AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳವನ್ನು ತೆಕ್ಕೆಗೆ ತೆಗೆದುಕೊಳ್ಳಲು ‘ರೋಡ್​ ಶೋ’ ನಡೆಸಲಿದ್ದಾರೆ ಅಮಿತ್​ ಶಾ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 200 ಸ್ಥಾನ ಗೆಲ್ಲುವ ಗುರಿಯನ್ನು ರಾಜ್ಯ ನಾಯಕರಿಗೆ ನೀಡಲಾಗಿದೆ. ರೋಡ್​ ಶೋ ನಂತರ ಅಮಿತ್​ ಶಾ 1921ರಲ್ಲಿ ರವೀಂದ್ರನಾಥ ಠಾಗೋರ್​ ಸ್ಥಾಪಿಸಿದ ವಿಶ್ವ ಭಾರತಿ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಲಿದ್ದಾರೆ.

ಪಶ್ಚಿಮ ಬಂಗಾಳವನ್ನು ತೆಕ್ಕೆಗೆ ತೆಗೆದುಕೊಳ್ಳಲು ‘ರೋಡ್​ ಶೋ’ ನಡೆಸಲಿದ್ದಾರೆ ಅಮಿತ್​ ಶಾ
ಅಮಿತ್ ಶಾ ಮತ್ತು ಮಮತಾ ಬ್ಯಾನರ್ಜಿ
Skanda
| Edited By: |

Updated on: Dec 18, 2020 | 1:34 PM

Share

ಕೋಲ್ಕತ್ತಾ: ಬಿಜೆಪಿ ಪಶ್ಚಿಮ ಬಂಗಾಳ ರಾಜ್ಯವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಹುಮ್ಮಸ್ಸಿನಲ್ಲಿದೆ. ಇದಕ್ಕಾಗಿಯೇ ಕೇಂದ್ರ ಗೃಹ ಸಚಿವ ಅಮಿತ್​ ಶಾ 2 ದಿನಗಳ ಭೇಟಿ ನೀಡಲಿದ್ದು, ಬೃಹತ್​ ರೋಡ್​ ಶೋ ಆಯೋಜಿಸಲಾಗುತ್ತಿದೆ. ಶನಿವಾರದಂದು ರಾಜ್ಯಕ್ಕೆ ಆಗಮಿಸಲಿರುವ ಅಮಿತ್​ ಶಾ ಬಿರ್​ಭೂಮ್ ಪ್ರದೇಶದಲ್ಲಿ ರೋಡ್​ ಶೋ ನಡೆಸಲಿದ್ದು, ಮಿಡ್ನಾಪುರ್​ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಪಶ್ಚಿಮ ಬಂಗಾಳದಲ್ಲಿ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಗುರುವಾರವಷ್ಟೇ ತೃಣಮೂಲ ಕಾಂಗ್ರೆಸ್ ತೊರೆದಿರುವ ಬಂಗಾಳದ ಮಾಜಿ ಸಚಿವ ಸುವೇಂದು ಅಧಿಕಾರಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಸುವೇಂದು ಅಧಿಕಾರಿಯ ಸ್ವಕ್ಷೇತ್ರ ಮಿಡ್ನಾಪುರದಲ್ಲಿಯೇ ಅವರನ್ನು ಬಿಜೆಪಿಗೆ ಸೇರ್ಪಡೆಗೊಳಿಸುವ ಕಾರ್ಯಕ್ರಮ ಇರಲಿದೆ ಎಂದು ವರದಿಯಾಗಿದೆ.

ಈ ಮೂಲಕ ಬಿಜೆಪಿಗೆ ಹೊಸ ನಾಯಕನನ್ನು ಕರೆತರುವ ಪ್ರಯತ್ನ ನಡೆಸಲಾಗುತ್ತಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 200 ಸ್ಥಾನ ಗೆಲ್ಲುವ ಗುರಿಯನ್ನು ರಾಜ್ಯ ನಾಯಕರಿಗೆ ನೀಡಲಾಗಿದೆ. ರೋಡ್​ ಶೋ ನಂತರ ಅಮಿತ್​ ಶಾ 1921ರಲ್ಲಿ ರವೀಂದ್ರನಾಥ ಠಾಗೋರ್​ ಸ್ಥಾಪಿಸಿದ ವಿಶ್ವ ಭಾರತಿ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಲಿದ್ದಾರೆ.

ಪರಕೀಯರ ಪಕ್ಷಕ್ಕೆ ಪಶ್ಚಿಮ ಬಂಗಾಳದಲ್ಲಿ ಜಾಗವಿಲ್ಲ ಕೇಂದ್ರ ಸರ್ಕಾರ ಹಾಗೂ ನರೇಂದ್ರ ಮೋದಿಯ ಬಗ್ಗೆ ಸದಾ ಕಿಡಿಕಾರುತ್ತಿರುವ ಮಮತಾ ಬ್ಯಾನರ್ಜಿ, ಬಿಜೆಪಿಯನ್ನು ಪರಕೀಯರ ಪಕ್ಷ ಎಂದು ಛೇಡಿಸಿದ್ದಾರೆ. ಬಂಗಾಳದಲ್ಲಿ ಬಿಜೆಪಿ ನೆಲೆಕಾಣುವುದು ಅಸಾಧ್ಯ. ಇಲ್ಲಿನ ಸಾಂಸ್ಕೃತಿಕ ಹಿನ್ನೆಲೆ ಮತ್ತು ಇತಿಹಾಸದ ಬಗ್ಗೆ ಅರಿವಿಲ್ಲದ ಬಿಜೆಪಿ ಯಾವ ಮಟ್ಟಕ್ಕಾದರೂ ಇಳಿಯಲು ಸಿದ್ಧವಿದೆ. ಆದರೆ, ನಾವು ಅದಕ್ಕೆ ಆಸ್ಪದ ನೀಡುವುದಿಲ್ಲ ಎಂದು ಹೇಳಿಕೆ ನೀಡಿದ್ಧಾರೆ.

‘ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೋತರೆ ಮಮತಾ ಬ್ಯಾನರ್ಜಿಯ ಹತ್ಯೆ ಆದೀತು‘

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ