ತ್ರಿಪುರಾದಲ್ಲಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ತಂಡಕ್ಕೆ ಗೃಹಬಂಧನ; ಆರೋಪ ನಿರಾಕರಿಸಿದ ಪೊಲೀಸ್

Prashant Kishor: ತೃಣಮೂಲ ಕಾಂಗ್ರೆಸ್ಸಿನ ರಾಜಕೀಯ ಪರಿಸ್ಥಿತಿ ಮತ್ತು ಸಂಭಾವ್ಯ ಬೆಂಬಲ ನೆಲೆಯನ್ನು ನಿರ್ಣಯಿಸಲು ಐಪಿಎಸಿಯ 22  ನೌಕರರು ಅಗರ್ತಲಾದಲ್ಲಿದ್ದರು. ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ 2023 ರಲ್ಲಿ ಚುನಾವಣೆ ನಡೆಯಲಿದೆ.

ತ್ರಿಪುರಾದಲ್ಲಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ತಂಡಕ್ಕೆ ಗೃಹಬಂಧನ; ಆರೋಪ ನಿರಾಕರಿಸಿದ ಪೊಲೀಸ್
ಪ್ರಶಾಂತ್ ಕಿಶೋರ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 26, 2021 | 7:21 PM

ಅಗರ್ತಲಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಐಪಿಎಸಿ IPAC (ಭಾರತೀಯ ರಾಜಕೀಯ ಕ್ರಿಯಾ ಸಮಿತಿ) ಯ ತಂಡವನ್ನು ತ್ರಿಪುರಾದಲ್ಲಿ  ಗೃಹ ಬಂಧನದಲ್ಲಿಡಲಾಗಿದೆ ಎಂದು ಆರೋಪಿಸಲಾಗಿದೆ. ಅಲ್ಲಿ ಅವರು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯ  ಚಟುವಟಿಕೆಗಳಿಗಾಗಿ ಹೋಗಿದ್ದರು. ತ್ರಿಪುರ ಪೊಲೀಸರು ಬೆಳಿಗ್ಗೆಯಿಂದ ಹೋಟೆಲ್ ಲಾಬಿಯಲ್ಲಿ ಕ್ಯಾಂಪಿಂಗ್ ಮಾಡುತ್ತಿದ್ದಾರೆ ಮತ್ತು ಅವರಿಗೆ ಆವರಣದಿಂದ ಹೊರಹೋಗಲು ಅವಕಾಶ ನೀಡುತ್ತಿಲ್ಲ ಎಂದು ಐಪಿಎಸಿ ಮೂಲಗಳು ತಿಳಿಸಿರುವುದಾಗಿ ಎನ್​ಡಿಟಿವಿ  ವರದಿಮಾಡಿದೆ.

ತೃಣಮೂಲ ಕಾಂಗ್ರೆಸ್ಸಿನ ರಾಜಕೀಯ ಪರಿಸ್ಥಿತಿ ಮತ್ತು ಸಂಭಾವ್ಯ ಬೆಂಬಲ ನೆಲೆಯನ್ನು ನಿರ್ಣಯಿಸಲು ಐಪಿಎಸಿಯ 22  ನೌಕರರು ಅಗರ್ತಲಾದಲ್ಲಿದ್ದರು. ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ 2023 ರಲ್ಲಿ ಚುನಾವಣೆ ನಡೆಯಲಿದೆ.

ತೃಣಮೂಲ ಕಾಂಗ್ರೆಸ್ ಮುಖಂಡ ಮತ್ತು ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಈ ಬಗ್ಗೆ ಟ್ವೀಟ್ ಮಾಡಿದ್ದು, ತೃಣಮೂಲ ಕಾಂಗ್ರೆಸ್ ಅಲ್ಲಿಗೆ  ಕಾಲಿಡುವ ಮುನ್ನವೇ ತ್ರಿಪುರಾ ಬಿಜೆಪಿಗೆ ಭಯ ಶುರುವಾಗಿದೆ ಎಂಬುದಕ್ಕೆ ಇದೇ ಸ್ಪಷ್ಟ ಸಾಕ್ಷಿ. ಬಂಗಾಳದಲ್ಲಿ  ನಮ್ಮ ಗೆಲುವಿನಿಂದ ಅವರು ತುಂಬಾ ಗಲಿಬಿಲಿಗೊಂಡಿದ್ದಾರೆ, ಅವರು ಈಗ 23 ಐಪಿಎಸಿ ಉದ್ಯೋಗಿಗಳನ್ನು ಗೃಹಬಂಧನದಲ್ಲಿರಿಸಿದ್ದಾರೆ. ಬಿಜೆಪಿ ದುರಾಡಳಿತದಲ್ಲಿ ದೇಶದಲ್ಲಿನ ಪ್ರಜಾಪ್ರಭುತ್ವ ಸಾವಿರ ಬಾರಿ ಸಾಯುತ್ತದೆ ಎಂದಿದ್ದಾರೆ.

ಇಂದು ಬೆಳಿಗ್ಗೆ, ಅವರು ಕೊವಿಡ್ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆಂದು ಪೊಲೀಸರು ತಮ್ಮ ಹೋಟೆಲ್‌ನಿಂದ ಹೊರಹೋಗದಂತೆ ತಂಡವನ್ನು ನಿಲ್ಲಿಸಿದ್ದಾರೆ ಎಂದು ಆರೋಪಿಸಲಾಗಿದೆ. ತಂಡವು ಅಗತ್ಯವಿರುವ ಎಲ್ಲಾ ಕೋವಿಡ್ ಸಂಬಂಧಿತ ಪತ್ರಿಕೆಗಳನ್ನು ಹೊಂದಿದೆ ಎಂದು ಐಪಿಎಸಿ ಮೂಲಗಳು ತಿಳಿಸಿವೆ.

ಹೋಟೆಲ್‌ನಲ್ಲಿ ತಂಡವನ್ನು ಪ್ರಶ್ನಿಸುವುದು ವಾಡಿಕೆಯ ತಪಾಸಣೆಯ ಭಾಗವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಹೊರಗಿನವರು – ಸುಮಾರು 22 ಜನರು-ವಿವಿಧ ಸ್ಥಳಗಳಲ್ಲಿ ಸುತ್ತಾಡುತ್ತಿದ್ದರು. ಕೊವಿಡ್ ನಿರ್ಬಂಧಗಳು ಜಾರಿಯಲ್ಲಿರುವುದರಿಂದ, ಅವರ ಆಗಮನದ ಹಿಂದಿನ ಕಾರಣಗಳನ್ನು ಪರಿಶೀಲಿಸಲು ಮತ್ತು ನಗರದಲ್ಲಿ ಉಳಿದುಕೊಳ್ಳುವ ಬಗ್ಗೆ ನಾವು ವಿಚಾರಿಸುತ್ತಿದ್ದೇವೆ. ಅವರೆಲ್ಲರೂ ಸೋಮವಾರ ಕೊವಿಡ್ ಪರೀಕ್ಷೆಗಳಿಗೆ ಒಳಗಾಗಿದ್ದು , ವರದಿಗಳು ಕಾಯುತ್ತಿದ್ದರು ಎಂದು ಪಶ್ಚಿಮ ತ್ರಿಪುರದ ಪೊಲೀಸ್ ವರಿಷ್ಠಾಧಿಕಾರಿ ಮಾಣಿಕ್ ದಾಸ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಬಿ ಎಸ್ ಯಡಿಯೂರಪ್ಪ ಬಾಯಿಂದಲೇ ಮುಂದಿನ ಸಿಎಂ ಹೆಸರು ಘೋಷಿಸಲು ಯೋಚಿಸುತ್ತಿದೆ ಬಿಜೆಪಿ ಹೈಕಮಾಂಡ್

ಇದನ್ನೂ ಓದಿ: BS Yediyurappa: ಯಡಿಯೂರಪ್ಪಗೆ ಬ್ಲ್ಯಾಕ್​​ಮೇಲ್ ಮಾಡಲಾಗಿದೆ; ಸ್ವಾಮೀಜಿಗಳಿಂದ ಬಿಜೆಪಿ ವಿರುದ್ಧ ಆರೋಪ

(Poll strategist Prashant Kishor’s IPAC team allegedly been detained in Tripura Police Deny Charge)

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?