AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಮೋದಿ ಹಠಾವೋ, ದೇಶ್ ಬಚಾವೋ ಪೋಸ್ಟರ್; ಎಎಪಿ ಮತ್ತು ಬಿಜೆಪಿ ನಡುವೆ ವಾಕ್ಸಮರ

Modi Hatao Desh Bachao posters: ಪೊಲೀಸರು ಈ ಪ್ರಕರಣದಲ್ಲಿ 100 ಎಫ್‌ಐಆರ್‌ಗಳನ್ನು ದಾಖಲಿಸಿದ್ದು 6 ಜನರನ್ನು ಬಂಧಿಸಿದ್ದಾರೆ. ಇದು ಸರ್ವಾಧಿಕಾರದ ಪರಮಾವಧಿ ಎಂದು ಎಎಪಿ ಹೇಳಿದೆ

ದೆಹಲಿಯಲ್ಲಿ ಮೋದಿ ಹಠಾವೋ, ದೇಶ್ ಬಚಾವೋ ಪೋಸ್ಟರ್; ಎಎಪಿ ಮತ್ತು ಬಿಜೆಪಿ ನಡುವೆ ವಾಕ್ಸಮರ
ಮೋದಿ ಪೋಸ್ಟರ್
ರಶ್ಮಿ ಕಲ್ಲಕಟ್ಟ
|

Updated on: Mar 22, 2023 | 6:57 PM

Share

ಬಿಜೆಪಿ ಪ್ರಧಾನ ಕಚೇರಿಯಿರುವ ದೀನ್ ದಯಾಳ್ ಉಪಾಧ್ಯಾಯ ಮಾರ್ಗ ಸೇರಿದಂತೆ ದೆಹಲಿಯಾದ್ಯಂತ (Delhi)  ‘ಮೋದಿ ಹಠಾವೋ, ದೇಶ್ ಬಚಾವೋ’ (ಮೋದಿಯನ್ನು ತೊಲಗಿಸಿ, ದೇಶವನ್ನು ಉಳಿಸಿ) ಪೋಸ್ಟರ್‌ಗಳು ಕಂಡುಬಂದ ನಂತರ ಮಂಗಳವಾರ ಆಮ್ ಆದ್ಮಿ ಪಕ್ಷ (AAP) ಮತ್ತು ಬಿಜೆಪಿ (BJP) ನಡುವೆ ಹೊಸ ರಾಜಕೀಯ ಜಟಾಪಟಿ ಶುರುವಾಗಿದೆ. ಪೊಲೀಸರು ಈ ಪ್ರಕರಣದಲ್ಲಿ 100 ಎಫ್‌ಐಆರ್‌ಗಳನ್ನು ದಾಖಲಿಸಿದ್ದು 6 ಜನರನ್ನು ಬಂಧಿಸಿದ್ದಾರೆ. ಇದು ಸರ್ವಾಧಿಕಾರದ ಪರಮಾವಧಿ ಎಂದು ಎಎಪಿ ಹೇಳಿದೆ. ರಾತ್ರೋರಾತ್ರಿ ಪೋಸ್ಟರ್ ಹಾಕಿರುವುದು ಕಂಡು ಬಂದಿದೆ. ಪ್ರಿಂಟಿಂಗ್ ಪ್ರೆಸ್ ಆಕ್ಟ್ ಮತ್ತು ಆಸ್ತಿ ವಿರೂಪ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ವಿಶೇಷ ಸಿಪಿ ದೀಪೇಂದ್ರ ಪಾಠಕ್ ಹೇಳಿದ್ದಾರೆ.

ಪೋಸ್ಟರ್‌ಗಳಲ್ಲಿ ಅವು ಮುದ್ರಿಸಲಾದ ಮುದ್ರಣಾಲಯದ ವಿವರಗಳಿಲ್ಲದಿದ್ದರೂ, ಸೆಂಟ್ರಲ್ ದೆಹಲಿಯ ಎಎಪಿ ಕಚೇರಿಯಿಂದ ಹೊರಟ ತಕ್ಷಣವೇ ವ್ಯಾನ್ ಅನ್ನು ಅಡ್ಡಗಟ್ಟಿ ಅದರಿಂದ ಪೋಸ್ಟರ್ ವಶಪಡಿಸಲಾಗಿದೆ. ಆರಂಭದಲ್ಲಿ ದೆಹಲಿಯಲ್ಲಿ ಪೋಸ್ಟರ್‌ಗಳನ್ನು ಯಾರು ಹಾಕಿದರು ಎಂಬುದರ ಕುರಿತು ಯಾವುದೇ ಸ್ಪಷ್ಟತೆ ಇರಲಿಲ್ಲ ಆದರೆ ಆಮ್ ಆದ್ಮಿ ಪಕ್ಷದ ಪ್ರತಿಕ್ರಿಯೆಯು ಪ್ರಧಾನಿ ನರೇಂದ್ರ ಮೋದಿಯನ್ನು ಗುರಿಯಾಗಿಸುವ ಅವರ ಮತ್ತೊಂದು ನಡೆ ಎಂದು ಸುಳಿವು ನೀಡಿತು.

ಪೊಲೀಸರು ಮುಂಜಾನೆ ಸುಮಾರು 2,000 ಪೋಸ್ಟರ್‌ಗಳನ್ನು ಸಾಗಿಸುತ್ತಿದ್ದ ವ್ಯಾನ್ ಅನ್ನು ಅಡ್ಡಗಟ್ಟಿ ವಶಪಡಿಸಿಕೊಂಡಿದ್ದು ಪೋಸ್ಟರ್ ಅಂಟಿಸುವಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆರು ಜನರನ್ನು ಬಂಧಿಸಿದ್ದಾರೆ ಎಂದು ಟಿವಿ9 ಭಾರತ್ ವರ್ಷ್ ವರದಿಯಲ್ಲಿ ತಿಳಿಸಿದೆ. ಆಮ್ ಆದ್ಮಿ ಪಕ್ಷವು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದು ಪೋಲೀಸರ ಕ್ರಮವನ್ನು “ಸರ್ವಾಧಿಕಾರದ ಪರಮಾವಧಿ” ಎಂದು ಕರೆದಿದೆ.

ಎಎಪಿ ವಾಗ್ದಾಳಿಗೆ ದೆಹಲಿ ಬಿಜೆಪಿ ತೀವ್ರವಾಗಿ ಪ್ರತಿಕ್ರಿಯಿಸಿದ್ದು “ಕೇಜ್ರಿವಾಲ್ ಹಠಾವೋ, ದಿಲ್ಲಿ ಬಚಾವೋ” (ಕೇಜ್ರಿವಾಲ್ ತೆಗೆದುಹಾಕಿ, ದೆಹಲಿಯನ್ನು ಉಳಿಸಿ) ಘೋಷಣೆಗಳನ್ನು ಕೂಗಿದ್ದಾರೆ. ದೆಹಲಿಯ ಬಿಜೆಪಿ ನಾಯಕ ಹರೀಶ್ ಖುರಾನಾ ಅವರು ಪ್ರಧಾನಿ ಮೋದಿ ವಿರುದ್ಧದ ಪೋಸ್ಟರ್‌ಗಳ ಬಗ್ಗೆ ಕೇಜ್ರಿವಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು ಕೇಜ್ರಿವಾಲ್ “ಬಲಿಪಶು ರಾಜಕಾರಣ” ಮಾಡುವುದನ್ನು ನಿಲ್ಲಿಸಬೇಕು ಎಂದಿದ್ದಾರೆ.

ಇದನ್ನೂ ಓದಿ:Delhi Earthquake: ದೆಹಲಿಯಲ್ಲಿ ಮತ್ತೆ ಭೂಕಂಪ; 2.7ರಷ್ಟು ತೀವ್ರತೆ ದಾಖಲು

ಪೋಸ್ಟರ್‌ಗಳನ್ನು ಹಾಕಲು ರಾಜಕೀಯ ಪಕ್ಷವೊಂದು ತಮ್ಮನ್ನು ಕೇಳಿದೆ ಎಂದು ಆರೋಪಿಗಳು ವಿಚಾರಣೆ ವೇಳೆ ಬಹಿರಂಗಪಡಿಸಿದ್ದಾರೆ. ಅವರು ಈಗಾಗಲೇ ಸುಮಾರು 2,000 ಪೋಸ್ಟರ್‌ಗಳನ್ನು ಹಾಕಿದ್ದು ಹೆಚ್ಚಿನ ಪೋಸ್ಟರ್ ಅವರಿಂದದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಆದೇಶವನ್ನು ನೀಡಿದವರು ಯಾರು ಎಂದು ಖಚಿತಪಡಿಸಿಕೊಳ್ಳಲು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು ಇನ್ನೂ ಹೆಚ್ಚಿನ ಜನರನ್ನು ಬಂಧಿಸಬಹುದು ಎಂದು ಸುಳಿವು ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ