ಪೋರ್ಷೆ ಕಾರು ಅಪಘಾತ, ಆರೋಪಿ ವೇದಾಂತ್ ತಂದೆ, ಅಜ್ಜನ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲು

ಪುಣೆ ಪೋರ್ಷೆ ಕಾರು ಅಪಘಾತದ ಆರೋಪಿ ವೇದಾಂತ್ ತಂದೆ ವಿಶಾಲ್ ಅಗರ್ವಾಲ್​ ಹಾಗೂ ಅಜ್ಜನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿದೆ.

ಪೋರ್ಷೆ ಕಾರು ಅಪಘಾತ, ಆರೋಪಿ ವೇದಾಂತ್ ತಂದೆ, ಅಜ್ಜನ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲು
ಕಾರು
Follow us
ನಯನಾ ರಾಜೀವ್
|

Updated on: Jun 07, 2024 | 11:37 AM

ಪುಣೆಯಲ್ಲಿ ನಡೆದ ಪೋರ್ಷೆ ಕಾರು ಅಪಘಾತ(Porsche Car Accident)ದ ಆರೋಪಿ ವೇದಾಂತ್​ ಅಗರ್ವಾಲ್​ ತಂದೆ ಹಾಗೂ ಅಜ್ಜನ ವಿರುದ್ಧ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣವನ್ನು ದಾಖಲಿಸಿದ್ದಾರೆ. ನಗರದಲ್ಲಿ ಉದ್ಯಮಿಯೊಬ್ಬರ ಮಗನ ಆತ್ಮಹತ್ಯೆಗೆ ಪ್ರಚೋದನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.

ಮೇ 19ರಂದು ಪುಣೆಯಲ್ಲಿ 17 ವರ್ಷದ ವೇದಾಂತ್​ ಅಗರ್ವಾಲ್​ ತನ್ನ ಐಷಾರಾಮಿ ಪೋರ್ಷೆ ಕಾರು ಅಪಘಾತ ಮಾಡಿ ಇಬ್ಬರ ಸಾವಿಗೆ ಕಾರಣನಾಗಿದ್ದ. ಚಾಲಕನಿಗೆ ತಾನೇ ಕಾರು ಚಲಾಯಿಸುತ್ತಿದ್ದೆ ಎಂದು ಒಪ್ಪಿಕೊಳ್ಳುವಂತೆ ಎಚ್ಚರಿಕೆ ನೀಡಿದ ಆರೋಪದ ಮೇಲೆ ವೇದಾಂತ್ ಅವರ ಅಜ್ಜನನ್ನು ಬಂಧಿಸಲಾಗಿದೆ.

ಹಾಗೆಯೇ ವೇದಾಂತ್ ರಕ್ತದ ಮಾದರಿಯನ್ನು ಬದಲಿಸಿದ್ದಕ್ಕೆ ವೇದಾಂತ್ ತಂದೆ ವಿಶಾಲ್ ಅಗರ್ವಾಲ್ ಹಾಗೂ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಪಘಾತ ನಡೆದ ಬಳಿಕ ಆರೋಪಿ ವೇದಾಂತ್​ನನ್ನು ಪೊಲೀಸರು ಬಂಧಿಸಿದ್ದರು, ಬಳಿಕ ಬಾಲಾಪರಾಧಿ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ವಿಶಾಲ್​ ಅಗರ್ವಾಲ್​ರನ್ನು ಬಂಧಿಸಿತ್ತು.

ಇದಾದ ಬಳಿಕ ವಿಶಾಲ್ ಅಗರ್ವಾಲ್​ ತಮ್ಮ ಚಾಲಕನನ್ನು ಈ ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ಮಾಡಿದ್ದರು. ಆದರೆ ಬಳಿಕ ಚಾಲಕ ವಿಶಾಲ್ ಅವರ ಹೇಳಿಕೆ ಮೇರೆಗೆ ನಾನು ಪ್ಯಾಸೆಂಜರ್​ ಸೀಟ್​ನಲ್ಲಿ ಕುಳಿತಿದ್ದೆ ವೇದಾಂತ್​ ಕಾರು ಚಲಾಯಿಸುತ್ತಿದ್ದ ಎಂದು ಹೇಳಿಕೆ ನೀಡಿದ್ದರು. ಆತನ ಸ್ನೇಹಿತ ಕೂಡ ವೇದಾಂತ್ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ್ದು ಹೌದು ಎಂದು ಒಪ್ಪಿಕೊಂಡಿದ್ದಾನೆ.

ಮತ್ತಷ್ಟು ಓದಿ: Pune Porsche Crash: ಪೋರ್ಷೆ ಅಪಘಾತ ಪ್ರಕರಣ; ಅಪ್ರಾಪ್ತನ ಬದಲು ತಾಯಿಯ ರಕ್ತದ ಮಾದರಿ ಬದಲಿಸಿದ್ದು ಸಾಬೀತು

ಇದಾದ ಬಳಿಕ ಮಗ ಮದ್ಯ ಸೇವಿಸಿರಲಿಲ್ಲ ಎಂದು ಮಾಡಲು ವೇದಾಂತ್ ರಕ್ತದ ಮಾದರಿ ಜಾಗದಲ್ಲಿ ಬೇರೆ ಮಾದರಿಯನ್ನು ಇರಿಸಲಾಗಿತ್ತು. ಅದರ ಹಿಂದೆ ಆತನ ತಾಯಿಯ ಕೈವಾಡವಿರುವುದು ಸ್ಪಷ್ಟವಾಗಿತ್ತು. ಇದೀಗ ಈ ಪ್ರಕರಣದಲ್ಲಿ ಇಡೀ ಕುಟುಂಬವೇ ಜೈಲುಪಾಲಾದಂತಾಗಿದೆ.

ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವ ಕಾಳೆ ಅವರಿಂದ  ಡಿ.ಎಸ್.ಕಟೂರ್ ಎಂಬ ವ್ಯಕ್ತಿಯ ಮಗ ಶಶಿಕಾಂತ್ ಕಾಟೂರ್ ಎಂಬಾತ ಕಟ್ಟಡ ಕಾಮಗಾರಿಗಾಗಿ ಸಾಲ ಪಡೆದಿದ್ದರು. ಸಕಾಲಕ್ಕೆ ಸಾಲ ಪಾವತಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕಾಳೆ ಅಸಲು ಮೊತ್ತಕ್ಕೆ ಚಕ್ರಬಡ್ಡಿ ಸೇರಿಸಿ ಶಶಿಕಾಂತ್ ಕಾಟೂರೆಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ನಿರಂತರ ಕಿರುಕುಳದಿಂದ ಬೇಸತ್ತು ಶಶಿಕಾಂತ್ ಕಾಟೂರೆ ಈ  ಜನವರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಈ ಪ್ರಕರಣದಲ್ಲಿ ವೇದಾಂತ್​ ತಂದೆ ಹಾಗೂ ಅಜ್ಜ ಭಾಗಿಯಾಗಿದ್ದರು ಎಂದು ಆರೋಪಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ