AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರದ್ ಪವಾರ್ ಭೇಟಿ ಮಾಡಿದ ಚುನಾವಣಾ ತಂತ್ರ ಪರಿಣತ ಪ್ರಶಾಂತ್ ಕಿಶೋರ್; 15 ದಿನಗಳಲ್ಲಿ ಇದು ಮೂರನೇ ಬಾರಿ

Sharad Pawar: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್​​ನ ಭರ್ಜರಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಶಾಂತ್ ಕಿಶೋರ್, ಜೂನ್ 11 ರಂದು ಮುಂಬೈನ ತಮ್ಮ ನಿವಾಸದಲ್ಲಿ ಪವಾರ್ ಅವರನ್ನು ಭೇಟಿ ಮಾಡಿದ್ದರು.

ಶರದ್ ಪವಾರ್ ಭೇಟಿ ಮಾಡಿದ ಚುನಾವಣಾ ತಂತ್ರ ಪರಿಣತ ಪ್ರಶಾಂತ್ ಕಿಶೋರ್; 15 ದಿನಗಳಲ್ಲಿ ಇದು ಮೂರನೇ ಬಾರಿ
ಪ್ರಶಾಂತ್ ಕಿಶೋರ್- ಶರದ್ ಪವಾರ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 23, 2021 | 6:53 PM

ದೆಹಲಿ: ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ ಅವರು ನವದೆಹಲಿಯಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಬುಧವಾರ ಭೇಟಿಯಾದರು. ಎಂಟು ವಿರೋಧ ಪಕ್ಷಗಳ ನಾಯಕರು ಪವಾರ್ ಅವರ ನಿವಾಸದಲ್ಲಿ ಸಭೆ ನಡೆಸಿ ದೇಶ ಎದುರಿಸುತ್ತಿರುವ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ ಬೆನ್ನಲ್ಲೇ ಪ್ರಶಾಂತ್ ಕಿಶೋರ್- ಪವಾರ್ ಭೇಟಿ ನಡೆದಿದೆ. ಮೂಲಗಳ ಪ್ರಕಾರ, ದೆಹಲಿಯ ನಿವಾಸದಲ್ಲಿ ಪ್ರಶಾಂತ್ ಕಿಶೋರ್ ಮತ್ತು ಪವಾರ್ ನಡುವಿನ ಚರ್ಚೆಗಳು ಸುಮಾರು ಒಂದು ಗಂಟೆ ಕಾಲ ನಡೆದಿದೆ. 15 ದಿನಗಳ ಅವಧಿಯಲ್ಲಿ ಇದು ಮೂರನೇ ಬಾರಿ ಆಗಿದೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್​​ನ ಭರ್ಜರಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕಿಶೋರ್, ಜೂನ್ 11 ರಂದು ಮುಂಬೈನ ತಮ್ಮ ನಿವಾಸದಲ್ಲಿ ಪವಾರ್ ಅವರನ್ನು ಭೇಟಿ ಮಾಡಿದ್ದರು. ಆಮೇಲೆ ಮತ್ತೆ ಎನ್‌ಸಿಪಿ ಮುಖ್ಯಸ್ಥರನ್ನು ದೆಹಲಿಯ ನಿವಾಸದಲ್ಲಿ ಸೋಮವಾರ ಭೇಟಿಯಾದರು. ಪವಾರ್ ಅವರೊಂದಿಗಿನ ಈ ಸಭೆಗಳು ಬಿಜೆಪಿಯ ವಿರುದ್ಧ ತೃತೀಯ ರಂಗ ರಚಿಸಲು ವಿರೋಧ ಪಕ್ಷಗಳು ಒಗ್ಗೂಡುವ ಸಾಧ್ಯತೆಯ ಬಗ್ಗೆ ಊಹಾಪೋಹಗಳಿಗೆ ಮತ್ತಷ್ಟು ಪುಷ್ಠಿ ನೀಡಿವೆ.

ಪವಾರ್ ಮಂಗಳವಾರ ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ಆಮ್ ಆದ್ಮಿ ಪಕ್ಷ, ರಾಷ್ಟ್ರೀಯ ಲೋಕ ದಳ ಮತ್ತು ಎಡಪಕ್ಷ ಸೇರಿದಂತೆ ಎಂಟು ವಿರೋಧ ಪಕ್ಷಗಳ ನಾಯಕರ ಸಭೆಯನ್ನು ದೆಹಲಿಯ ತಮ್ಮ ನಿವಾಸದಲ್ಲಿ ಆಯೋಜಿಸಿದ್ದರು.

ಆದಾಗ್ಯೂ ಆ ಚರ್ಚೆಗಳಲ್ಲಿ ಭಾಗವಹಿಸಿದ ನಾಯಕರು ಇದು ರಾಷ್ಟ್ರೀಯ ಮಂಚ್ ಅವರ ಸಮಾನ ಮನಸ್ಕ ವ್ಯಕ್ತಿಗಳ “ರಾಜಕೀಯೇತರ” ಸಭೆ ಎಂದು ಪ್ರತಿಪಾದಿಸಿದರು. ಮಾಜಿ ಹಣಕಾಸು ಮಂತ್ರಿ ಮತ್ತು ಟಿಎಂಸಿ ಉಪಾಧ್ಯಕ್ಷ ಯಶ್ವಂತ್ ಸಿನ್ಹಾ ಮತ್ತು ಇತರರು ರಾಷ್ಟ್ರೀಯ ಮಂಚ್ ಆರಂಭಿಸಿದ್ದರು.

ಮಂಗಳವಾರ ನಡೆದ ವಿರೋಧ ಪಕ್ಷದ ನಾಯಕರ ಸಭೆಯ ಮೊದಲು, ಪವಾರ್ ಅದೇ ದಿನ ಎನ್‌ಸಿಪಿಯ ರಾಷ್ಟ್ರೀಯ ಕಾರ್ಯಕಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು ಮತ್ತು ಅವರ ಪಕ್ಷದ ಮುಖಂಡರೊಂದಿಗೆ ಅದರ “ಭವಿಷ್ಯದ ನೀತಿಗಳು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅದರ ಪಾತ್ರ ಮತ್ತು ಪ್ರಸ್ತುತ ರಾಷ್ಟ್ರೀಯ ವಿಷಯಗಳ ಕುರಿತು” ವಿವರವಾದ ಚರ್ಚೆ ನಡೆಸಿದರು.

ಪವಾರ್ ಅವರ ನಿವಾಸದಲ್ಲಿ ನಡೆದ ವಿರೋಧ ಪಕ್ಷದ ನಾಯಕರ ಸಭೆಯಲ್ಲಿ ರಾಷ್ಟ್ರೀಯ ಸಮ್ಮೇಳನದ ಮುಖಂಡ ಒಮರ್ ಅಬ್ದುಲ್ಲಾ, ಎಸ್‌ಪಿಯ ಘನಶ್ಯಾಮ್ ತಿವಾರಿ, ಆರ್‌ಎಲ್‌ಡಿ ಅಧ್ಯಕ್ಷ ಜಯಂತ್ ಚೌಧರಿ, ಎಎಪಿಯಿಂದ ಸುಶೀಲ್ ಗುಪ್ತಾ, ಸಿಪಿಐನಿಂದ ಬಿನೊಯ್ ವಿಶ್ವ, ಸಿಪಿಐ-ಎಂನಿಂದ ನಿಲೋತ್ಪಲ್ ಬಸು ಮತ್ತು ಟಿಎಂಸಿ ಉಪಾಧ್ಯಕ್ಷ ಯಶ್ವಂತ್ ಸಿನ್ಹಾ ಭಾಗವಹಿಸಿದ್ದರು.

ಮಾಜಿ ಕಾಂಗ್ರೆಸ್ ಮುಖಂಡ ಸಂಜಯ್ ಝಾ ಮತ್ತು ಜನತಾದಳ-ಯುನೈಟೆಡ್ (ಜೆಡಿ-ಯು) ಮಾಜಿ ನಾಯಕ ಪವನ್ ವರ್ಮಾ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ರಾಜಕಾರಣಿಗಳಲ್ಲದೆ, ಜಾವೇದ್ ಅಖ್ತರ್, ಮಾಜಿ ರಾಯಭಾರಿ ಕೆ.ಸಿ.ಸಿಂಗ್ ಮತ್ತು ನ್ಯಾಯ (ನಿವೃತ್ತ) ಎ.ಪಿ ಷಾ ಅವರಂತಹ ಹಲವಾರು ಗಣ್ಯರು ಮಂಗಳವಾರದ ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಶರದ್ ಪ್ರವಾರ್ ತೃತೀಯ ರಂಗದ ಸಭೆ ಆಯೋಜಿಸುತ್ತಿಲ್ಲ: ಊಹಾಪೋಹಗಳಿಗೆ ತೆರೆ ಎಳೆದ ಆಯೋಜಕರು

ಇದನ್ನೂ ಓದಿ:  Prashant Kishor ಶರದ್ ಪವಾರ್ ಭೇಟಿಯಾದ ಪ್ರಶಾಂತ್ ಕಿಶೋರ್; ರಾಜಕೀಯ ವಲಯದಲ್ಲಿ ಭಾರೀ ಊಹಾಪೋಹ ಸೃಷ್ಟಿ

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್