AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಬಲ ಸಂಗ್ರಹಿಸುವಲ್ಲಿ ಬಿಜೆಪಿ ನಿರತ, ಇಕ್ಕಟ್ಟಿನಲ್ಲಿ ಆರ್​ಜೆಡಿ; ಬಿಹಾರದಲ್ಲಿ ಮುಂದೇನು?

ಮುಂಬರುವ ಲೋಕಸಭೆ ಚುನಾವಣೆಯ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಬಿಜೆಪಿ ಸಭೆ ಕರೆದಿದ್ದು, ನಿತೀಶ್ ಕುಮಾರ್ ಅವರೊಂದಿಗೆ ಮೈತ್ರಿ ಸಾಧ್ಯತೆಯ ಸುಳಿವು ನೀಡಿದೆ. ರಾಜ್ಯ ಘಟಕದ ಮುಖ್ಯಸ್ಥ ಸಾಮ್ರಾಟ್ ಚೌಧರಿ ಅವರು ಊಹಾಪೋಹಗಳನ್ನು ಅಲ್ಲಗೆಳೆದಿದ್ದರೂ ತೆರೆಮರೆಯಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಮೂಲಗಳು ಹೇಳುತ್ತವೆ.

ಬೆಂಬಲ ಸಂಗ್ರಹಿಸುವಲ್ಲಿ ಬಿಜೆಪಿ ನಿರತ, ಇಕ್ಕಟ್ಟಿನಲ್ಲಿ ಆರ್​ಜೆಡಿ; ಬಿಹಾರದಲ್ಲಿ ಮುಂದೇನು?
ನಿತೀಶ್ ಕುಮಾರ್
ರಶ್ಮಿ ಕಲ್ಲಕಟ್ಟ
|

Updated on:Jan 27, 2024 | 4:47 PM

Share

ಪಾಟ್ನಾ ಜನವರಿ 27: ಬಿಹಾರದ (Bihar) ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು 2022 ರಲ್ಲಿ ಬೇರ್ಪಟ್ಟ ಬಿಜೆಪಿಯೊಂದಿಗೆ (BJP) ಮತ್ತೆ ಕೈಜೋಡಿಸಬಹುದು ಎಂಬ ವರದಿಗಳೊಂದಿಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ನಿತೀಶ್ ಕುಮಾರ್ ಅವರು 2013 ರಿಂದ ಬಿಜೆಪಿ, ಕಾಂಗ್ರೆಸ್, ಲಾಲು ಯಾದವ್ ಅವರ ರಾಷ್ಟ್ರೀಯ ಜನತಾ ದಳದ ನಡುವೆ ಜಿಗಿದಿದ್ದಾರೆ. ಅವರ ಈ ಜಿಗಿತಗಳಿಂದಲೇ ಅವರಿಗೆ ‘ಪಲ್ಟೂ ರಾಮ್’ ಎಂಬ ಅಡ್ಡಹೆಸರಿದೆ. 2022 ರಲ್ಲಿ ಬಿಜೆಪಿಯಿಂದ ಬೇರ್ಪಟ್ಟ ನಂತರ, ಅವರು 2024 ರ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆಡಳಿತ ಪಕ್ಷವನ್ನು ಜಂಟಿಯಾಗಿ ಎದುರಿಸಲು ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಉಪಕ್ರಮವನ್ನು ಕೈಗೊಂಡಿದ್ದರು.

ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಬಿಜೆಪಿ ನೀಡಿದ ನಂತರ ನಿತೀಶ್ ಕುಮಾರ್ ಬಿಜೆಪಿಯತ್ತ ವಾಲುತ್ತಿದ್ದಾರೆ ಎಂಬ ಊಹಾಪೋಹಗಳು ಹರಿದಾಡಿವೆ. ಠಾಕೂರ್ ಅವರು 1970 ರ ದಶಕದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಅಪ್ರತಿಮ ಸಮಾಜವಾದಿ ನಾಯಕರಾಗಿದ್ದರು ಮತ್ತು ರಾಜ್ಯದ ವಿವಾದಾತ್ಮಕ ಮದ್ಯಪಾನ ನಿಷೇಧ ನೀತಿಯನ್ನು ಜಾರಿಗೆ ತಂದ ಕೀರ್ತಿಗೆ ಪಾತ್ರರಾಗಿದ್ದರು. ಇಂದಿಗೂ ‘ಜನ್ ನಾಯಕ್’ ಅಥವಾ ‘ಜನರ ನಾಯಕ’ ಎಂದು ನೆನಪಿಸಿಕೊಳ್ಳುತ್ತಾರೆ. ಕರ್ಪೂರಿ ಠಾಕೂರ್ ಅವರ ಪರಂಪರೆ ಇಂದಿಗೂ ರಾಜಕೀಯ ಪಕ್ಷಗಳಿಗೆ ಅಮೂಲ್ಯ ಆಸ್ತಿಯಾಗಿ ಉಳಿದಿದೆ.

ನಿತೀಶ್ ಕುಮಾರ್ ಅವರ ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಅವರು ರಾಜಕೀಯದಲ್ಲಿ ಯಾವುದೇ ಬಾಗಿಲು ಮುಚ್ಚಿಲ್ಲ, ಬೇಕಾದರೆ ಬಾಗಿಲು ತೆರೆಯಬಹುದು ಎಂಬ ನಿಗೂಢ ಹೇಳಿಕೆ ಬೆಳವಣಿಗೆಗೆ ಮತ್ತೊಂದು ಸಸ್ಪೆನ್ಸ್ ಅನ್ನು ಸೇರಿಸಿದೆ.

ನಿತೀಶ್ ಕುಮಾರ್ ಅವರಿಗ ನಿಕಟವಾಗಿರುವ ನಾಯಕರ ಪ್ರಕಾರ, ಜನವರಿ 13 ಇಂಡಿಯಾ ಮೈತ್ರಿಕೂಟದ ಸಭೆಯು ಮಹತ್ವದ ತಿರುವು. ಆ ಸಭೆಯಲ್ಲಿ, ನಿತೀಶ್ ಕುಮಾರ್ ಅವರ ಹೆಸರನ್ನು ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ಅವರು ಸಂಚಾಲಕರಾಗಿ ಪ್ರಸ್ತಾಪಿಸಿದರು. ಇದನ್ನು ಲಾಲು ಯಾದವ್ ಮತ್ತು ಶರದ್ ಪವಾರ್ ಸೇರಿದಂತೆ ಬಹುತೇಕ ಎಲ್ಲಾ ನಾಯಕರು ಅನುಮೋದಿಸಿದರು. ಆದಾಗ್ಯೂ, ರಾಹುಲ್ ಗಾಂಧಿ ಮಧ್ಯಪ್ರವೇಶಿಸಿದ್ದು, ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿರ್ಧಾರವನ್ನು ಕಾಯಬೇಕಾಗಿದೆ ಎಂದು ಹೇಳಿದ್ದರು.

ಇದೀಗ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟಕ್ಕೆ ನಿತೀಶ್ ಕುಮಾರ್ ವಿದಾಯ ಹೇಳಲಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಬಿಹಾರ ಸರ್ಕಾರವು 79 ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಮತ್ತು 45 ಬಿಹಾರ ಆಡಳಿತ ಸೇವೆ (ಬಿಎಎಸ್) ಅಧಿಕಾರಿಗಳನ್ನು ಶುಕ್ರವಾರ ವರ್ಗಾವಣೆ ಮಾಡಿದೆ.

ಮುಂಬರುವ ಲೋಕಸಭೆ ಚುನಾವಣೆಯ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಬಿಜೆಪಿ ಸಭೆ ಕರೆದಿದ್ದು, ನಿತೀಶ್ ಕುಮಾರ್ ಅವರೊಂದಿಗೆ ಮೈತ್ರಿ ಸಾಧ್ಯತೆಯ ಸುಳಿವು ನೀಡಿದೆ. ರಾಜ್ಯ ಘಟಕದ ಮುಖ್ಯಸ್ಥ ಸಾಮ್ರಾಟ್ ಚೌಧರಿ ಅವರು ಊಹಾಪೋಹಗಳನ್ನು ಅಲ್ಲಗೆಳೆದಿದ್ದರೂ ತೆರೆಮರೆಯಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಮೂಲಗಳು ಹೇಳುತ್ತವೆ.

ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಕಾಂಗ್ರೆಸ್ ಮತ್ತು ಆರ್‌ಜೆಡಿ ಎರಡೂ ತಮ್ಮ ಶಾಸಕರ ಸಭೆ ಕರೆದಿವೆ. ಆದರೆ ಬೆಳವಣಿಗೆಯಾಗುತ್ತಿರುವ ರಾಜಕೀಯ ಸನ್ನಿವೇಶಕ್ಕೆ ಯಾವುದೇ ಸಂಬಂಧವಿಲ್ಲ ರಾಹುಲ್ ಗಾಂಧಿಯವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಗೆ ಸಿದ್ಧತೆಗಳನ್ನು ಚರ್ಚಿಸಲು ಸಭೆ ನಡೆಸುವುದಾಗಿ ಕಾಂಗ್ರೆಸ್ ಹೇಳಿಕೊಂಡಿದೆ.

ನಿತೀಶ್ ಕುಮಾರ್ ಮತ್ತು ಅವರ ಪಕ್ಷದ ಜನತಾ ದಳ (ಯುನೈಟೆಡ್) ರಾಷ್ಟ್ರೀಯ ಜನತಾ ದಳದಿಂದ (ಆರ್‌ಜೆಡಿ) ಬೇರ್ಪಟ್ಟು ಅಧಿಕೃತವಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಬಿಜೆಪಿ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ. ನಿತೀಶ್ ಕುಮಾರ್ ಕೆಳಗಿಳಿಯುವ ಬದಲು, ಆರ್‌ಜೆಡಿ ಸಚಿವರನ್ನು ತನ್ನದೇ ಶಾಸಕರೊಂದಿಗೆ ಬದಲಾಯಿಸುವ ಮೂಲಕ ಬಿಹಾರ ಸಂಪುಟವನ್ನು ಪುನರ್ರಚಿಸುವುದನ್ನು ಬಿಜೆಪಿ ನೋಡುತ್ತಿದೆ.

ಇದನ್ನೂ ಓದಿ: ಬಿಹಾರ ಸಿಎಂ ನಿವಾಸಕ್ಕೆ ಧಾವಿಸಿದ ಜೆಡಿಯು ನಾಯಕರು; ಬಿಜೆಪಿ ಬೆಂಬಲದೊಂದಿಗೆ ನಾಳೆ ನಿತೀಶ್‌ ಕುಮಾರ್‌ ಪ್ರಮಾಣ ವಚನ?

ಇಂದು ನಡೆಯಲಿರುವ ಬಿಜೆಪಿಯ ದೊಡ್ಡ ಸಭೆಯು ಪಕ್ಷದ ನಾಯಕರು ತಮ್ಮ ಚುನಾಯಿತ ಪ್ರತಿನಿಧಿಗಳಿಂದ ನಿತೀಶ್ ಕುಮಾರ್ ಅವರಿಗೆ ಬೆಂಬಲ ಪತ್ರಗಳನ್ನು ಸಂಗ್ರಹಿಸುವುದಕ್ಕೆ ಸಾಕ್ಷಿಯಾಗಲಿದೆ. ಬೆಂಬಲ ಪತ್ರಗಳು ದೊರೆತ ನಂತರ ಇಂದು ರಾತ್ರಿ ಮುಖ್ಯಮಂತ್ರಿಗಳ ನಿವಾಸಕ್ಕೆ ತಲುಪಿಸುವ ನಿರೀಕ್ಷೆಯಿದೆ.  ನಿತೀಶ್ ಕುಮಾರ್ ಅವರು ಭಾನುವಾರ ಬೆಳಗ್ಗೆ 10 ಗಂಟೆಗೆ ಶಾಸಕಾಂಗ ಪಕ್ಷದ ಅಧಿವೇಶನ ಕರೆದಿದ್ದಾರೆ. ನಾಳೆಯ ನಂತರ ಬಿಜೆಪಿ ಬೆಂಬಲದೊಂದಿಗೆ ಅವರು ಕೈಜೋಡಿಸಿ ಅಭೂತಪೂರ್ವ ಒಂಬತ್ತನೇ ಬಾರಿಗೆ ಮುಖ್ಯಮಂತ್ರಿ ಹುದ್ದೆಗೆ ಅಧಿಕೃತವಾಗಿ ಹಕ್ಕು ಸಾಧಿಸಬಹುದು ಎಂದು ವರದಿಗಳು ಸೂಚಿಸುತ್ತವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:45 pm, Sat, 27 January 24

ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್