Alappuzha Murder: ಕೇರಳದಲ್ಲಿ 12 ಗಂಟೆಯಲ್ಲಿ ಇಬ್ಬರು ರಾಜಕೀಯ ನಾಯಕರ ಹತ್ಯೆ; ಅಲಪ್ಪುಳದಲ್ಲಿ ನಿಷೇಧಾಜ್ಞೆ ಜಾರಿ

ಬಿಜೆಪಿ ನಾಯಕನ ಹತ್ಯೆಯ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ವಿ. ಮುರಳೀಧರನ್, ಇದು ಇಸ್ಲಾಮಿಕ್ ಭಯೋತ್ಪಾದಕ ಗುಂಪಿನ ಕೈವಾಡವಾಗಿದೆ ಎಂದು ಹೇಳಿದ್ದಾರೆ. ಅಪರಾಧಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Alappuzha Murder: ಕೇರಳದಲ್ಲಿ 12 ಗಂಟೆಯಲ್ಲಿ ಇಬ್ಬರು ರಾಜಕೀಯ ನಾಯಕರ ಹತ್ಯೆ; ಅಲಪ್ಪುಳದಲ್ಲಿ ನಿಷೇಧಾಜ್ಞೆ ಜಾರಿ
ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸ್​ - SDPI ನಾಯಕ ಕೆಎಸ್​ ಶಾನ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 19, 2021 | 2:32 PM

ಅಲಪ್ಪುಳ: ಕೇರಳದ ಕರಾವಳಿ ಭಾಗದ ಅಲಪ್ಪುಳ ಜಿಲ್ಲೆಯಲ್ಲಿ ಕೇವಲ 12 ಗಂಟೆಯ ಅವಧಿಯಲ್ಲಿ ನಡೆದ ಎರಡು ಪಕ್ಷಗಳ ಇಬ್ಬರು ನಾಯಕರ ಹತ್ಯೆ ಇಡೀ ಕೇರಳವನ್ನೇ ಬೆಚ್ಚಿಬೀಳಿಸಿದೆ. ಶನಿವಾರ ಸಂಜೆ SDPI ನಾಯಕ ಕೆಎಸ್​ ಶಾನ್​ ಮನೆಗೆ ಹೋಗುವಾಗ ಅವರ ಬೈಕ್​ಗೆ ಡಿಕ್ಕಿ ಹೊಡೆಸಿ ಹಲ್ಲೆ ಮಾಡಲಾಗಿತ್ತು. ನಿನ್ನೆ ರಾತ್ರಿ ಅವರು ಸಾವನ್ನಪ್ಪಿದ್ದರು. ಅದಾದ ಕೆಲವೇ ಗಂಟೆಗಳ ಅಂತರದಲ್ಲಿ ಇಂದು ಮುಂಜಾನೆ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸ್​ ಅವರ ಮನೆಗೆ ನುಗ್ಗಿ ಅಪರಿಚಿತರು ಕೊಲೆ ಮಾಡಿದ್ದಾರೆ. ಇದರಿಂದ ಕೇರಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸೆಕ್ಷನ್ 144 (ನಿಷೇಧಾಜ್ಞೆ) ಜಾರಿಗೊಳಿಸಲಾಗಿದೆ.

ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಶಾನ್ ಹತ್ಯೆಯ ನಂತರ 12 ಗಂಟೆಗಳಲ್ಲೇ ಬಿಜೆಪಿ ಮುಖಂಡನ ಕುತ್ತಿಗೆ ಕೊಯ್ದು ಹತ್ಯೆ ಮಾಡಲಾಗಿದೆ. ಹೀಗಾಗಿ, ಇಂದು ಇಡೀ ಆಲಪ್ಪುಳ ಜಿಲ್ಲೆಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಮುಂಜಾನೆ ಕೇರಳದ ಅಲಪ್ಪುಳದಲ್ಲಿ ಬಿಜೆಪಿ ಮುಖಂಡರೊಬ್ಬರ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಿಜೆಪಿಯ ಒಬಿಸಿ ಮೋರ್ಚಾ ಕೇರಳ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಎಂಬ 40 ವರ್ಷದ ವ್ಯಕ್ತಿ ತಮ್ಮ ಮನೆಯಲ್ಲೇ ಅಪರಿಚಿತರಿಂದ ಕೊಲೆಗೀಡಾಗಿದ್ದಾರೆ.

ಅಲಪ್ಪುಳ ಜಿಲ್ಲೆಯಲ್ಲಿ ಸೆಕ್ಷನ್ 144 ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ ಅಲೆಕ್ಸಾಂಡರ್ ತಿಳಿಸಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಅಲಪ್ಪುಳದಲ್ಲಿ ನಡೆದ ಎರಡು ಕೊಲೆಗಳನ್ನು ಖಂಡಿಸಿದ್ದಾರೆ ಎಂದು ಸಿಎಂಒ ಹೇಳಿಕೆಯಲ್ಲಿ ತಿಳಿಸಿದೆ.

40 ವರ್ಷದ ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸ್ ಅವರನ್ನು ಅಪರಿಚಿತ ದಾಳಿಕೋರರು ಅವರ ಮನೆಯೊಳಗೆ ಕೊಂದಿದ್ದಾರೆ. ಅವರು ಒಬಿಸಿ ಮೋರ್ಚಾ ಕೇರಳ ರಾಜ್ಯ ಕಾರ್ಯದರ್ಶಿ ಮತ್ತು ಬಿಜೆಪಿ ರಾಜ್ಯ ಸಮಿತಿಯ ಸದಸ್ಯರಾಗಿದ್ದರು. ದಾಳಿಕೋರರು ಬಿಜೆಪಿ ಮುಖಂಡನ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. 2016ರ ವಿಧಾನಸಭಾ ಚುನಾವಣೆಯಲ್ಲಿ ಆಲಪ್ಪುಳ ಕ್ಷೇತ್ರದಲ್ಲಿ ರಂಜೀತ್ ಬಿಜೆಪಿ ಅಭ್ಯರ್ಥಿಯಾಗಿದ್ದರು. ಅವರು ವೃತ್ತಿಯಲ್ಲಿ ವಕೀಲರಾಗಿದ್ದರು.

ಬಿಜೆಪಿ ನಾಯಕನ ಹತ್ಯೆಯ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ವಿ. ಮುರಳೀಧರನ್, ಇದು ಇಸ್ಲಾಮಿಕ್ ಭಯೋತ್ಪಾದಕ ಗುಂಪಿನ ಕೈವಾಡವಾಗಿದೆ ಎಂದು ಹೇಳಿದ್ದಾರೆ. ಅಪರಾಧಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯನ್ನು ಇಂದು ಬೆಳಿಗ್ಗೆ ಇರಿದು ಕೊಂದಿದ್ದಾರೆ. ಇದು ಇಸ್ಲಾಮಿಕ್ ಭಯೋತ್ಪಾದಕ ಗುಂಪಿನ ಕೈವಾಡದ ಕೆಲಸ ಎಂದು ನನಗೆ ಮಾಹಿತಿ ಸಿಕ್ಕಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಾನು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಮುರಳೀಧರನ್ ಹೇಳಿದ್ದಾರೆ.

ಇಂದು ಬೆಳಗ್ಗೆ ರಂಜಿತ್ ಅವರ ಮನೆಗೆ ನುಗ್ಗಿದ ಗುಂಪೊಂದು ಬಾಗಿಲು ಬೆಲ್ ಮಾಡಿದೆ. ಮನೆಯ ಬಾಗಿಲು ತೆಗೆದ ಕೂಡಲೇ ಒಳಗೆ ನುಗ್ಗಿದ ದುಷ್ಕರ್ಮಿಗಳು ರಂಜಿತ್ ಶ್ರೀನಿವಾಸ್ ಅವರ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾರೆ.

ಕೇರಳದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಕೆಎಸ್ ಶಾನ್ ಅವರ ಮೇಲೆ ಕೇರಳದ ಕೊಚ್ಚಿಯಲ್ಲಿ ಅಪರಿಚಿತ ಗ್ಯಾಂಗ್ ದಾಳಿ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸ್ ಅವರ ಕೊಲೆ ಸಂಭವಿಸಿದೆ. ಶನಿವಾರ ಕೆ.ಎಸ್. ಶಾನ್ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಅವರ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿತ್ತು. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಮಧ್ಯರಾತ್ರಿ 12.45ಕ್ಕೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು.

ಇದನ್ನೂ ಓದಿ: ಎಸ್​ಡಿಪಿಐ ನಾಯಕನ ಕೊಲೆ ಬೆನ್ನಲ್ಲೇ ಕೇರಳದ ಬಿಜೆಪಿ ನಾಯಕನ ಕತ್ತು ಕೊಯ್ದು ಬರ್ಬರ ಹತ್ಯೆ

ಮಹಿಳೆಯರ ವಿವಾಹ ವಯೋಮಿತಿ ಹೆಚ್ಚಿಸುವ ಕೇಂದ್ರದ ಕ್ರಮಕ್ಕೆ ಕೇರಳ ಮುಸ್ಲಿಂ ಸಂಘಟನೆಗಳ ವಿರೋಧ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್