ದೆಹಲಿಯಲ್ಲಿ ಮತ್ತಷ್ಟು ಹೆಚ್ಚಿದ ವಾಯುಮಾಲಿನ್ಯ: ಮತ್ತೆ GRAP III ಅಡಿಯಲ್ಲಿ ನಿರ್ಬಂಧ

ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯು ಗುಣಮಟ್ಟ ಕಳಪೆಯಾಗುತ್ತಿದೆ. ಕೆಲವು ದಿನಗಳಿಂದ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕವು ಅತ್ಯಂತ ಕಳಪೆಯಾಗಿದ್ದು, ಇದೀಗ ದೇಹಲಿಯ ಸಚಿವರು ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಹತ್ವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ದೆಹಲಿಯಲ್ಲಿ ಮತ್ತಷ್ಟು ಹೆಚ್ಚಿದ ವಾಯುಮಾಲಿನ್ಯ: ಮತ್ತೆ GRAP III ಅಡಿಯಲ್ಲಿ ನಿರ್ಬಂಧ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Dec 23, 2023 | 1:22 PM

ದೆಹಲಿ, ಡಿ23: ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚುತ್ತಿದೆ. ಕೆಲವು ದಿನಗಳಿಂದ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕವು ಅತ್ಯಂತ ಕಳಪೆಯಾಗಿದ್ದು, ಇದೀಗ ದೇಹಲಿಯ ಸಚಿವರು ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಹತ್ವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ದೆಹಲಿಯಲ್ಲಿನ ಗಾಳಿಯ ಗುಣಮಟ್ಟವು ತೀವ್ರವಾಗಿ ಹದಗೆಟ್ಟಿದೆ ಮತ್ತು AQI (ವಾಯು ಗುಣಮಟ್ಟ ಸೂಚ್ಯಂಕ) 400ಕ್ಕೆ ಕುಸಿದಿದ್ದು, ತಾಪಮಾನದಲ್ಲಿಯು ಏರಿಳಿತಗಳು ಕಂಡು ಬಂದಿದೆ. ಈ ಕಾರಣದಿಂದಾಗಿ, CAQM (ವಾಯು ಗುಣಮಟ್ಟ ನಿರ್ವಹಣೆಗಾಗಿ ಆಯೋಗ) ಮತ್ತೊಮ್ಮೆ GRAP III (ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ) ಅಡಿಯಲ್ಲಿ ನಿರ್ಬಂಧಗಳನ್ನು ಜಾರಿಗೆ ತಂದಿದೆ ಎಂದು ಸಚಿವ ಗೋಪಾಲ್ ರೈ ಹೇಳಿದ್ದಾರೆ.

ಶೂನ್ಯ ಮತ್ತು 50ರ ನಡುವಿನ ವಾಯು ಗುಣಮಟ್ಟ ಸೂಚ್ಯಂಕವನ್ನು (AQI) ‘ಉತ್ತಮ’, 51 ಮತ್ತು 100 ‘ತೃಪ್ತಿದಾಯಕ’, 101 ಮತ್ತು 200 ‘ಮಧ್ಯಮ’, 201 ಮತ್ತು 300 ‘ಕಳಪೆ’, 301 ಮತ್ತು 400 ‘ಅತ್ಯಂತ ಕಳಪೆ’, 401 ಮತ್ತು 450 ಎಂದು ಪರಿಗಣಿಸಲಾಗುತ್ತದೆ. ಇದೀಗ ತೀವ್ರ’ ಮತ್ತು 450 ಕ್ಕಿಂತ ಹೆಚ್ಚು ವಾಯುಮಾಲಿನ್ಯವನ್ನು ಹೊಂದಿದೆ. ಈ ಕಾರಣಕ್ಕೆ ವಾಯುಮಾಲಿನ್ಯ ಹೊಂದಿರುವ ಪ್ರದೇಶಗಳಲ್ಲಿ ನಿರ್ಮಾಣ ಕಾರ್ಯ ಮತ್ತು BS-III ಪೆಟ್ರೋಲ್ ಮತ್ತು BS-IV ಡೀಸೆಲ್ ನಾಲ್ಕು ಚಕ್ರಗಳ ವಾಹನಗಳ ಓಡಾಟವನ್ನು ನಿಷೇಧಿಸಲಾಗಿದೆ.

ದೆಹಲಿಯಲ್ಲಿ ಮಂಜು ಮತ್ತು ಗಾಳಿಯ ವೇಗ ಕಡಿಮೆಯಾಗಿರುವ ಕಾರಣ ವಾಯುಮಾಲಿನ್ಯ ಹಠಾತ್ ಏರಿಕೆಗೆ ಕಾರಣವಾಗಿದೆ. ವಾಯುಮಾಲಿನ್ಯ ಮತ್ತು ವಾಯು ಗುಣಮಟ್ಟ ಕಳಪೆ ಇರುವ ಪ್ರದೇಶದಲ್ಲಿ ಕಾನೂನುಬದ್ಧ ಕ್ರಮಗಳನ್ನು ತರಲಾಗುವುದು ಎಂದು CAQM ಹೇಳಿದೆ.

ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಯ ಹಂತ-III ಅಡಿಯಲ್ಲಿ ಹಲವು ನಿರ್ಬಂಧಗಳನ್ನು ತರಲಾಗುವುದು. ದೆಹಲಿ-ಎನ್‌ಸಿಆರ್‌ನಲ್ಲಿ ಅನಿವಾರ್ಯವಲ್ಲದ ನಿರ್ಮಾಣ ಕಾರ್ಯ, ಕಲ್ಲು ಪುಡಿಮಾಡುವಿಕೆ ಮತ್ತು ಗಣಿಗಾರಿಕೆಯನ್ನು ನಿಷೇಧಿಸಲು ಆದೇಶ ನೀಡಲಾಗಿದೆ. GRAP ಹಂತ-III ಅಡಿಯಲ್ಲಿ, ದೆಹಲಿ, ಗುರುಗ್ರಾಮ್, ಫರಿದಾಬಾದ್, ಗಾಜಿಯಾಬಾದ್ ಮತ್ತು ಗೌತಮ್ ಬುಧ್ ನಗರದಲ್ಲಿ BS-III ಪೆಟ್ರೋಲ್ ಮತ್ತು BS-IV ಡೀಸೆಲ್ ನಾಲ್ಕು-ಚಕ್ರಗಳ ವಾಹನಗಳ ಓಡಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಇದನ್ನೂ ಓದಿ: ವಾಯುಮಾಲಿನ್ಯದ ಎಫೆಕ್ಟ್​; ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸುವ 4 ಆಹಾರಗಳಿವು

ನಗರವು 9.6 ಡಿಗ್ರಿ ಸೆಲ್ಸಿಯಸ್‌ನ ಕನಿಷ್ಠ ತಾಪಮಾನವನ್ನು ಹೊಂದಿದೆ. ಇದು ಈ ಕಾಲದಲ್ಲಿ ಉಂಟಾಗುವ ತಾಪಮಾನಕ್ಕಿಂತ ಹೆಚ್ಚಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಹಗಲಿನಲ್ಲಿ ಸಾಧಾರಣ ಮಂಜು ಇರುತ್ತದೆ. ಹಾಗೂ ಗರಿಷ್ಠ ತಾಪಮಾನವು ಸುಮಾರು 23 ಡಿಗ್ರಿ ಸೆಲ್ಸಿಯಸ್‌ನಲ್ಲಿರುವ ಸಾಧ್ಯತೆಗಳು ಇದೆ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:39 pm, Sat, 23 December 23

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು