ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಭೇಟಿ ಮಾಡಿದ ಪ್ರಶಾಂತ್ ಕಿಶೋರ್

Prashant Kishor: ಕಳೆದ ಕೆಲವು ವಾರಗಳಲ್ಲಿ ಸರಣಿ ರಾಜಕೀಯ ಸಭೆಗಳನ್ನು ನಡೆಸಿದ ಕಿಶೋರ್, ಸಭೆಗಾಗಿ ರಾಹುಲ್ ಗಾಂಧಿಯವರ ಮನೆಗೆ ಬಂದಿದ್ದರು. ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಮುನ್ನ ಪಂಜಾಬ್‌ನಲ್ಲಿ ಕಾಂಗ್ರೆಸ್  ಮುಖಂಡರ ನಡುವೆ ಶಾಂತಿ ಸಂಧಾನ ಮಾಡುವ ಪ್ರಯತ್ನಗಳ ಹಿನ್ನೆಲೆಯಲ್ಲಿ ಈ ಸಭೆ ನಡೆಯುತ್ತಿದೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಭೇಟಿ ಮಾಡಿದ ಪ್ರಶಾಂತ್ ಕಿಶೋರ್
ಪ್ರಶಾಂತ್ ಕಿಶೋರ್- ರಾಹುಲ್ ಗಾಂಧಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 13, 2021 | 5:08 PM

ದೆಹಲಿ: ಚುನಾವಣಾ ನೀತಿ ನಿರೂಪಕ ಪ್ರಶಾಂತ್ ಕಿಶೋರ್ ದೆಹಲಿಯಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿ ಮಾಡಿದನಂತರ ಪ್ರಶಾಂತ್ ಕಿಶೋರ್ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕೆ.ಸಿ.ವೇಣುಗೋಪಾಲ್ ಭಾಗಿಯಾಗಿದ್ದರು. ಕಳೆದ ಕೆಲವು ವಾರಗಳಲ್ಲಿ ಸರಣಿ ರಾಜಕೀಯ ಸಭೆಗಳನ್ನು ನಡೆಸಿದ ಕಿಶೋರ್, ಸಭೆಗಾಗಿ ರಾಹುಲ್ ಗಾಂಧಿಯವರ ಮನೆಗೆ ಬಂದಿದ್ದರು. ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಮುನ್ನ ಪಂಜಾಬ್‌ನಲ್ಲಿ ಕಾಂಗ್ರೆಸ್  ಮುಖಂಡರ ನಡುವೆ ಶಾಂತಿ ಸಂಧಾನ ಮಾಡುವ ಪ್ರಯತ್ನಗಳ ಹಿನ್ನೆಲೆಯಲ್ಲಿ ಈ ಸಭೆ ನಡೆಯುತ್ತಿದೆ. ಪಂಜಾಬ್​​ನಲ್ಲಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವೆ ಜಟಾಪಟಿ ನಡೆಯುತ್ತಿದೆ.

2024 ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ವಿರೋಧ ಪಕ್ಷಗಳ ನ್ಯಾಷನಲ್ ಫ್ರಂಟ್ ರಚನೆಯಾಗುತ್ತದೆ ಎಂಬ ಊಹಾಪೋಹದ ನಡುವೆ ಶರದ್ ಪವಾರ್ ಮತ್ತು ಪ್ರಶಾಂತ್ ಕಿಶೋರ್ ಅವರು ಜೂನ್ 21 ರಂದು ಸುಮಾರು ಎರಡು ವಾರಗಳಲ್ಲಿ ಎರಡನೇ ಬಾರಿಗೆ ದೆಹಲಿಯಲ್ಲಿ ಭೇಟಿಯಾದರು. ಎನ್‌ಸಿಪಿ ಮುಖ್ಯಸ್ಥರ ನಿವಾಸದಲ್ಲಿ ಕಿಶೋರ್ ಮತ್ತು ಪವಾರ್ ನಡುವಿನ ಸಭೆ ಸುಮಾರು ಒಂದೂವರೆ ಗಂಟೆಗಳ ಕಾಲ ನಡೆಯಿತು.

ಇದಕ್ಕೂ ಮುನ್ನ ಶರದ್ ಪವಾರ್ ಮತ್ತು ಪ್ರಶಾಂತ್ ಕಿಶೋರ್ ಅವರು ಜೂನ್ 11 ರಂದು ಮುಂಬೈನಲ್ಲಿ ಸುಮಾರು ಮೂರು ಗಂಟೆಗಳ ಕಾಲ ಭೇಟಿಯಾದರು.

ಇದನ್ನೂ ಓದಿ:ಮೂರು ತಾಸು ಸಭೆ ನಡೆಸಿದ ಪ್ರಶಾಂತ್​ ಕಿಶೋರ್​-ಮಮತಾ ಬ್ಯಾನರ್ಜಿ; ಪಶ್ಚಿಮ ಬಂಗಾಳ ರಾಜಕಾರಣದತ್ತ ಕುತೂಹಲ

(Poll strategist Prashant Kishor met Congress leader Rahul Gandhi in Delhi)

Published On - 5:05 pm, Tue, 13 July 21

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ