ಅಸ್ಸಾಂ ಚಹಾ ಜಗತ್ತಿನಲ್ಲಿ ಜನಪ್ರಿಯ: ಬೃಹತ್ ಚಹಾ ತೋಟಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿ ಅವರು ಇಂದು ಅಸ್ಸಾಂನಲ್ಲಿ 18 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದರ ಜತೆಗೆ ಅಸ್ಸಾಂನ ಬೃಹತ್ ಚಾಹ ತೋಟಕ್ಕೂ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಅಸ್ಸಾಂ ಪ್ರವಾಸದಲ್ಲಿದ್ದು, ಅಲ್ಲಿ ಬೃಹತ್ ಕಾಫಿ ತೋಟಕ್ಕೆ ಭೇಟಿ ನೀಡಿ, ಕಾರ್ಮಿಕ ಶ್ರಮವನ್ನು ಶ್ಲಾಘಿಸಿದ್ದಾರೆ. ಅಸ್ಸಾಂ ತನ್ನ ಭವ್ಯವಾದ ಚಹಾ ತೋಟಗಳಿಗೆ ಹೆಸರುವಾಸಿಯಾಗಿದೆ ಮತ್ತು ಅಸ್ಸಾಂ ಚಹಾವು ಪ್ರಪಂಚದಾದ್ಯಂತ ದೊಡ್ಡ ಹೆಸರನ್ನು ಮಾಡಿಕೊಂಡಿದೆ. ಅಲ್ಲಿನ ಜನರ ಶ್ರಮವನ್ನು ಹಾಗೂ ಪ್ರಪಂಚದಾದ್ಯಂತ ಅಸ್ಸಾಂನ ಪ್ರತಿಷ್ಠೆಯನ್ನು ಹೆಚ್ಚಿಸುವ ಚಹಾ ತೋಟದ ತಂಡವನ್ನು ಶ್ಲಾಘಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ಪ್ರವಾಸಿಗರು ಅಸ್ಸಾಂಗೆ ಭೇಟಿ ನೀಡಿದಾಗ ಖಂಡಿತ ಈ ಚಹಾ ತೋಟಕ್ಕೆ ಭೇಟಿ ನೀಡಲೇಬೇಕು ಎಂದು ಹೇಳಿದ್ದಾರೆ. ಇದರ ಜತೆಗೆ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಅಸ್ಸಾಂನ ಹೃದಯಭಾಗದಲ್ಲಿರುವ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿದರು.
Assam is known for its splendid tea gardens, and Assam Tea has made its way all over the world.
I would like to laud the remarkable tea garden community, which is working hard and enhancing Assam’s prestige all over the world.
I also urge tourists to visit these tea gardens… pic.twitter.com/lCMSyQCPZg
— Narendra Modi (@narendramodi) March 9, 2024
ತಮ್ಮ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಅವರು ವಿವಿಧ ಅಧಿಕಾರಿಗಳು ಮತ್ತು ವನ್ಯಜೀವಿ ಪಾಲಕರೊಂದಿಗೆ ಸಂವಾದ ನಡೆಸಿದರು, ಜತೆಗೆ ಪರಿಸರ ಸಂರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿದರು. ಹಾಗೂ ಇಂದು ಬೆಳಗ್ಗೆ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಜಂಗಲ್ ಸಫಾರಿ ಮಾಡಿದರು. ಆನೆಯ ಮೇಲೆ ಸವಾರಿ ಮಾಡುತ್ತಾ ಸೂರ್ಯೋದಯದ ಸುಂದರ ದೃಶ್ಯವನ್ನೂ ವೀಕ್ಷಣೆ ಮಾಡಿದರು.
ಇದನ್ನೂ ಓದಿ: ವಿಶ್ವದ ಅತಿ ಉದ್ದದ ಸೆಲಾ ಪಾಸ್ ಸುರಂಗ ಮಾರ್ಗ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ; ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ
ಪ್ರಧಾನಿ ಮೋದಿ ಇಂದು ಅಸ್ಸಾಂನಲ್ಲಿ 18 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಹಾನ್ ಅಹೋಮ್ ಕಮಾಂಡರ್ ಲಚಿತ್ ಬೊರ್ಫುಕನ್ ಅವರ 125 ಅಡಿ ಎತ್ತರದ ಪ್ರತಿಮೆಯನ್ನು ಸಹ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 3:22 pm, Sat, 9 March 24