AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ವಿಧಾನಸಭಾ ಚುನಾವಣೆ ಸನ್ನಿಹಿತವಿರುವಾಗ ಪಾಟ್ನಾದಲ್ಲಿ ಆರ್​​ಜೆಡಿ ನಾಯಕನ ಗುಂಡಿಕ್ಕಿ ಹತ್ಯೆ

ಪಾಟ್ನಾದಲ್ಲಿ ಬುಧವಾರ ರಾತ್ರಿ ಇಬ್ಬರು ಅಪರಿಚಿತರು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ರಾಜ್‌ಕುಮಾರ್ ರೈ ಅಲಿಯಾಸ್ ಅಲ್ಲಾ ರೈ ಅವರನ್ನು ಗುಂಡಿಕ್ಕಿ ಹತ್ಯೆ(Murder) ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಚಿತ್ರಗುಪ್ತದ ಮುನ್ನಾಚಕ್ ಪ್ರದೇಶದಲ್ಲಿ ನಡೆದಿದ್ದು, ರಾಜ್ಯ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲು ನಡೆದಿದ್ದು, ಆತಂಕ ಹೆಚ್ಚಿಸಿದೆ. ಮೂಲಗಳ ಪ್ರಕಾರ, ರೈ ರಾಘೋಪುರ್ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ನಿರೀಕ್ಷೆಯಿತ್ತು.

ಬಿಹಾರ: ವಿಧಾನಸಭಾ ಚುನಾವಣೆ ಸನ್ನಿಹಿತವಿರುವಾಗ ಪಾಟ್ನಾದಲ್ಲಿ ಆರ್​​ಜೆಡಿ ನಾಯಕನ ಗುಂಡಿಕ್ಕಿ ಹತ್ಯೆ
ರೈ
ನಯನಾ ರಾಜೀವ್
|

Updated on:Sep 11, 2025 | 10:01 AM

Share

ಪಾಟ್ನಾ, ಸೆಪ್ಟೆಂಬರ್ 11:  ಬಿಹಾರ ವಿಧಾನಸಭಾ ಚುನಾವಣೆ ಸನ್ನಿಹಿತವಿರುವಾಗ ಪಾಟ್ನಾದಲ್ಲಿ ಆರ್​ಜೆಡಿ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ.  ಬುಧವಾರ ರಾತ್ರಿ ಇಬ್ಬರು ಅಪರಿಚಿತರು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ರಾಜ್‌ಕುಮಾರ್ ರೈ ಅಲಿಯಾಸ್ ಅಲ್ಲಾ ರೈ ಅವರನ್ನು ಗುಂಡಿಕ್ಕಿ ಹತ್ಯೆ(Murder) ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಚಿತ್ರಗುಪ್ತದ ಮುನ್ನಾಚಕ್ ಪ್ರದೇಶದಲ್ಲಿ ನಡೆದಿದ್ದು, ರಾಜ್ಯ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲು ನಡೆದಿದ್ದು, ಆತಂಕ ಹೆಚ್ಚಿಸಿದೆ. ಮೂಲಗಳ ಪ್ರಕಾರ, ರೈ ರಾಘೋಪುರ್ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ನಿರೀಕ್ಷೆಯಿತ್ತು.

ವಿವರವಾದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಪ್ರಾಥಮಿಕವಾಗಿ, ಭೂ ವಿವಾದವೇ ದಾಳಿಯ ಹಿಂದಿನ ಕಾರಣ ಎಂದು ತೋರುತ್ತದೆ. ರೈ ಭೂ ಸಂಬಂಧಿತ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದರು. ಘಟನೆಯ ಬಗ್ಗೆ ತಿಳಿದ ಪೊಲೀಸ್ ತಂಡ ರೈ ಅವರನ್ನು ಆಸ್ಪತ್ರೆಗೆ ಸಾಗಿಸಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಸ್ಥಳದಿಂದ ಆರು ಕ್ಯಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರದೇಶದಿಂದ ಪಡೆದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿಗಳು ಸ್ಥಳದಿಂದ ಪರಾರಿಯಾಗುವ ಮೊದಲು ಅಪರಾಧ ಎಸಗುತ್ತಿರುವುದು ಕಂಡುಬಂದಿದ್ದು, ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪಾಟ್ನಾ ಪೂರ್ವ ಪೊಲೀಸ್ ವರಿಷ್ಠಾಧಿಕಾರಿ ಪರಿಚಯ್ ಕುಮಾರ್ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿ ಸಾಕ್ಷ್ಯಗಳನ್ನು ಸಂಗ್ರಹಿಸಿತು.

ಮತ್ತಷ್ಟು ಓದಿ:  Video: ಅಮೆರಿಕದ ರೈಲಿನಲ್ಲಿ ಉಕ್ರೇನ್​ ಯುವತಿಯ ಬರ್ಬರ ಹತ್ಯೆ

ಪ್ರತ್ಯಕ್ಷದರ್ಶಿಗಳು ಹೇಳುವಂತೆ ಕೆಲವೇ ಕ್ಷಣದಲ್ಲಿ ಘಟನೆ ನಡೆದುಹೋಗಿದೆ, ನಾಯಕನನ್ನು ಹತ್ಯೆ ಮಾಡಿ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ನಾಯಕನನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಚಿಕಿತ್ಸೆಯ ಸಮಯದಲ್ಲಿ ಅವರು ಸಾವನ್ನಪ್ಪಿದ್ದಾರೆ.

ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ ಮತ್ತು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪಾಟ್ನಾ ಪೂರ್ವ ಎಸ್‌ಪಿ ಪರಿಚಯ್ ಕುಮಾರ್ ತಿಳಿಸಿದ್ದಾರೆ. ದಾಳಿಕೋರರಿಗೆ ರೈ ಚಟುವಟಿಕೆಗಳ ಬಗ್ಗೆ ಮೊದಲೇ ತಿಳಿದಿತ್ತು. ಹಾಗಾಗಿ ಕೊಲೆಗೆ ಪೂರ್ವ ಯೋಜನೆ ರೂಪಿಸಿದ್ದರು.ಕೊಲೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:00 am, Thu, 11 September 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ