UP Assembly Election 2022: ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಪ್ರಾರಂಭ; ಮುಂಜಾನೆಯಿಂದಲೇ ಮತಗಟ್ಟೆಗೆ ಜನರ ಆಗಮನ

ಉತ್ತರ ಪ್ರದೇಶದಲ್ಲಿ ಮತದಾನ ಶುರುವಾಗುವುದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿ, ಮತದಾರರನ್ನು ಹುರಿದುಂಬಿಸಿದ್ದಾರೆ. ಮೊದಲು ಮತದಾನ ಮಾಡಿ, ನಂತರ ಉಪಾಹಾರ ಮಾಡಿ ಎಂದು ಹೇಳಿರುವ ಅವರು, ಕೊವಿಡ್​ 19 ನಿಯಮ ಪಾಲನೆಗೆ ಕರೆಕೊಟ್ಟಿದ್ದಾರೆ.

UP Assembly Election 2022: ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಪ್ರಾರಂಭ; ಮುಂಜಾನೆಯಿಂದಲೇ ಮತಗಟ್ಟೆಗೆ ಜನರ ಆಗಮನ
ಉತ್ತರ ಪ್ರದೇಶದ ಕೈರಾನಾದಲ್ಲಿ ಮತದಾನ
Follow us
TV9 Web
| Updated By: Lakshmi Hegde

Updated on:Feb 10, 2022 | 8:03 AM

ಉತ್ತರಪ್ರದೇಶದಲ್ಲಿ ಮೊದಲ ಹಂತದ ಮತದಾನ (Voting Begins In Uttar Pradesh) ಈಗಾಗಲೇ ಪ್ರಾರಂಭವಾಗಿದೆ. ಬೆಳಗ್ಗೆ 6.30ರಿಂದಲೇ ಮತಗಟ್ಟೆಗಳಿಗೆ ಜನರು ಬರಲು ಪ್ರಾರಂಭಿಸಿದ್ದಾರೆ. ಇಂದು 11 ಜಿಲ್ಲೆಗಳ 58 ವಿಧಾನಸಭೆ ಕ್ಷೇತ್ರಗಳಲ್ಲಿ (Assembly Constituencies) ಮತದಾನ ನಡೆಯಲಿದ್ದು, ಒಟ್ಟು 623 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಹಂತದಲ್ಲಿ ಸುಮಾರು 2.27 ಕೋಟಿ ಅರ್ಹ ಮತದಾರರು ಮತದಾನ ಮಾಡಲಿದ್ದಾರೆ. ಇಂದು ರಾಜ್ಯದ ಪಶ್ಚಿಮ ಜಿಲ್ಲೆಗಳ ವಿಧಾನಸಭೆ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ. ಈ ಭಾಗದ ಹಲವು ಕ್ಷೇತ್ರಗಳು ಜಾಟ್​ ಸಮುದಾಯದ ಪ್ರಾಬಲ್ಯ ಇರುವ ಸ್ಥಳಗಳು.  ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳನ್ನು ತೀವ್ರವಾಗಿ ಖಂಡಿಸಿ, ಹೋರಾಟದ ಮಾಡಿದವರೇ ಈ ಭಾಗದಲ್ಲಿ ಹೆಚ್ಚಿನ ಜನರು ಇದ್ದಾರೆ.  ಈ ಹಂತದಲ್ಲಿ ಸದ್ಯ ಬಿಜೆಪಿ ಸರ್ಕಾರದಲ್ಲಿರುವ 9 ಸಚಿವರು ಚುನಾವಣೆ ಎದುರಿಸುತ್ತಿದ್ದಾರೆ. ಒಟ್ಟಾರೆ 403 ಕ್ಷೇತ್ರಗಳಿಗೆ ಏಳು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್​ 10ರಂದು ಮತ ಎಣಿಕೆ ನಡೆಯಲಿದೆ. 

ಪ್ರಧಾನಿ ಮೋದಿ ಟ್ವೀಟ್​: ಉತ್ತರ ಪ್ರದೇಶದಲ್ಲಿ ಮತದಾನ ಶುರುವಾಗುವುದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿ, ಮತದಾರರನ್ನು ಹುರಿದುಂಬಿಸಿದ್ದಾರೆ. ಇಂದು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ. ಎಲ್ಲರೂ ಕೊವಿಡ್​ 19 ನಿಯಮಗಳನ್ನು ಪಾಲಿಸಬೇಕು. ಪ್ರಜಾಪ್ರಭುತ್ವದ ಪವಿತ್ರ ಹಬ್ಬದಲ್ಲಿ ಉತ್ಸಾಹದಿಂದ ಭಾಗವಹಿಸಬೇಕು. ಮೊದಲು ಮತದಾನ ಮಾಡಿ, ನಂತರ ಉಪಾಹಾರ ಮಾಡಿ ಎಂದು ಹೇಳಿದ್ದಾರೆ.

ಇನ್ನು ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿರುವ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲೂ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಆಗ್ರಾ ಎಸ್​ಪಿ ವಿಕಾಸ್​ ಕುಮಾರ್​, ಮುಂಜಾನೆಯಿಂದಲೂ ಪೊಲೀಸರು ಮತ್ತು ಸ್ಥಳೀಯ ಆಡಳಿತ ಅಧಿಕಾರಿಗಳು ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ. ಮತದಾನ ನಡೆಯುತ್ತಿರುವ ಎಲ್ಲ ಕ್ಷೇತ್ರಗಳನ್ನೂ ಪರಿಶೀಲಿಸಲಾಗಿದ್ದು, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೇಂದ್ರ ಸಶಸ್ತ್ರ ಪಡೆಯ 129 ಕಂಪನಿಗಳನ್ನು ನಿಯೋಜಿಸಲಾಗಿದ್ದು, ಸಿವಿಲ್​ ಪೊಲೀಸ್​, ಹೋಂ ಗಾರ್ಡ್​ಗಳನ್ನೂ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಾಪುರ್​, ಕೈರಾನಾ ಸೇರಿ ಹಲವು ಕ್ಷೇತ್ರಗಳಲ್ಲಿ ಬೆಳಗ್ಗೆಯಿಂದಲೇ ಜನರು ಕ್ಯೂ ನಿಂತಿದ್ದಾರೆ. ಉತ್ತರ ಪ್ರದೇಶ ಸಚಿವ ಅತುಲ್ ಗಾರ್ಗ್, ಗಾಜಿಯಾಬಾದ್‌ನ ಕವಿ ನಗರದ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ. ಹಾಗೇ ಮತಗಟ್ಟೆ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆಗ್ರಾ ಗ್ರಾಮಾಂತರ ವಿಭಾಗದ ಬಿಜೆಪಿ ಅಭ್ಯರ್ಥಿ ಬೇಬಿ ರಾಣಿ ಮೌರ್ಯಾ, ಈ ಬಾರಿಯೂ ಉತ್ತರಪ್ರದೇಶದಲ್ಲಿ ಜನರು ಬಿಜೆಪಿ ಪರ ಮತ ಚಲಾಯಿಸುತ್ತಾರೆಂಬ ನಂಬಿಕೆಯಿದೆ ಎಂದಿದ್ದಾರೆ.

ಇದನ್ನೂ ಓದಿ: Skin Care: ತ್ವಚೆಯ ಟ್ಯಾನ್ ಸಮಸ್ಯೆಯಿಂದ ಪರಿಹಾರ ಬೇಕೇ? ಇಲ್ಲಿದೆ ಸರಳ ಮಾರ್ಗ ಪರಿಶೀಲಿಸಿ

Published On - 7:45 am, Thu, 10 February 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ