Population Control Bill: ಏನಿದು ಜನಸಂಖ್ಯೆ ನಿಯಂತ್ರಣ ಮಸೂದೆ?; 2 ಮಕ್ಕಳ ನೀತಿಯಿಂದ ಭಾರತದಲ್ಲಾಗುವ ಬದಲಾವಣೆಗಳೇನು?

ಜನಸಂಖ್ಯಾ ನಿಯಂತ್ರಣ ಮಸೂದೆ ಜಾರಿಗೆ ಬಂದರೆ ಎರಡಕ್ಕಿಂತ ಹೆಚ್ಚು ಮಕ್ಕಳಿರುವ ದಂಪತಿ ಸರ್ಕಾರಿ ಉದ್ಯೋಗಗಳು ಮತ್ತು ಸರ್ಕಾರವು ಒದಗಿಸುವ ವಿವಿಧ ಸೌಲಭ್ಯಗಳ ಮೇಲಿನ ಸಬ್ಸಿಡಿಗಳಿಗೆ ಅನರ್ಹರಾಗುತ್ತಾರೆ.

Population Control Bill: ಏನಿದು ಜನಸಂಖ್ಯೆ ನಿಯಂತ್ರಣ ಮಸೂದೆ?; 2 ಮಕ್ಕಳ ನೀತಿಯಿಂದ ಭಾರತದಲ್ಲಾಗುವ ಬದಲಾವಣೆಗಳೇನು?
ಸಾಂದರ್ಭಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Jul 29, 2022 | 11:32 AM

ನವದೆಹಲಿ: ಲೋಕಸಭೆಯಲ್ಲಿ ಜನಸಂಖ್ಯಾ ನಿಯಂತ್ರಣ ಮಸೂದೆ (Population Control Bill) ಮಂಡನೆಯ ಪ್ರಸ್ತಾಪವಾಗುವ ಮೂಲಕ ಭಾರತದಲ್ಲಿ ಜನಸಂಖ್ಯೆ ಹೆಚ್ಚಳದ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಈ ಜನಸಂಖ್ಯಾ ನಿಯಂತ್ರಣ ಮಸೂದೆಯು ದಂಪತಿಗಳು ಎರಡಕ್ಕಿಂತ ಹೆಚ್ಚು ಮಕ್ಕಳಿಗೆ ಜನ್ಮ ನೀಡುವುದನ್ನು ತಡೆಯುವ ಬಗ್ಗೆ ಪ್ರಸ್ತಾಪಿಸುತ್ತದೆ. ಯಾವುದೇ ದಂಪತಿಗಳು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ವಿವಿಧ ಸೌಲಭ್ಯಗಳ ಮೇಲಿನ ಸಬ್ಸಿಡಿಗಳನ್ನು ನಿಲ್ಲಿಸಲು ಸರ್ಕಾರಕ್ಕೆ ಈ ಮಸೂದೆ ಶಿಫಾರಸು ಮಾಡುತ್ತದೆ. ಇದಲ್ಲದೆ, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ದಂಪತಿಗಳಿಗೆ ಸರ್ಕಾರವು ಸರ್ಕಾರಿ ಉದ್ಯೋಗಗಳನ್ನು ನೀಡಬಾರದು ಎಂದು ಕೂಡ ಈ ಮಸೂದೆಯಲ್ಲಿದೆ.

ಗೋರಖ್‌ಪುರ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿ ಸಂಸದ ರವಿ ಕಿಶನ್ ಶುಕ್ರವಾರ ಲೋಕಸಭೆಯಲ್ಲಿ ಜನಸಂಖ್ಯೆ ನಿಯಂತ್ರಣ ಕುರಿತು ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸುವುದಾಗಿ ಹೇಳಿದ್ದಾರೆ. ಈ ಮಸೂದೆಯನ್ನು ಸಂಸದರು ಮಂಡಿಸುತ್ತಾರೆ. ಆದರೆ, ಸರ್ಕಾರದ ಬೆಂಬಲವಿಲ್ಲದೆ ಮಸೂದೆ ಕಾನೂನಾಗುವ ಸಾಧ್ಯತೆಗಳು ಕಡಿಮೆ. 1970ರಿಂದ ಇದುವರೆಗೂ ಯಾವುದೇ ಖಾಸಗಿ ಸದಸ್ಯರ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಗಿಲ್ಲ. ಈ ನಡುವೆ, ಜನಸಂಖ್ಯಾ ನಿಯಂತ್ರಣ ಮಸೂದೆ ಜಾರಿಗೆ ಒತ್ತಾಯಿಸಿರುವ ನಟ ಹಾಗೂ ಸಂಸದ ರವಿ ಕಿಶನ್ ಅನೇಕರ ಟೀಕೆಗೆ ತುತ್ತಾಗಿದ್ದಾರೆ. ಜನಸಂಖ್ಯೆ ನಿಯಂತ್ರಣದ ಬಗ್ಗೆ ಕಾಳಜಿ ಹೊಂದಿರುವ ರವಿ ಕಿಶನ್ ಅವರೇ 4 ಮಕ್ಕಳನ್ನು ಹೊಂದಿದ್ದಾರೆ. ಮೂವರು ಹೆಣ್ಣು ಮಕ್ಕಳು ಮತ್ತು ಒಬ್ಬ ಗಂಡುಮಗ ಇರುವ ರವಿ ಕಿಶನ್ ಜನಸಂಖ್ಯಾ ನಿಯಂತ್ರಣ ಮಸೂದೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅನೇಕರು ಟ್ವಿಟ್ಟರ್​ನಲ್ಲಿ ಟೀಕಿಸಿದ್ದಾರೆ.

ಮುಂದಿನ ವರ್ಷದ ವೇಳೆಗೆ ಭಾರತವು ಚೀನಾವನ್ನು ಮೀರಿಸಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಬಹುದು ಎಂದು ವಿಶ್ವಸಂಸ್ಥೆಯು ಅಂದಾಜು ಮಾಡಿದ ಬೆನ್ನಲ್ಲೇ ಲೋಕಸಭೆಯಲ್ಲಿ ಜನಸಂಖ್ಯೆ ನಿಯಂತ್ರಣದ ಮಸೂದೆಯ ಪ್ರಸ್ತಾಪ ಮಾಡಲಾಗಿದೆ. ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾರತದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ತಡೆಯಲು ಕಾನೂನುಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: India’s Population: 2100ರ ವೇಳೆಗೆ ಭಾರತದ ಜನಸಂಖ್ಯೆ ಎಷ್ಟಾಗಲಿದೆ? ಸಂಶೋಧನೆ ಏನು ಹೇಳುತ್ತೆ?

ಏನಿದು ಜನಸಂಖ್ಯಾ ನಿಯಂತ್ರಣ ಮಸೂದೆ?: ಪ್ರಸ್ತಾವಿತ ಜನಸಂಖ್ಯಾ ನಿಯಂತ್ರಣ ಮಸೂದೆಯು ದಂಪತಿಗಳು ಎರಡಕ್ಕಿಂತ ಹೆಚ್ಚು ಮಕ್ಕಳಿಗೆ ಜನ್ಮ ನೀಡುವುದನ್ನು ತಡೆಯುವ ಗುರಿಯನ್ನು ಹೊಂದಿದೆ. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ದಂಪತಿ ಸರ್ಕಾರಿ ಉದ್ಯೋಗಗಳು ಮತ್ತು ಸರ್ಕಾರವು ಒದಗಿಸುವ ವಿವಿಧ ಸೌಲಭ್ಯಗಳು ಮತ್ತು ಸರಕುಗಳ ಮೇಲಿನ ಸಬ್ಸಿಡಿಗಳಿಗೆ ಅನರ್ಹರಾಗುತ್ತಾರೆ ಎಂದು ಅದು ಹೇಳುತ್ತದೆ.

ಆದರೂ ಎರಡು ಮಕ್ಕಳ ನೀತಿಯನ್ನು 35ಕ್ಕೂ ಹೆಚ್ಚು ಬಾರಿ ಸಂಸತ್ತಿನಲ್ಲಿ ಮಂಡಿಸಲಾಗಿದೆ. ಆದರೆ, ಅದಕ್ಕೆ ಇದುವರೆಗೂ ಎರಡೂ ಸದನಗಳಿಂದ ಹಸಿರು ನಿಶಾನೆ ಸಿಕ್ಕಿಲ್ಲ. ಜನಸಂಖ್ಯಾ ನಿಯಂತ್ರಣ ಮಸೂದೆ, 2019ಯನ್ನು 2022ರಲ್ಲಿ ಹಿಂಪಡೆಯಲಾಯಿತು. 2ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಸರ್ಕಾರದ ಶೈಕ್ಷಣಿಕ ಪ್ರಯೋಜನಗಳು, ಗೃಹ ಸಾಲಗಳು, ಉತ್ತಮ ಉದ್ಯೋಗಾವಕಾಶಗಳು, ಉಚಿತ ಆರೋಗ್ಯ ಸೇವೆ ಮತ್ತು ತೆರಿಗೆ ಕಡಿತಗಳಿಂದ ವಂಚಿತರಾಗುತ್ತಾರೆ ಎಂದು ಈ ಮಸೂದೆಯಲ್ಲಿದೆ.

ಸಂವಿಧಾನ ಏನು ಹೇಳುತ್ತದೆ?: ಸಂವಿಧಾನವು ದಂಪತಿಗಳು ತಮಗೆ ಎಷ್ಟು ಮಕ್ಕಳು ಬೇಕೆಂಬುದನ್ನು ಮುಕ್ತವಾಗಿ ಮತ್ತು ಜವಾಬ್ದಾರಿಯುತವಾಗಿ ಆಯ್ಕೆ ಮಾಡುವ ಮತ್ತು ನಿರ್ಧರಿಸುವ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳುತ್ತದೆ. ಮಕ್ಕಳ ಸಂಖ್ಯೆಯನ್ನು ನಿಯಂತ್ರಿಸುವ ನೀತಿಯು ಆರ್ಟಿಕಲ್ 16 (ಸಾರ್ವಜನಿಕ ಉದ್ಯೋಗದ ವಿಷಯಗಳಲ್ಲಿ ಸಮಾನ ಅವಕಾಶ) ಮತ್ತು ಆರ್ಟಿಕಲ್ 21 (ಜೀವನ ಮತ್ತು ಸ್ವಾತಂತ್ರ್ಯದ ರಕ್ಷಣೆ) ನಂತಹ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎನ್ನಲಾಗಿದೆ.

ಈ ಮಸೂದೆಗೆ ಇರುವ ಸಾಂವಿಧಾನಿಕ ಸವಾಲುಗಳೇನು?: ಈ ಎರಡು ಮಕ್ಕಳ ನೀತಿಯು ವಿಚ್ಛೇದಿತ ದಂಪತಿಗಳ ಹಕ್ಕುಗಳನ್ನು ಮತ್ತು ಇಸ್ಲಾಂನ ತತ್ವಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಕಳೆದ ವರ್ಷ, ಉತ್ತರ ಪ್ರದೇಶ ಕಾನೂನು ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಜನಸಂಖ್ಯೆ ನಿಯಂತ್ರಣದ ಕರಡು ಮಸೂದೆಯನ್ನು ಪ್ರಸ್ತಾಪಿಸಿ, ಸಾರ್ವಜನಿಕರಿಂದ ಸಲಹೆಗಳನ್ನು ಕೇಳಿತ್ತು. ಕರಡು ಮಸೂದೆಯ ಪ್ರಕಾರ, ಉತ್ತರ ಪ್ರದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ದಂಪತಿಗಳು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅಥವಾ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅಥವಾ ಯಾವುದೇ ರೀತಿಯ ಸಹಾಯಧನವನ್ನು ಪಡೆಯಲು ಅನುಮತಿಸುವುದಿಲ್ಲ.

ಇದನ್ನೂ ಓದಿ: World Population Day 2022: ಭಾರತವು ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಲಿದೆ

2017ರಲ್ಲಿ ಅಸ್ಸಾಂ ಅಸೆಂಬ್ಲಿಯಲ್ಲಿ ‘ಅಸ್ಸಾಂನ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ’ಯೊಂದಿಗೆ ಇದೇ ರೀತಿಯ ಕ್ರಮವನ್ನು ಮಾಡಲಾಯಿತು. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಸರ್ಕಾರಿ ಉದ್ಯೋಗಕ್ಕೆ ಅರ್ಹರಲ್ಲ ಎಂದು ಅದು ಹೇಳಿತ್ತು.

ವಿಶ್ವಸಂಸ್ಥೆಯ ಇತ್ತೀಚಿನ ವರದಿಯ ಪ್ರಕಾರ ಭಾರತವು ಮುಂದಿನ ವರ್ಷ ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಲಿದೆ ಎಂದು ಅಂದಾಜಿಸಲಾಗಿದೆ. ಆದರೆ, ವರ್ಲ್ಡ್ ಪಾಪ್ಯುಲೇಶನ್ ಪ್ರಾಸ್ಪೆಕ್ಟ್ಸ್ 2022 ಸಹ ಭಾರತದ ಒಟ್ಟು ಫಲವತ್ತತೆ ದರವು (TFR) 1950 ರಲ್ಲಿ ಪ್ರತಿ ಮಹಿಳೆಗೆ 5.9 ಮಕ್ಕಳಿಂದ 2020ರಲ್ಲಿ ಪ್ರತಿ ಮಹಿಳೆಗೆ 2.2 ಮಕ್ಕಳಿಗೆ ಇಳಿದಿದೆ ಎಂದು ತಿಳಿಸಿದೆ.

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​