ಚುನಾವಣೆಗೆ 48 ಗಂಟೆ ಮೊದಲು ಅಭ್ಯರ್ಥಿಗಳ ಅಪರಾಧ ಮಾಹಿತಿ ಸಾರ್ವಜನಿಕಗೊಳಿಸಿ: ಸುಪ್ರೀಂ ಕೋರ್ಟ್

ಈ ಹಿಂದಿನ ತನ್ನ ಆದೇಶವನ್ನು ಮತ್ತಷ್ಟು ಸಬಲೀಕರಣಗೊಳಿಸಿ, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಅಪರಾಧ ಜಾತಕವನ್ನು ಆಯಾ ರಾಜಕೀಯ ಪಕ್ಷಗಳು ಚುನಾವಣೆ ನಡೆಯುವುದಕ್ಕೆ 48 ಗಂಟೆಗೆ ಮುನ್ನ ಸಾರ್ವಜನಿಕಗೊಳಿಸುವುದು ಕಡ್ಡಾಯ ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ.

ಚುನಾವಣೆಗೆ 48 ಗಂಟೆ ಮೊದಲು ಅಭ್ಯರ್ಥಿಗಳ ಅಪರಾಧ ಮಾಹಿತಿ ಸಾರ್ವಜನಿಕಗೊಳಿಸಿ: ಸುಪ್ರೀಂ ಕೋರ್ಟ್
ಸುಪ್ರೀಂ​ ಕೋರ್ಟ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 10, 2021 | 2:40 PM

ನವದೆಹಲಿ:  ಪ್ರಜಾಪ್ರಭುತ್ವಕ್ಕೆ ಆಧಾರವಾಗುವಂತಹದ, ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಂತಹ ಆದೇಶವೊಂದನ್ನು ಸುಪ್ರೀಂ ಕೋರ್ಟ್ ಇದೀಗತಾನೆ ನೀಡಿದೆ. ಈ ಹಿಂದಿನ ತನ್ನ ಆದೇಶವನ್ನು ಮತ್ತಷ್ಟು ಸಬಲೀಕರಣಗೊಳಿಸಿ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಅಪರಾಧ ಜಾತಕವನ್ನು ರಾಜಕೀಯ ಪಕ್ಷಗಳು ಚುನಾವಣೆ ನಡೆಯುವುದಕ್ಕೆ 48 ಗಂಟೆಗೆ ಮುನ್ನವೇ ಸಾರ್ವಜನಿಕಗೊಳಿಸುವುದು ಕಡ್ಡಾಯ ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ.

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಅಪರಾಧ ಜಾತಕ ಪ್ರಕಟ ಕಡ್ಡಾಯ: 2020 ಫೆಬ್ರವರಿಯಲ್ಲಿ ಇದೇ ಮಾದರಿಯ ನೀಡಿದ್ದ ಆದೇಶಕ್ಕೆ ಮಾರ್ಪಾಡು (ಆದೇಶದ ಪ್ಯಾರಾ 4.4 ) ತಂದು ಈ ಮಹತ್ವದ ಆದೇಶ ನೀಡಿದೆ. ಚುನಾವಣೆಗೂ ಮುನ್ನವೇ ಅಭ್ಯರ್ಥಿಗಳ ಅಪರಾಧ ಜಾತಕವನ್ನು 48 ಗಂಟೆಯೊಳಗೆ ಸಾರ್ವಜನಿಕಗೊಳಿಸುವುದು ಕಡ್ಡಾಯ ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ.

ಚುನಾವಣೆಗೆ ಸ್ಪರ್ಧಿಸಲು ಕ್ರಿಮಿನಲ್​ ಹಿನ್ನೆಲೆ ಘೋಷಣೆ ಕಡ್ಡಾಯ: 2020ರಲ್ಲಿ ಬಿಹಾರ ವಿಧಾನಸಭಾ ಚುನಾವಣೆ ಕಾಲದಲ್ಲಿ ಅನೇಕ ಅಭ್ಯರ್ಥಿಗಳು ಕಾನೂನು ಕುಣಿಕೆಯಿಂದ ತಪ್ಪಿಸಿಕೊಂಡು ತಮ್ಮ ಅಪರಾಧ ವೃತ್ತಾಂತವನ್ನು ಬಹಿರಂಗಗೊಳಿಸಿರಲಿಲ್ಲ. ತತ್ಸಂಬಂಧ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಇಂದು ಈ ಮಹತ್ವದ ಆದೇಶ ನೀಡಿದೆ. ಹಾಲಿ ಮತ್ತು ಮಾಜಿ ಸಂಶದರು ಮತ್ತು ಶಾಸಕರ ಮೇಲಿನ ಅಪರಾಧ ಪ್ರಕರಣಗಳ ಸಂಖ್ಯೆ ಕಳೆದ ಎರಡು ವರ್ಷಗಳಲ್ಲಿ ಶೇ. 17 ರಷ್ಟು ಹೆಚ್ಚಾಗಿದೆ.

ಅಭ್ಯರ್ಥಿಯ ಅಪರಾಧ ವೃತ್ತಾಂತಗಳನ್ನು ಪಕ್ಷಗಳ ವೆಬ್​ಸೈಟ್​​​ನಲ್ಲಿ ಸಮಗ್ರವಾಗಿ ಪ್ರಕಟಿಸಲೇಬೇಕು: ಎಲ್ಲಾ ರಾಜಕೀಯ ಪಕ್ಷಗಳೂ ತಾನು ಆಯ್ಕೆ ಮಾಡಿರುವ ಅಭ್ಯರ್ಥಿ ಅಪರಾಧ ಹಿನ್ನೆಲೆ ಹೊಂದಿದ್ದರೂ ಅವರನ್ನು ಏಕೆ ಚುನಾವಣೆ ಸ್ಪರ್ಧೆಗೆ ಏಕೆ ಆಯ್ಕೆ ಮಾಡಲಾಗಿದೆ? ಮತ್ತು ಆ ಅಪರಾಧ ವೃತ್ತಾಂತಗಳ ವಿವರವನ್ನು ಪಕ್ಷಗಳ ವೆಬ್​ಸೈಟ್​​​ನಲ್ಲಿ ಸಮಗ್ರವಾಗಿ ಪ್ರಕಟಿಸಲೇಬೇಕು ಎಂದು ಸುಪ್ರೀಂಕೋರ್ಟ್​ ಆದೇಶಿಸಿದೆ.

ಈ ಬಗ್ಗೆ ಸುಪ್ರೀಂ ಕೋರ್ಟ್​​ ಹಿಂದಿನ ಆದೇಶದ ಅನ್ವಯ ಚುನಾವಣಾ ಆಯೋಗ ಎಲ್ಲಾ ರಾಜಕೀಯ ಪಕ್ಷಗಳಿಗೂ ಸೂಚನೆ ನೀಡಿತ್ತು. ಆದಾಗ್ಯೂ ಬಹುತೇಕ ಅಭ್ಯರ್ಥಿಗಳ ಅಪರಾಧ ಜಾತಕವನ್ನು ರಾಜಕೀಯ ಪಕ್ಷಗಳು ಬಹುರಂಗಗೊಳಿಸಿರಲಿಲ್ಲ ಎಂಬುದು ಗಮನಾರ್ಹ.

(political Parties Must Publish Criminal Antecedents of Candidates Within 48 Hours of Selection orders Supreme Court)

Published On - 11:58 am, Tue, 10 August 21

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ