ಅಲಪ್ಪುಳ: ಕೇರಳದ ಕರಾವಳಿ ಭಾಗದ ಅಲಪ್ಪುಳ ಜಿಲ್ಲೆಯಲ್ಲಿ ಕೇವಲ 12 ಗಂಟೆಯ ಅವಧಿಯಲ್ಲಿ ನಡೆದ ಎರಡು ಪಕ್ಷಗಳ ಇಬ್ಬರು ನಾಯಕರ ಹತ್ಯೆ ಇಡೀ ಕೇರಳವನ್ನೇ ಬೆಚ್ಚಿಬೀಳಿಸಿದೆ. ಶನಿವಾರ ಸಂಜೆ SDPI ನಾಯಕ ಕೆಎಸ್ ಶಾನ್ ಮನೆಗೆ ಹೋಗುವಾಗ ಅವರ ಬೈಕ್‌ಗೆ ಡಿಕ್ಕಿ ಹೊಡೆಸಿ ಹಲ್ಲೆ ಮಾಡಲಾಗಿತ್ತು. ನಿನ್ನೆ ರಾತ್ರಿ ಅವರು ಸಾವನ್ನಪ್ಪಿದ್ದರು. ಅದಾದ ಕೆಲವೇ ಗಂಟೆಗಳ ಅಂತರದಲ್ಲಿ ಇಂದು ಮುಂಜಾನೆ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸ್ ಅವರ ಮನೆಗೆ ನುಗ್ಗಿ ಅಪರಿಚಿತರು ಕೊಲೆ ಮಾಡಿದ್ದಾರೆ. ಇದರಿಂದ ಕೇರಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸೆಕ್ಷನ್ 144 (ನಿಷೇಧಾಜ್ಞೆ) ಜಾರಿಗೊಳಿಸಲಾಗಿದೆ.
ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಶಾನ್ ಹತ್ಯೆಯ ನಂತರ 12 ಗಂಟೆಗಳಲ್ಲೇ ಬಿಜೆಪಿ ಮುಖಂಡನ ಕುತ್ತಿಗೆ ಕೊಯ್ದು ಹತ್ಯೆ ಮಾಡಲಾಗಿದೆ. ಹೀಗಾಗಿ, ಇಂದು ಇಡೀ ಆಲಪ್ಪುಳ ಜಿಲ್ಲೆಯಲ್ಲಿ ಸಿಆರ್‌ಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಮುಂಜಾನೆ ಕೇರಳದ ಅಲಪ್ಪುಳದಲ್ಲಿ ಬಿಜೆಪಿ ಮುಖಂಡರೊಬ್ಬರ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಿಜೆಪಿಯ ಒಬಿಸಿ ಮೋರ್ಚಾ ಕೇರಳ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಎಂಬ 40 ವರ್ಷದ ವ್ಯಕ್ತಿ ತಮ್ಮ ಮನೆಯಲ್ಲೇ ಅಪರಿಚಿತರಿಂದ ಕೊಲೆಗೀಡಾಗಿದ್ದಾರೆ.
ಅಲಪ್ಪುಳ ಜಿಲ್ಲೆಯಲ್ಲಿ ಸೆಕ್ಷನ್ 144 ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ ಅಲೆಕ್ಸಾಂಡರ್ ತಿಳಿಸಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಅಲಪ್ಪುಳದಲ್ಲಿ ನಡೆದ ಎರಡು ಕೊಲೆಗಳನ್ನು ಖಂಡಿಸಿದ್ದಾರೆ ಎಂದು ಸಿಎಂಒ ಹೇಳಿಕೆಯಲ್ಲಿ ತಿಳಿಸಿದೆ.
Kerala: I’ve been told that State Secy of BJP OBC Morcha was stabbed to death, this morning. This is the handy work of Islamic terrorist group is the info coming from Alleppey (Alappuzha). I demand the State govt to take strict action against perpetrators:Union Min V Muralidharan https://t.co/VRuiureFOH pic.twitter.com/BW8Z9riTjR
— ANI (@ANI) December 19, 2021
40 ವರ್ಷದ ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸ್ ಅವರನ್ನು ಅಪರಿಚಿತ ದಾಳಿಕೋರರು ಅವರ ಮನೆಯೊಳಗೆ ಕೊಂದಿದ್ದಾರೆ. ಅವರು ಒಬಿಸಿ ಮೋರ್ಚಾ ಕೇರಳ ರಾಜ್ಯ ಕಾರ್ಯದರ್ಶಿ ಮತ್ತು ಬಿಜೆಪಿ ರಾಜ್ಯ ಸಮಿತಿಯ ಸದಸ್ಯರಾಗಿದ್ದರು. ದಾಳಿಕೋರರು ಬಿಜೆಪಿ ಮುಖಂಡನ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. 2016ರ ವಿಧಾನಸಭಾ ಚುನಾವಣೆಯಲ್ಲಿ ಆಲಪ್ಪುಳ ಕ್ಷೇತ್ರದಲ್ಲಿ ರಂಜೀತ್ ಬಿಜೆಪಿ ಅಭ್ಯರ್ಥಿಯಾಗಿದ್ದರು. ಅವರು ವೃತ್ತಿಯಲ್ಲಿ ವಕೀಲರಾಗಿದ್ದರು.
ಬಿಜೆಪಿ ನಾಯಕನ ಹತ್ಯೆಯ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ವಿ. ಮುರಳೀಧರನ್, ಇದು ಇಸ್ಲಾಮಿಕ್ ಭಯೋತ್ಪಾದಕ ಗುಂಪಿನ ಕೈವಾಡವಾಗಿದೆ ಎಂದು ಹೇಳಿದ್ದಾರೆ. ಅಪರಾಧಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯನ್ನು ಇಂದು ಬೆಳಿಗ್ಗೆ ಇರಿದು ಕೊಂದಿದ್ದಾರೆ. ಇದು ಇಸ್ಲಾಮಿಕ್ ಭಯೋತ್ಪಾದಕ ಗುಂಪಿನ ಕೈವಾಡದ ಕೆಲಸ ಎಂದು ನನಗೆ ಮಾಹಿತಿ ಸಿಕ್ಕಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಾನು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಮುರಳೀಧರನ್ ಹೇಳಿದ್ದಾರೆ.
ಇಂದು ಬೆಳಗ್ಗೆ ರಂಜಿತ್ ಅವರ ಮನೆಗೆ ನುಗ್ಗಿದ ಗುಂಪೊಂದು ಬಾಗಿಲು ಬೆಲ್ ಮಾಡಿದೆ. ಮನೆಯ ಬಾಗಿಲು ತೆಗೆದ ಕೂಡಲೇ ಒಳಗೆ ನುಗ್ಗಿದ ದುಷ್ಕರ್ಮಿಗಳು ರಂಜಿತ್ ಶ್ರೀನಿವಾಸ್ ಅವರ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾರೆ.
ಕೇರಳದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಕೆಎಸ್ ಶಾನ್ ಅವರ ಮೇಲೆ ಕೇರಳದ ಕೊಚ್ಚಿಯಲ್ಲಿ ಅಪರಿಚಿತ ಗ್ಯಾಂಗ್ ದಾಳಿ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸ್ ಅವರ ಕೊಲೆ ಸಂಭವಿಸಿದೆ. ಶನಿವಾರ ಕೆ.ಎಸ್. ಶಾನ್ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಅವರ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿತ್ತು. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಮಧ್ಯರಾತ್ರಿ 12.45ಕ್ಕೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು.
ಇದನ್ನೂ ಓದಿ: ಎಸ್‌ಡಿಪಿಐ ನಾಯಕನ ಕೊಲೆ ಬೆನ್ನಲ್ಲೇ ಕೇರಳದ ಬಿಜೆಪಿ ನಾಯಕನ ಕತ್ತು ಕೊಯ್ದು ಬರ್ಬರ ಹತ್ಯೆ
ಮಹಿಳೆಯರ ವಿವಾಹ ವಯೋಮಿತಿ ಹೆಚ್ಚಿಸುವ ಕೇಂದ್ರದ ಕ್ರಮಕ್ಕೆ ಕೇರಳ ಮುಸ್ಲಿಂ ಸಂಘಟನೆಗಳ ವಿರೋಧ