AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಂಚ್ ಭಯೋತ್ಪಾದನಾ ದಾಳಿ ಪ್ರಕರಣ: ವಿಚಾರಣೆಗೆ ಹೆದರಿ ವಿಷ ಸೇವಿಸಿ ವ್ಯಕ್ತಿ ಸಾವು

ಪೂಂಚ್ ಭಯೋತ್ಪಾದನಾ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆಗೆ ಎಂದು ಕರೆದ 35 ವರ್ಷದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೂಂಚ್ ಭಯೋತ್ಪಾದನಾ ದಾಳಿ ಪ್ರಕರಣ: ವಿಚಾರಣೆಗೆ ಹೆದರಿ ವಿಷ ಸೇವಿಸಿ ವ್ಯಕ್ತಿ ಸಾವು
ಪೂಂಚ್ ಭಯೋತ್ಪಾದನಾ ದಾಳಿ
ಅಕ್ಷಯ್​ ಪಲ್ಲಮಜಲು​​
|

Updated on: Apr 27, 2023 | 4:13 PM

Share

ಪೂಂಚ್/ಜಮ್ಮು: ಪೂಂಚ್ ಭಯೋತ್ಪಾದನಾ ದಾಳಿ ಪ್ರಕರಣಕ್ಕೆ (Poonch terror attack case)  ಸಂಬಂಧಿಸಿದಂತೆ ಪೊಲೀಸರು ವಿಚಾರಣೆಗೆ ಎಂದು ಕರೆದ 35 ವರ್ಷದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಿಲ್ಲೆಯ ಮೆಂಧರ್ ತಹಸಿಲ್‌ನ ನಾರ್ ಗ್ರಾಮದ ನಿವಾಸಿ ಮುಖ್ತಾರ್ ಹುಸೇನ್ ಷಾ ಅವರು ಕೆಲವು ಕೌಟುಂಬಿಕ ಸಮಸ್ಯೆಗಳನ್ನು ಎದುರಿಸುತ್ತಿರುವುದರಿಂದ ಹಂತಕಗೊಂಡಿದ್ದಾರೆ. ಜತೆಗೆ ಅವರನ್ನು ಈ ಪ್ರಕರಣದಲ್ಲಿ ಶಂಕಿತ ಎಂದು ಕರೆದಿಲ್ಲ, ನಮಗೆ ಕೆಲವೊಂದು ಮಾಹಿತಿಗಳು ಬೇಕಿತ್ತು ಎಂದು ಹೇಳಿದ್ದಾರೆ. ಮುಖ್ತಾರ್ ಹುಸೇನ್ ಷಾ ಮಂಗಳವಾರ ಸಂಜೆ ಮನೆಯಲ್ಲಿ ವಿಷ ಸೇವಿಸಿದ್ದಾರೆ ಎನ್ನಲಾಗಿದೆ. ತಕ್ಷಣ ಅವರನ್ನು ಸ್ಥಳೀಯ ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಿಸದೆ ಇಂದು (ಏ.27) ಬೆಳಿಗ್ಗೆ ನಿಧನರಾದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಭಟ ಧುರಿಯನ್ ಅರಣ್ಯದಲ್ಲಿ ಭಯೋತ್ಪಾದಕರು ಏಪ್ರಿಲ್ 20 ರಂದು ಐವರು ಸೈನಿಕರನ್ನು ಹತ್ಯೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ವಿಚಾರಣೆಗೆ ಮಾಡುವಂತೆ ಕೇಳಿದ ಕೆಲವೇ ಗಂಟೆಗಳ ನಂತರ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಶಂಕಿತರು ನಡೆಸಿದ (ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ) ದಾಳಿಯ ಬಗ್ಗೆ ಹೆಚ್ಚಿನ ವರದಿ ನೀಡಲು ಅಧಿಕಾರಿಗಳು ದಾಳಿ ನಡೆದ ಸ್ಥಳದಲ್ಲಿರುವ ಹಳ್ಳಿಯ ನಿವಾಸಿಗಳನ್ನು ವಿಚಾರಣೆಗೆ ಕರೆಯಲಾಗಿತ್ತು. ಅದರಲ್ಲಿ ಮುಖ್ತಾರ್ ಹುಸೇನ್ ಷಾ ಕೂಡ ಒಬ್ಬರು ಎಂದು ಹೇಳಲಾಗಿತ್ತು. ಮುಖ್ತಾರ್ ಹುಸೇನ್ ಷಾ ಅವರಿಗೆ ಕೌಟುಂಬಿಕ ಸಮಸ್ಯೆಗಳು ಇತ್ತು ಮತ್ತು ಈ ವಿಚಾರವಾಗಿ ಅವರು ತುಂಬಾ ಗೊಂದಲಕ್ಕೊಳಗಾಗಿದ್ದಾರೆ ಎಂದು ಅಧಿಕಾರಿ ಹೇಳಿದರು. ಎಂದರು.

ಇದನ್ನೂ ಓದಿ:ಪೂಂಚ್‌ನಲ್ಲಿ ಉಗ್ರರ ದಾಳಿಗೊಳಗಾದ ಸೇನಾ ಟ್ರಕ್ ಇಫ್ತಾರ್​​ಗಾಗಿ ಹಣ್ಣುಗಳನ್ನು ಸಾಗಿಸುತ್ತಿತ್ತು; ಈದ್ ಆಚರಿಸುವುದಿಲ್ಲ ಎಂದ ಗ್ರಾಮ

ಭಟಾ ಧುರಿಯನ್‌ನಲ್ಲಿ ನಡೆದ ದಾಳಿಯ ನಂತರ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು 60 ಕ್ಕೂ ಹೆಚ್ಚು ಜನರನ್ನು ಬಂಧಿಸಿವೆ, ಈ ಪ್ರದೇಶದಲ್ಲಿರುವ ದಟ್ಟವಾದ ಅರಣ್ಯ ಪ್ರದೇಶ ಮತ್ತು ನೈಸರ್ಗಿಕ ಗುಹೆಗಳಿಂದಾಗಿ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಭಯೋತ್ಪಾದಕರ ಬಂದಿದ್ದಾರೆ ಎಂದು ಹೇಳಲಾಗಿದೆ. ಎರಡು ತಿಂಗಳಿನಿಂದ ಭಯೋತ್ಪಾದಕರಿಗೆ ಲಾಜಿಸ್ಟಿಕ್ ಬೆಂಬಲವನ್ನು ನೀಡಲಾಗುತ್ತಿತ್ತು ಎಂದು ಶಂಕಿತನೊಬ್ಬ ಹೇಳಿದ್ದಾನೆ. ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತದೆ ಎಂದು ಅಧಿಕಾರಿ ಹೇಳಿದರು. ಭದ್ರತಾ ಪಡೆಗಳ ಶೋಧ ಕಾರ್ಯಚರಣೆ ಎಂಟನೇ ದಿನ ಕಾಲಿಟ್ಟಿದೆ. ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಡ್ರೋನ್‌ಗಳು, ಸ್ನಿಫರ್ ಡಾಗ್‌ಗಳು ಮತ್ತು ಲೋಹ ಶೋಧಕಗಳನ್ನು ಬಳಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ಗುಂಪುಗಳಲ್ಲಿ ಏಳರಿಂದ ಎಂಟು ಭಯೋತ್ಪಾದಕರು ದಾಳಿಯನ್ನು ನಡೆಸಿದ್ದಾರೆ ಎಂದು ಮೂಲಗಳು ಈ ಹಿಂದೆ ತಿಳಿಸಿದ್ದವು. ರಾಷ್ಟ್ರೀಯ ರೈಫಲ್ಸ್ ಆಯೋಜಿಸಲಿರುವ ಇಫ್ತಾರ್ ಕೂಟಕ್ಕೆ ಭಿಂಬರ್ ಗಲಿ ಶಿಬಿರದಿಂದ ಸಂಗಿಯೋಟೆ ಗ್ರಾಮಕ್ಕೆ ಹಣ್ಣು, ತರಕಾರಿ ಮತ್ತು ಇತರ ವಸ್ತುಗಳನ್ನು ಸಾಗಿಸುತ್ತಿದ್ದ ಟ್ರಕ್‌ನ ಮೇಲೆ ಉಗ್ರರು ದಾಳಿ ನಡೆಸಿ ಅಲ್ಲಿಂದ ರಸ್ತೆಯ ಮೋರಿಯ ಕೆಳಗೆ ಅಡಗಿಕೊಂಡಿದ್ದರು ಎಂದು ವರದಿಯಲ್ಲಿ ತಿಳಿಸಲಾಗಿತ್ತು. ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾದ ಯೋಧರು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗೆ ನಿಯೋಜಿಸಲಾದ ರಾಷ್ಟ್ರೀಯ ರೈಫಲ್ಸ್ ಘಟಕದವರು ಎಂದು ಹೇಳಲಾಗಿದೆ. ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೇರಿದಂತೆ ವಿವಿಧ ಏಜೆನ್ಸಿಗಳ ತಜ್ಞರು ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್