AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿರಿಯಾ ಬಿಕ್ಕಟ್ಟು: ಸಿರಿಯಾದಿಂದ ಹೊರಡುವಂತೆ ಭಾರತೀಯ ಪ್ರಜೆಗಳಿಗೆ ಕೇಂದ್ರ ಸರ್ಕಾರ ಸೂಚನೆ

ಸಿರಿಯಾದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಉಂಟಾಗಿದ್ದು, ಅಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಈ ತಕ್ಷಣವೇ ಸಿರಿಯಾವನ್ನು ತೋರೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದರ ಜತೆಗೆ ಸಿರಿಯಾ ಟರ್ಕಿಯಿಂದ ಬೆಂಬಲಿತವಾಗಿರುವ ಬಂಡುಕೋರ ಗುಂಪುಗಳು ಮತ್ತು ಮಿಲಿಷಿಯಾಗಳಿಂದ ಸುತ್ತುವರಿದಿದೆ. ಹೀಗಾಗಿ ತಕ್ಷಣ ಸಿರಿಯಾವನ್ನು ಬಿಟ್ಟು ಭಾರತಕ್ಕೆ ಬರುವಂತೆ ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಈ ಪರಿಸ್ಥಿತಿಯಲ್ಲಿ ಭಾರತೀಯ ಪ್ರಜೆಗಳು ಸಿರಿಯಾ ನಗರಗಳಲ್ಲಿ ಓಡಾಡದಂತೆ ಸೂಚನೆ ನೀಡಲಾಗಿದೆ.

ಸಿರಿಯಾ ಬಿಕ್ಕಟ್ಟು: ಸಿರಿಯಾದಿಂದ ಹೊರಡುವಂತೆ ಭಾರತೀಯ ಪ್ರಜೆಗಳಿಗೆ ಕೇಂದ್ರ ಸರ್ಕಾರ ಸೂಚನೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Dec 07, 2024 | 10:40 AM

Share

ಸಿರಿಯಾ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯ, ರಷ್ಯಾ ಮತ್ತು ಇರಾನ್ ಬೆಂಬಲಿತ ಬಶರ್ ಅಲ್-ಅಸ್ಸಾದ್ ಆಡಳಿತವನ್ನು ಟರ್ಕಿಯಿಂದ ಬೆಂಬಲಿತವಾಗಿರುವ ಬಂಡುಕೋರ ಗುಂಪುಗಳು ಮತ್ತು ಮಿಲಿಷಿಯಾಗಳಿಂದ ಸುತ್ತುವರಿದಿದೆ. ಈ ಕಾರಣದಿಂದ ಸಿರಿಯಾದಲ್ಲಿ ಪರಿಸ್ಥಿತಿ ಹದಗೆಡಿದೆ. ಇದೀಗ ಸಿರಿಯಾದಲ್ಲಿರುವ ಭಾರತೀಯರನ್ನು ಎಚ್ಚರಿಕೆ ಹಾಗೂ ಜಾಗೃತೆಯಲ್ಲಿ ಇರುವಂತೆ ಭಾರತ ಹೇಳಿದೆ. ಸಿರಿಯಾ ಪರಿಸ್ಥಿತಿಯ ಬಗ್ಗೆ ಭಾರತ ಸರ್ಕಾರವು ಕಳವಳ ವ್ಯಕ್ತಪಡಿಸಿದೆ. ಇದೀಗ ಭಾರತ ಸರ್ಕಾರ ಎಲ್ಲಾ ಭಾರತೀಯ ಪ್ರಜೆಗಳಿಗೆ ಮುಂದಿನ ಸೂಚನೆ ಬರುವವರೆಗೆ ಪ್ರಯಾಣ ಮಾಡುವುದನ್ನು ತಪ್ಪಿಸುವಂತೆ ಹೇಳಿದೆ.

ಇನ್ನು ಈ ಬಗ್ಗೆ ಭಾರತ ಸರ್ಕಾರ ತುರ್ತು ಸಹಾಯವಾಣಿ ಸಂಖ್ಯೆ ಮತ್ತು ಇಮೇಲ್ ಐಡಿಯನ್ನು ಹಂಚಿಕೊಂಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಸ್ತುತ ಸಿರಿಯಾದಲ್ಲಿರುವ ಎಲ್ಲಾ ಭಾರತೀಯರಿಗೆ ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಸಾಧಿಸುವಂತೆ ಹೇಳಿದೆ. ಇನ್ನು ಭಾರತ ಸರ್ಕಾರ ಸಿರಿಯಾದಲ್ಲಿರುವ ಭಾರತೀಯರನ್ನು ಕರೆತರಲು ಈಗಾಗಲೇ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಸರ್ಕಾರ ಸೂಚನೆ ಬರುವವರೆಗೆ ಯಾರು ಕೂಡ ಹೊರಗೆ ಬರಬೇಡಿ. ಸಾಧ್ಯವಿರುವವರು, ಲಭ್ಯವಿರುವ ಆರಂಭಿಕ ವಾಣಿಜ್ಯ ವಿಮಾನಗಳ ಮೂಲಕ ಸಿರಿಯಾವನ್ನು ತೊರೆಯುವಂತೆ ಸೂಚನೆ ನೀಡಿದೆ.

ಯಾರಿಗೂ ಸಿರಿಯಾವನ್ನು ತೊರೆಯಲು ಸಾಧ್ಯವಿಲ್ಲ ಅವರು ಸುರಕ್ಷತೆಯಿಂದ ಇರುವಂತೆ ಹಾಗೂ ಎಲ್ಲೂ ಕೂಡ ಓಡಾಡಂತೆ ಆದೇಶವನ್ನು ನೀಡಿದೆ. ಸಿರಿಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯುವ ಮೊಬೈಲ್​​ ಸಂಖ್ಯೆ +963 993385973 ಹಂಚಿಕೊಂಡಿದೆ. ಹಾಗೂ WhatsApp ಮತ್ತು hoc.damascus@mea.gov.in ಮೇಲ್ ಮೂಲಕವೂ ಸಂಪರ್ಕ ಸಾಧಿಸಬಹುದು ಎಂದು ಹೇಳಿದೆ.

ಇದನ್ನೂ ಓದಿ: ತುರ್ತು ಮಿಲಿಟರಿ ಆಡಳಿತ ಹೇರಿ ಕೆಲವೇ ಗಂಟೆಗಳಲ್ಲಿ ಆದೇಶ ಹಿಂಪಡೆದ ದಕ್ಷಿಣ ಕೊರಿಯಾ

ಸಿರಿಯಾದಲ್ಲಿ ಏನಾಗುತ್ತಿದೆ

ಸಿರಿಯಾ ರಾಜಕೀಯ ಪ್ರಕ್ಷುಬ್ಧತೆ ಉಂಟಾಗಿದೆ. ಇದರ ಜತೆಗೆ ರಷ್ಯಾ ಮತ್ತು ಇರಾನ್ ಬೆಂಬಲಿತ ಬಶರ್ ಅಲ್-ಅಸ್ಸಾದ್ ಆಡಳಿತವು ಟರ್ಕಿಯಿಂದ ಬೆಂಬಲಿತವಾಗಿರುವ ಬಂಡುಕೋರ ಗುಂಪುಗಳು ಮತ್ತು ಮಿಲಿಷಿಯಾಗಳಿಂದ ಸುತ್ತುವರಿದಿದೆ. ಬಂಡಾಯ ಪಡೆಗಳು, ಕಳೆದ ವಾರ ಸಿರಿಯಾ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅನ್ನು ಪದಚ್ಯುತಗೊಳಿಸಲು ದಾಳಿಯನ್ನು ನಡೆಸಿತ್ತು.

ಇಸ್ಲಾಮಿಸ್ಟ್ ನೇತೃತ್ವದ ಬಂಡುಕೋರರು ಸಿರಿಯಾದ ಹೋಮ್ಸ್‌ನ ಗೇಟ್‌ ಬಿಡುಬಿಟ್ಟಿದ್ದರು. ಇತರ ಸಿರಿಯನ್ ನಗರಗಳು ಸರ್ಕಾರದ ನಿಯಂತ್ರಣದಿಂದ ತಮ್ಮ ನಿಯಂತ್ರಣಕ್ಕೆ ಪ್ರಯತ್ನಗಳು ನಡೆದಿದೆ. ಇಸ್ಲಾಮಿಸ್ಟ್ ಬಂಡುಕೋರರ ಆಕ್ರಮಣದಿಂದ ಇಡಿ ಸಿರಿಯಾ ತತ್ತರಿಸಿದೆ. ಅಲ್ಲಿ ಪ್ರಜೆಗಳಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಸಿರಿಯಾದ ಎರಡನೇ ನಗರ ಅಲೆಪ್ಪೊ ಮತ್ತು ಆಯಕಟ್ಟಿನ ನೆಲೆಗೊಂಡಿರುವ ಹಮಾ ಈಗಾಗಲೇ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ನಿಯಂತ್ರಣದಿಂದ ಬಂಡುಕೋರರು ಕೈಗೆ ಸೇರಿದೆ.

ಬಶರ್ ಅಲ್-ಅಸ್ಸಾದ್ ಅವರೇ ಕಳೆದ ಐದು ದಶಕಗಳಿಂದ ಸಿರಿಯಾವನ್ನು ಆಳುತ್ತಿದ್ದಾರೆ. ಮೊದಲ ಬಾರಿಗೆ ಈ ರೀತಿಯ ಘಟನೆ ನಡೆದಿದೆ. ಬಶರ್ ಅಸ್ಸಾದ್‌ನ ಪ್ರಮುಖ ಭದ್ರಕೋಟೆಯಾದ ಮೆಡಿಟರೇನಿಯನ್ ಕರಾವಳಿಯಿಂದ ರಾಜಧಾನಿ ಡಮಾಸ್ಕಸ್‌ನಲ್ಲಿ ತಮ್ಮ ಅಧಿಕಾರವನ್ನು ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ