದು ಊಹಿಸಲಾಗುತ್ತಿದೆ.

Prashant Kishor ಶರದ್ ಪವಾರ್ ಭೇಟಿಯಾದ ಪ್ರಶಾಂತ್ ಕಿಶೋರ್; ರಾಜಕೀಯ ವಲಯದಲ್ಲಿ ಭಾರೀ ಊಹಾಪೋಹ ಸೃಷ್ಟಿ
ಪ್ರಶಾಂತ್​ ಕಿಶೋರ್​
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 11, 2021 | 4:32 PM

ಮುಂಬೈ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ತಾನು “ಈ ಈ ಕೆಲಸವನ್ನು ಮುಂದುವರಿಸುವುದಿಲ್ಲ, ಇದು ತುಸು ಬಿಡುವು ತೆಗೆದುಕೊಳ್ಳುವ ಮತ್ತು ಬದುಕಿನಲ್ಲಿ ಬೇರೆ ಏನಾದರೂ ಮಾಡುವ ಸಮಯ” ಎಂದು ಹೇಳಿದ್ದ ರಾಜಕೀಯ ಮತ್ತು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಮುಂಬೈಯಲ್ಲಿ ನ್ಯಾಷನಲಿಸ್ಟ್  ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ಶುಕ್ರವಾರ ಭೇಟಿಯಾದರು. ಪವಾರ್ ಅವರ ದಕ್ಷಿಣ ಮುಂಬೈ ನಿವಾಸದಲ್ಲಿ ನಡೆದ ಈ ಸಭೆ ರಾಜಕೀಯ ವಲಯಗಳಲ್ಲಿ ಭಾರಿ ಊಹಾಪೋಹಗಳಿಗೆ ಕಾರಣವಾಗಿದೆ. ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು ಸೋಲಿಸುವ ಸಲುವಾಗಿ 2022 ರ ಉತ್ತರ ಪ್ರದೇಶ ಚುನಾವಣೆ ಮತ್ತು 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ವಿರೋಧ ಪಕ್ಷಗಳು ಮತ್ತೊಮ್ಮೆ ಮೈತ್ರಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆಯೇ ಎಂದು ಊಹಿಸಲಾಗುತ್ತಿದೆ.ಕಿಶೋರ್-ಪವಾರ್ ಸಭೆಯು ಶಿವಸೇನೆಯ ಉನ್ನತ ನಾಯಕರ ಹಿನ್ನೆಲೆಯಲ್ಲಿ ಬಂದಿದ್ದು, ಅವರು ಈಗ ರಾಜಕೀಯವಾಗಿ ಒಟ್ಟಿಗೆ ಇಲ್ಲದಿದ್ದರೂ ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಸಂಬಂಧ ಮುರಿದುಹೋಗಿಲ್ಲ ಎಂದಿದ್ದಾರೆ.

ಮರಾಠಾ ಮೀಸಲಾತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಪ್ರಧಾನಿ ಅವರನ್ನು ಭೇಟಿ ಮಾಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಈ ವಾರದ ಆರಂಭದಲ್ಲಿ ನವದೆಹಲಿಗೆ ಹೋಗಿದ್ದರು. ಅವರು ಪ್ರಧಾನಿಯವರನ್ನು ನೇರ ಭೇಟಿ ಮಾಡಿದ್ದು ಕೂಡಾ ಊಹಾಪೋಹಗಳನ್ನುಂಟು ಮಾಡಿದೆ.

ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಉದ್ಧವ್, ಈ ಊಹಾಪೋಹಗಳನ್ನು ತಳ್ಳಿಹಾಕಿದ್ದು, ನವಾಜ್ ಷರೀಫ್ (ಪಾಕಿಸ್ತಾನದ ಮಾಜಿ ಪ್ರಧಾನಿ) ಅವರನ್ನು ಭೇಟಿ ಮಾಡಿಲ್ಲ ಎಂದು ಹೇಳಿದ್ದಾರೆ.  “ನಾವು ರಾಜಕೀಯವಾಗಿ ಒಟ್ಟಿಗೆ ಇರಬಹುದು ಆದರೆ ನಮ್ಮ ಸಂಬಂಧವು ಮುರಿದುಹೋಗಿದೆ ಎಂದಲ್ಲ. ಮೇ ಕೋಯಿ ನವಾಜ್ ಷರೀಫ್ ಸೆ ನಹಿ ಮಿಲ್ನೆ ಗಯಾ ಥಾ (ನಾನು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಲು ಹೋಗಲಿಲ್ಲ). ಆದ್ದರಿಂದ, ನಾನು ಅವರನ್ನು (ಪಿಎಂ) ಪ್ರತ್ಯೇಕವಾಗಿ ಭೇಟಿಯಾದರೆ, ಅದರಲ್ಲಿ ಯಾವುದೇ ತಪ್ಪಿಲ್ಲ “ಎಂದು ಶಿವಸೇನೆ ಮುಖ್ಯಸ್ಥರು ಹೇಳಿದ್ದಾರೆ.

ನಿನ್ನೆ ಶಿವಸೇನೆ ಮುಖಂಡ ಮತ್ತು ರಾಜ್ಯಸಭಾ ಸಂಸದ ಸಂಜಯ್ ರೌತ್ ಕೂಡ ಪ್ರಧಾನಿ ಮೋದಿ ಅವರನ್ನು ಹೊಗಳಿದ್ದಾರೆ. ಮೋದಿ ದೇಶದ ಮತ್ತು ಆಡಳಿತಾರೂಢ ಬಿಜೆಪಿಯ ಉನ್ನತ ನಾಯಕ ಎಂದು ರೌತ್ ಹೇಳಿದರು.

ಮೋದಿಯವರ ಜನಪ್ರಿಯತೆ ಕ್ಷೀಣಿಸುತ್ತಿದೆಯೇ ಎಂಬ ರೌತ್ ಅವರಲ್ಲಿ ಕೇಳಿದಾಗ. “ನಾನು ಈ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ … ಮಾಧ್ಯಮ ವರದಿಗಳ ಬಗ್ಗೆ ನಾನು ಮಾತನಾಡಲಾರೆ. ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಇಲ್ಲ … ಕಳೆದ ಏಳು ವರ್ಷಗಳಲ್ಲಿ ನರೇಂದ್ರ ಮೋದಿಯವರಿಗೆ ಬಿಜೆಪಿ ತನ್ನ ಯಶಸ್ಸನ್ನು ನೀಡಬೇಕಿದೆ ಮತ್ತು ಪ್ರಸ್ತುತ ಅವರು ದೇಶದ ಮತ್ತು ಅವರ ಪಕ್ಷ ಉನ್ನತ ನಾಯಕ “ಎಂದು ರೌತ್ ಹೇಳಿದರು. ಶಿವಸೇನೆ ಯಾವಾಗಲೂ ಪ್ರಧಾನ ಮಂತ್ರಿ ರಾಷ್ಟ್ರಕ್ಕೆ ಸೇರಿದ್ದು ನಿರ್ದಿಷ್ಟ ಪಕ್ಷಕ್ಕಲ್ಲ ಎಂದು ಸಮರ್ಥಿಸಿಕೊಂಡಿದೆ, “ಆದ್ದರಿಂದ ಪ್ರಧಾನ ಮಂತ್ರಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಬಾರದು. ಇದರಿಂದ ಅಧಿಕೃತ ಕೆಲಸದ ಮೇಲೆ ಒತ್ತಡವುಂಟಾಗುತ್ತದೆ” ಎಂದು ಹೇಳಿದರು.

ಉದ್ಧವ್ ಅವರ ಸಭೆ ಮತ್ತು ರೌತ್ ಅವರ ಹೇಳಿಕೆ ಬಗ್ಗೆಎಂವಿಎ ಮೈತ್ರಿಕೂಟದಲ್ಲಿ ಸಂಭವನೀಯ ಬಿರುಕುಗಳ ಬಗ್ಗೆ ಊಹಾಪೋಹಗಳ ನಡುವೆಯೇ, ಪವಾರ್ ಅವರು ನಿನ್ನೆ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರವು ತನ್ನ ಪೂರ್ಣ ಅವಧಿಯನ್ನು ಪೂರ್ಣಗೊಳಿಸಲಿದೆ ಎಂದು ಹೇಳಿದರು. ಶಿವಸೇನೆ ನಂಬಲರ್ಹವಾದ ಪಕ್ಷವಾಗಿದೆ ಎಂದು ಪವಾರ್ ಹೇಳಿದರು.

ಶಿವಸೇನೆ ನಂಬಲರ್ಹ ಪಕ್ಷ. ಸರ್ಕಾರ ತನ್ನ ಪೂರ್ಣ ಅವಧಿಯನ್ನು ಉಳಿಸಿಕೊಳ್ಳುತ್ತದೆ ಮತ್ತು ಮುಂದಿನ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲೂ ಉತ್ತಮ ಪ್ರದರ್ಶನ ನೀಡಲಿದೆ ”ಎಂದು ಎನ್‌ಸಿಪಿ ಮುಖ್ಯಸ್ಥರು ಹೇಳಿದರು.

ಇದನ್ನೂ ಓದಿ:  Prashant Kishor: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎದುರು ಟಿಎಂಸಿ ಗೆಲ್ಲಿಸಲು ಪ್ರಶಾಂತ್ ಕಿಶೋರ್ ಅನುಸರಿಸಿದ ಚುನಾವಣಾ ತಂತ್ರಗಳು ಒಂದೆರೆಡಲ್ಲ

Published On - 4:30 pm, Fri, 11 June 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್